ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ಯಾವಾಗ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆ ಆರಂಭವಾಗಿದೆ.
ಬೆಂಗಳೂರು (ಜೂ.5): ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಡಾ। ಕೆ.ಸುಧಾಕರ್ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ವಿರುದ್ದ 1,62,099 ಮತಗಳ ಗೆಲುವು ದಾಖಲಿಸಿ ಸಂಸತ್ ಗೆ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ಯಾವಾಗ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆಗಳು ಜೋರಾಗಿಯೇ ಇದೆ.
ಏನೇ ಮಾಡಿದರೂ ಸುಧಾಕರ್ ಈ ಚುನಾವಣೆಯಲ್ಲೂ ಗೆಲ್ಲಲ್ಲ ಎಂದು ಪ್ರದೀಪ್ ಈಶ್ವರ್ ಭವಿಷ್ಯ ಹೇಳುತ್ತಲೇ ಇದ್ದರು. ಮಾತ್ರವಲ್ಲ ಸುಧಾಕರ್ ಗೆದ್ದರೆ ರಾಜೀನಾಮೆ ನೀಡುತ್ತೇನೆ ಎಂದು ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರದ ವೇಳೆ ಹೇಳಿಕೆ ನೀಡಿದ್ದರು. ಹಾಗಾಗಿಯೇ ಈ ಕ್ಷೇತ್ರ, ಸುಧಾಕರ್ ಮತ್ತು ಪ್ರದೀಪ್ ನಡುವಿನ ಪರೋಕ್ಷ ಜಿದ್ಜಾಜಿದ್ದಿಗೆ ಕಾರಣವಾಗಿತ್ತು.
undefined
ಹೀನಾಯ ಸೋಲಿನ ಬಳಿಕ ಚನ್ನಪಟ್ಟಣ ಬೈ ಎಲೆಕ್ಷನ್ ಮೇಲೆ ಕಣ್ಣಿಟ್ಟ ಡಿಕೆ ಬ್ರದರ್ಸ್!
ಲೋಕಸಭಾ ಚುನಾವಣೆಯಲ್ಲಿ ಡಾ.ಸುಧಾಕರ್ ಒಂದು ಮತದ ಅಂತರದಿಂದ ಗೆದ್ದರೂ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಾಸಕ ಈಶ್ವರ್ ಪ್ರದೀಪ್ ಬೆಂಗಳೂರಿನಲ್ಲಿ ಹೇಳಿದ್ದರು. ಸುಧಾಕರ್ ಭರ್ಜರಿ ಗೆಲುವು ದಾಖಲಿಸಿದ್ದು, ತಕ್ಷಣ ಪ್ರದೀಪ್ ರಾಜೀನಾಮೆ ಸಲ್ಲಿಸಬೇಕೆಂದು ಸುಧಾಕರ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ತರಹೇವಾರಿ ಮೀಮ್ಸ್, ಕಮೆಂಟ್, ಟ್ರೋಲ್ ಮಾಡುತ್ತಿದ್ದಾರೆ.
ಇಂದೋರ್ ನಲ್ಲಿ ಬರೋಬ್ಬರಿ 2 ಲಕ್ಷ ನೋಟಾ, 1 ಮಿಲಿಯನ್ ಅಂತರದಲ್ಲಿ ಗೆದ್ದು ಬೀಗಿದ ಬಿಜೆಪಿ ಲಾಲ್ವಾನಿ ಇತಿಹಾಸ!
ಮೈಸೂರು - ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಸುಧಾಕರ್ ಗೆದ್ದ ಬೆನ್ನಲ್ಲೇ, 'Breaking News: ಇನ್ನು ಕೆಲವೇ ಗಂಟೆಗಳಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ!' ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
Breaking News: ಇನ್ನು ಕೆಲವೇ ಗಂಟೆಗಳಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ! pic.twitter.com/JtzJtU8qFN
— Pratap Simha (Modi Ka Parivar) (@mepratap)