
ಬೆಂಗಳೂರು (ಆ.4): ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಇದ್ದೇನೆ. ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಸಂಪುಟ ವಿಸ್ತರಣೆ ಸಮಾರಂಭಕ್ಕೆ ರಾಜಭವನಕ್ಕೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಶಾಸಕರು ಆಕಾಂಕ್ಷಿಗಳು ಇದ್ದಾರೆ. ಅದರಲ್ಲಿ ಬಹಳ ಶಾಸಕರು ಅರ್ಹರಿದ್ದಾರೆ. ಕೆಲ ಸಂದರ್ಭದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. 2004ರಲ್ಲಿ ನನ್ನನ್ನೂ ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಆರಂಭದಲ್ಲಿ ನನ್ನನ್ನು ಮಂತ್ರಿ ಮಾಡಿರಲಿಲ್ಲ. ಆಗ ನಾನು ತಾಳ್ಮೆಯಿಂದ ಇದ್ದೆ. ತಾಳ್ಮೆಯಿಂದ ಇದ್ದ ಕಾರಣಕ್ಕೆ ಇಂದು ನಾನು ಈ ಸ್ಥಾನದಲ್ಲಿ ಇದ್ದೇನೆ. ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ. ಶಾಸಕರು ತಾಳ್ಮೆಯಿಂದ ಇರಬೇಕು ಎಂದು ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.