ಗ್ಯಾರಂಟಿ ಭರವಸೆಗಳ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ಸಚಿವ ಸಂಪುಟ ಸಭೆ ಹಿನ್ನೆಲೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಶಿವಮೊಗ್ಗ ಭೇಟಿ ರದ್ದಾಗಿದೆ. ಈ ಹಿನ್ನೆಲೆ ಮೇ 31ರಂದು ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳು, ಸಭೆಗಳನ್ನು ರದ್ದುಗೊಳಿಸಲಾಗಿದೆ.
ಶಿವಮೊಗ್ಗ (ಮೇ.31) : ಗ್ಯಾರಂಟಿ ಭರವಸೆಗಳ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ಸಚಿವ ಸಂಪುಟ ಸಭೆ ಹಿನ್ನೆಲೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಶಿವಮೊಗ್ಗ ಭೇಟಿ ರದ್ದಾಗಿದೆ. ಈ ಹಿನ್ನೆಲೆ ಮೇ 31ರಂದು ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳು, ಸಭೆಗಳನ್ನು ರದ್ದುಗೊಳಿಸಲಾಗಿದೆ.
ವಿಧಾನಸಭೆ ಚನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿ ಭರವಸೆಗಳ ಈಡೇರಿಕೆ ಸಂಬಂಧ ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಇದರ ಪೂರ್ವಭಾವಿಯಾಗಿ ಹಲವು ಸಭೆಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರ ಶಿವಮೊಗ್ಗ ಭೇಟಿ ರದ್ದಾಗಿದೆ ಎಂದು ತಿಳಿದುಬಂದಿದೆ.
ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಎರಡು ದಿನದಲ್ಲಿ ನಿರ್ಧಾರ?: ಸಚಿವ ಮಧು ಬಂಗಾರಪ್ಪ
ಸಚಿವರಾದ ಮೇಲೆ ಮಧು ಬಂಗಾರಪ್ಪ ಮೇ 31ರಂದು ಮೊದಲ ಬಾರಿ ಜಿಲ್ಲೆಗೆ ಆಗಮಿಸಲಿದ್ದರು. ಹಾಗಾಗಿ, ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ, ಅಭಿನಂದನಾ ಸಮಾರಂಭ ಆಯೋಜಿಸಿದ್ದರು. ಇದಕ್ಕಾಗಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದವು. ಶಾಲೆಗಳು ಪುನಾರಂಭ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಮಲವಗೊಪ್ಪದ ಸರ್ಕಾರಿ ಶಾಲೆಗೆ ಭೇಟಿ ನೀಡಬೇಕಿತ್ತು. ಮಧ್ಯಾಹ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಅನೌಪಚಾರಿಕ ಸಭೆ ಆಯೋಜಿಸಲಾಗಿತ್ತು. ಈಗ ಪ್ರವಾಸ ರದ್ದಾಗಿರುವುದರಿಂದ ಎಲ್ಲ ಕಾರ್ಯಕ್ರಮಗಳು ರದ್ದಾಗಿದೆ.
ಸೊರಬ ಕ್ಷೇತ್ರದಲ್ಲಿ ಸಚಿವ ಮಧು ಬಂಗಾರಪ್ಪಗೆ ಹೆಜ್ಜೆ ಹೆಜ್ಜೆಗೂ ಸವಾಲು!