
ಬೆಂಗಳೂರು[ಫೆ.07]: ಸಚಿವ ಸಂಪುಟ ವಿಸ್ತರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಅವರು ಕೇಂದ್ರ ಬಿಂದುವಾಗಿ ಕಾಣಿಸಿಕೊಂಡರು.
"
ರಾಜಭವನದಲ್ಲಿ ಕೆಲವೇ ಹೊತ್ತು ಇದ್ದರೂ ಕಾರ್ಯಕ್ರಮದಲ್ಲಿ ಗಮನ ಸೆಳೆದರು. ಸಮಾರಂಭಕ್ಕೆ ವಿಜಯೇಂದ್ರ ಆಗಮಿಸುತ್ತಿದ್ದಂತೆ ಬಿಜೆಪಿಯ ನಾಯಕರು ಮತ್ತು ನೂತನ ಸಚಿವರು ಮುಗಿಬಿದ್ದು ಶುಭಾಶಯ ಕೋರಿದರು. ನೂತನ ಸಚಿವರು ಮತ್ತು ಅವರ ಕುಟುಂಬದ ಸದಸ್ಯರ ಬಳಿ ತೆರಳಿ ವಿಜಯೇಂದ್ರ ಯೋಗಕ್ಷೇಮ ವಿಚಾರಿಸಿದರು.
ಸಂಪುಟ ವಿಸ್ತರಣೆ ಕಸರತ್ತಿನಲ್ಲಿ ವಿಜಯೇಂದ್ರ ಕೇಂದ್ರ ಬಿಂದು!
ಕೆಲ ಸಮಯ ಇಡೀ ಸಮಾರಂಭದಲ್ಲಿ ಓಡಾಡಿ ಮುಖಂಡರನ್ನು, ಸಚಿವರಾಗುವವರನ್ನು ಮಾತನಾಡಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆರಂಭವಾಗುವ ಮುನ್ನವೇ ವಿಜಯೇಂದ್ರ ಸ್ಥಳದಿಂದ ನಿರ್ಗಮಿಸಿದರು. ಮೂಲಗಳ ಪ್ರಕಾರ, ವಿಜಯೇಂದ್ರ ಅವರು ದೆಹಲಿಗೆ ತೆರಳಬೇಕಾಗಿದ್ದ ಕಾರಣ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಸ್ಥಳದಿಂದ ತೆರಳಿದರು ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.