ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟ ಬಿಎಸ್ ಯಡಿಯೂರಪ್ಪ

By Suvarna News  |  First Published Nov 30, 2020, 3:11 PM IST

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿಎಂ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಇದಕ್ಕೆ ಸಂಬಂಧವಿಲ್ಲ ಎಂದು ಹೇಳಿದ್ದಾರೆ.


ಬೆಂಗಳೂರು, (ನ.30): ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಡಿ.22 ಹಾಗೂ ಡಿ.27 ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಇದರ ಮಧ್ಯೆಯೇ ಬಹುದಿನಗಳಿಂದ ಚಾತಕ ಪಕ್ಷಿಗಳಂತೆ ಕಾದು ಕುಳಿತಿರುವ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

Latest Videos

undefined

ಸಿಎಂ ಕಚೇರಿ ಕೃಷ್ಣದಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಇನ್ನು ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತೇನೋ ನೋಡೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಮಿಕ‌ವಾಗಿ ಹೇಳಿದರು.

ಕಳಂಕದ ಖೆಡ್ಡಕ್ಕೆ ಬೀಳುತ್ತಿದೆ ಕಮಲ: 2008ರ ತಪ್ಪನ್ನೇ ಪುನರಾವರ್ತಿಸ್ತಿದ್ಯಾ ರಾಜ್ಯ ಬಿಜೆಪಿ ..?

 ಗ್ರಾಮ ಪಂಚಾಯ್ತಿ ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದೆ. ಅಭಿವೃದ್ಧಿ ಕೆಲಸ, ಇತರ ಚಟುವಟಿಕೆ ಮಾಡುವಂತಿಲ್ಲ ಎಂದರು.

ಪಂಚಾಯ್ತಿ ಚುನಾವಣೆ ಪಕ್ಷಾತೀತವಾಗಿ ನಡೆದರೂ ಯಾರು ಯಾವ ಪಕ್ಷದವರು ಎಂಬುದು ಗೊತ್ತಾಗುತ್ತದೆ. ಸಂಘಟನೆ ದೃಷ್ಟಿಯಿಂದ ಪಂಚಾಯ್ತಿ ಚುನಾವಣೆಯೂ ಮುಖ್ಯ. ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕಾದರೆ ಒಳ್ಳೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು. ಇದು ಲೋಕಸಭೆ, ವಿಧಾನಸಭೆ ಚುನಾವಣೆಯಷ್ಟೇ ಮಹತ್ವವಾದುದು ಎಂದು  ಹೇಳಿದರು.

ಇದೀಗಾಗಲೇ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ತಂಡಗಳು ಪ್ರವಾಸ ಮಾಡುತ್ತಿದೆ, ಈಗಾಗಲೇ ಗ್ರಾಮ ಸ್ವಾರಾಜ್ ಸಮಾವೇಶಗಳನ್ನು ಮಾಡುತ್ತಿದ್ದೇವೆ. ಪಕ್ಷದ ಸಂಘಟನೆಯತ್ತ ಹೆಚ್ಚು ಗಮನ ಹರಿಸುತ್ತೇವೆ ಎಂದು ಎಂದು ತಿಳಿಸಿದರು.

click me!