
ಬೆಂಗಳೂರು (ಮೇ. 6): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಅವರ ಸಂಪುಟಕ್ಕೆ ಸರ್ಜರಿ (Cabinet expansion ) ನಡೆಯುವ ಬಗ್ಗೆ ಬಿಜೆಪಿ ಹೈಕಮಾಂಡ್‌ನಿಂದ ಈಗ ಸಂದೇಶ ಬರಬಹುದು ಆಗ ಸಂದೇಶ ಬರಬಹುದು ಎಂಬ ನಿರೀಕ್ಷೆಯಲ್ಲಿರುವ ರಾಜ್ಯ ನಾಯಕರು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿದೇಶ ಪ್ರವಾಸದಿಂದ ವಾಪಸಾದ ಹಿನ್ನೆಲೆಯಲ್ಲಿ ಏನಾದರೂ ನಿರ್ಧಾರ ಹೊರಬೀಳಬಹುದು ಎಂದು ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ.
ಸಂಪುಟ ಕಸರತ್ತಿನ ಚೆಂಡು ಹೈಕಮಾಂಡ್ ಅಂಗಳದಲ್ಲಿರುವುದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳು ಹಾಗೂ ಸಂಪುಟ ಪುನಾರಚನೆಯಾದರೆ () ಸ್ಥಾನ ಕಳೆದುಕೊಳ್ಳಬೇಕಾಗಬಹುದು ಎಂಬ ಆತಂಕದಲ್ಲಿರುವ ಸಚಿವರು ದೆಹಲಿಯತ್ತ ನೋಟ ಹರಿಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಹೂಡಿಕೆದಾರರನ್ನು ಆಹ್ವಾನಿಸುವ ಸಂಬಂಧ ಇದೇ ತಿಂಗಳ 10ರಂದು ದೆಹಲಿಗೆ ತೆರಳಲಿದ್ದಾರೆ. ಎರಡು ದಿನಗಳ ಕಾಲ ವಾಸ್ತವ್ಯ ಹೂಡುವ ಸಾಧ್ಯತೆಯಿರುವುದರಿಂದ ಆ ವೇಳೆ ವರಿಷ್ಠರೊಂದಿಗೆ ಮಾತುಕತೆ ನಡೆಯಬಹುದು ಎಂಬ ಮಾತೂ ಕೇಳಿಬರುತ್ತಿದೆ.
ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಪ್ರಧಾನಿ ಮೋದಿ ಅವರು ವಿದೇಶ ಪ್ರವಾಸದಿಂದ ವಾಪಸಾದ ಬಳಿಕ ಮಾತುಕತೆ ನಡೆಸಿ ಸಂಪುಟ ಕುರಿತು ನಿರ್ಣಯ ತಿಳಿಸುವುದಾಗಿ ರಾಜ್ಯ ನಾಯಕರಿಗೆ ಹೇಳಿದ್ದರು ಎನ್ನಲಾಗಿದೆ. ಹೀಗಾಗಿ, ನಿರ್ಣಯ ತಕ್ಷಣಕ್ಕೇ ಕೈಗೊಳ್ಳಲಾಗುತ್ತದೆಯೋ ಅಥವಾ ಇನ್ನಷ್ಟುಕಾಲ ಮುಂದೂಡಲ್ಪಡುತ್ತದೆಯೋ ಎಂಬುದು ಕುತೂಹಲಕರವಾಗಿದೆ.
ರಾಜ್ಯ ಪದಾಧಿಕಾರಿಗಳ ಸಭೆಯನ್ನು ಅಮಿತ್ ಶಾ ರದ್ದುಪಡಿಸಿದ್ದು ಏಕೆ?: ಚುನಾವಣಾ ತಯಾರಿಯ ಕುರಿತು ರಾಜ್ಯ ಘಟಕ ಇನ್ನೂ ವರದಿ ಕೊಟ್ಟಿಲ್ಲ, ಈಗಲೂ ನಾನೇ ಮೋರ್ಚಾ ಅಧ್ಯಕ್ಷರ ಜತೆ ಕೂರಬೇಕೆ ಎಂದು ಅಮಿತ್ ಶಾ ಸಿಟ್ಟಿನಿಂದ ಹೇಳಿದರು. ಹೀಗಾಗಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ರದ್ದಾಯಿತು.
ವಿಧಾನಸೌಧದೆದುರು ಕೆ.ಸಿ.ರೆಡ್ಡಿ ಪ್ರತಿಮೆ ಶೀಘ್ರ ಬದಲಾವಣೆ: ಸಿಎಂ
ಬೆಂಗಳೂರು (ಮೇ.6): ವಿಧಾನಸೌಧ ಆವರಣದಲ್ಲಿರುವ ಮಾಜಿ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ಶೀಘ್ರ ಬದಲಾಯಿಸಲಾಗುವುದು. ಈಗಾಗಲೇ ನೂತನ ಪ್ರತಿಮೆ ಸಿದ್ಧವಾಗಿದ್ದು, ಇಂದೇ ಕಾರ್ಯಾದೇಶ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
120ನೇ ಜನ್ಮದಿನದ ಹಿನ್ನೆಲೆಯಲ್ಲಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು,ಈ ಹಿಂದೆಯೇ ಅವರ ಪ್ರತಿಮೆ ಅನಾವರಣ ಮಾಡಬೇಕಿತ್ತು, ಆದರೆ ನಾನಾ ಕಾರಣಗಳಿಂದ ವಿಳಂಬವಾಗಿದೆ. ಹೊಸ ಪ್ರತಿಮೆ ಅಳವಡಿಸುವ ಸಂಬಂಧ ತಾವು ಇಂದೇ ಕಾರ್ಯಾದೇಶ ನೀಡುವುದಾಗಿ ತಿಳಿಸಿದರು.
ಖರ್ಗೆ ರೀತಿ ಬಿಜೆಪಿಗರಿಗೂ ನೋಟಿಸ್ ನೀಡಿ ಎಂದ ಡಿಕೆಶಿ!
ರಾಜ್ಯದ ಅಭಿವೃದ್ಧಿಗೆ ಬುನಾದಿ ಹಾಕಿದವರಲ್ಲಿ ಕೆ.ಸಿ. ರೆಡ್ಡಿ ಪ್ರಮುಖರಾಗಿದ್ದಾರೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾರ್ವಜನಿಕ ಉದ್ಯಮಗಳು ಬೆಳೆಯುವಲ್ಲಿ ಅವರ ಪಾತ್ರ ವಿಶೇಷವಾಗಿದೆ. ಅವರ ದೂರದೃಷ್ಟಿಯ ಆಡಳಿತದಿಂದಾಗಿ ರಾಜ್ಯ ಹಲವು ಕ್ಷೇತ್ರಗಳಲ್ಲಿ ಮಾದರಿಯಾಗಿದೆ. ನಮ್ಮ ಸರ್ಕಾರ ಅವರ ಆಡಳಿತದ ದೂರದೃಷ್ಟಿಯನ್ನು ಅಳವಡಿಸಿಕೊಂಡಿದೆ. ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಬೊಮ್ಮಾಯಿ ಸ್ಮರಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್,ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕೆ.ಸಿ ರೆಡ್ಡಿ ಅವರ ಸಂಬಂಧಿ ಕವಿತಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಶಾಸಕ ಅರವಿಂದ ಬೆಲ್ಲದ ಅಕ್ರಮಗಳನ್ನು ಬಯಲಿಗೆ ಎಳೆಯುವೆ: ನಾಗರಾಜ್ ಗೌರಿ
ಕರೆ ಬಂದ ತಕ್ಷಣ ದೆಹಲಿಗೆ: ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದೆಹಲಿಗೆ ಹೋದ ನಂತರ ಸಂಪುಟ ವಿಸ್ತರಣೆ ಬಗ್ಗೆ ತಿಳಿಸುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅವರಿಂದ ಕರೆ ಬಂದ ತಕ್ಷಣ ದೆಹಲಿಗೆ ಹೋಗುತ್ತೇನೆ ಎಂದಷ್ಟೇ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.