ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪತ್ರ ಅಭಿಯಾನ, ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ ಪತ್ರ ಅಭಿಯಾನ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡದಂತೆ ಪತ್ರ ಅಭಿಯಾನ, ಪ್ರಧಾನಿ ಮೋದಿ, ನಡ್ಡಾ, ವಿಜಯೇಂದ್ರಗೆ ಪತ್ರ ಬರೆಯುತ್ತಿರುವ ಕಾರ್ಯಕರ್ತರು.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು(ಫೆ.21): ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಚುನಾವಣೆಯಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಬದಲಿಗೆ ಬೇರೊಬ್ಬರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಹಲವಾರು ಪತ್ರಗಳನ್ನು ರವಾನಿಸಲಾಗಿದೆ.ಇಂದು ಚಿಕ್ಕಮಗಳೂರು ನಗರದ ಪ್ರಧಾನ ಅಂಚೆ ಕಚೇರಿಬಳಿ ಅಂಚೆ ಪೆಟ್ಟಿಗೆಗೆ ಪತ್ರಗಳನ್ನು ಹಾಕುವ ಮೂಲಕ ಪೋಸ್ಟ್ ಮಾಡಲಾಯಿತು. ಜೆ.ಪಿ.ನಡ್ಡಾ ಸೇರಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿಳಾಸಕ್ಕೂ ಪತ್ರಗಳನ್ನು ಕಳಿಸಿಕೊಡಲಾಗಿದೆ.
undefined
ಕಳೆದ ಲೋಕಸಭೆ ಚುನಾವಣೆ ವೇಳೆ ಗೋಬ್ಯಾಕ್ ಶೋಭಾ ಅಭಿಯಾನ :
ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡದಂತೆ ಕಳೆದ ಕೆಲವು ತಿಂಗಳ ಹಿಂದೆಯೇ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಾರ್ಯಕರ್ತರು ಸಭೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದರ ಬೆನ್ನಲೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಅಮಿತ್ ಶಾ ಅವರಿಗೆ ಅಂಚೆ ಮೂಲಕ ಪತ್ರ ರವಾನಿಸಿದ್ದಾರೆ.ಶೋಭಾ ಕರಂದ್ಲಾಜೆ ಸ್ಪರ್ಧೆ ವಿರುದ್ದ ಕಳೆದ ಲೋಕಸಭೆ ಚುನಾವಣೆ ವೇಳೆ ಗೋಬ್ಯಾಕ್ ಶೋಭಾ ಅಭಿಯಾನ ನಡೆಸ ಲಾಗಿತ್ತು. ಕೆಲವು ದಿನಗಳ ಬಳಿಕ ಅಭಿಯಾನ ತೆರೆಮರೆ ಸರಿದಿತ್ತು.ಶೋಭಾ ಕರಂದ್ಲಾಜೆ ಬಿಜೆಪಿ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿ ಯಾಗಿ ಎರಡನೇ ಬಾರಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿ ಮೋದಿ ಸಂಪುಟದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾದರು.
ಕಾಡಾನೆ ದಾಳಿಗೆ ಸಾವನ್ನಪ್ಪಿದ ಕೇರಳ ವ್ಯಕ್ತಿಗೆ ಕೆಪಿಸಿಸಿಯಿಂದ 15 ಲಕ್ಷ ಪರಿಹಾರ ಕೊಡಿ: ಸಿಟಿ ರವಿ ಆಕ್ರೋಶ
ಹೊಸ ಮುಖಕ್ಕೆ ಟಿಕೆಟ್ ಒತ್ತಾಯ :
ಶೋಭಾ ಕರಂದ್ಲಾಜೆ ಎರಡು ಬಾರಿ ಆಯ್ಕೆಯಾಗಿದ್ದು ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿಲ್ಲ. ಈ ಹಿನ್ನಲೆಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡ ಬಾರದು. ಹೊಸ ಮುಖಕ್ಕೆ ಟಿಕೆಟ್ ನೀಡಬೇಕು ಎಂದು ಪತ್ರ ಬರೆದಿದ್ದಾರೆ.ಲೋಕಸಭೆ ಚುನಾವಣೆ ಘೋಷಣೆ ಬಾಕಿ ಇದೆ. ಉಡುಪಿ -ಚಿಕ್ಕಮಗಳೂರು ಕ್ಷೇತ್ರದಿಂದ ಕೆಲವು ಹೆಸರುಗಳು ಕೇಳಿ ಬರುತ್ತಿದ್ದು ತರೆಮರೆಯಲ್ಲಿ ಬಾರೀ ಕಸರತ್ತು ನಡೆಯುತ್ತಿದೆ. ತುಮಕೂರು ಮತ್ತು ಜಿಲ್ಲೆಯ ನರಸಿಂಹರಾಜಪುರ ತಾಲೂಕಿ ನಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನುವಪಾಲಿಸಿ ತೀರ್ಮಾನಕ್ಕೆ ಬದ್ದವಾಗಿದ್ದೇನೆ ಎಂದಿದ್ದಾರೆ.ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು ಯಾವ ಪಕ್ಷದ ವರಿಗೆ ಉಡುಪಿ-ಚಿಕ್ಕಮಗ ಳೂರು ಕ್ಷೇತ್ರದ ಟಿಕೆಟ್ ಎಂದು ಖಾತ್ರಿಯಾಗಿಲ್ಲ. ಸ್ವ ಪಕ್ಷದ ಕಾರ್ಯಕರ್ತರೇ ಈ ನಡುವೆ ಶೋಭಾ ಕರಂದ್ಲಾಜೆ ವಿರುದ್ದ ಹೈಕಮಾಂಡ್ ಗೆ ಪತ್ರ ರವಾನಿಸಿರುವುದು ಬಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಪತ್ರಗಳನ್ನು ಚಿಕ್ಕಮಗಳೂರು ನಗರ ಸೇರಿದಂತೆ, ಗ್ರಾಮಾಂತರದ ಕೆಲವು ವಿಳಾಸಗಳ ಹೆಸರಲ್ಲಿ ಪೋಸ್ಟ್ ಮಾಡಲಾಗಿದೆ ಆದರೂ ಪಕ್ಷದಲ್ಲಿ ತಮಗಿರುವ ಜವಾಬ್ದಾರಿ ಅಥವಾ ಕಾರ್ಯಕರ್ತರು ಎನ್ನುವ ಬಗ್ಗೆ ಎಲ್ಲಿಯೂ ನಮೂದಿಸಲಾಗಿಲ್ಲ. ಶೋಭಾ ಕರಂದ್ಲಾಜೆ ಅವರನ್ನು ಎರಡು ಬಾರಿ ಸಂಸದರಾಗಿ ಆಯ್ಕೆ ಮಾಡಲಾಗಿದೆ. ಅವರಿಂದ ನಿರೀಕ್ಷಿತ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಈ ಕಾರಣಕ್ಕೆ ಈ ಬಾರಿ ಚುನಾವಣೆಯಲ್ಲಿ ಬೇರೊಬ್ಬರಿಗೆ ಟಿಕೆಟ್ ನೀಡಬೇಕು ಎಂದು ಪತ್ರದಲ್ಲಿ ಬರೆಯಲಾಗಿದೆ.