ಮುಂದಿನ ಶೈಕ್ಷಣಿಕ ವರ್ಷಕ್ಕೆ ಎನ್‌ಇಪಿ ರದ್ದು: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Aug 15, 2023, 1:40 AM IST

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 


ಬೆಂಗಳೂರು (ಆ.15): ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್‌ಇಪಿ ರದ್ದುಗೊಳಿಸಲು ಅಗತ್ಯವಿರುವ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಪ್ರಸ್ತುತ ವರ್ಷದಲ್ಲಿ ನಾವು ಅಧಿಕಾರಕ್ಕೆ ಬರುವ ವೇಳೆಗೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿತ್ತು. ಈ ಹಂತದಲ್ಲಿ ವಿದ್ಯಾರ್ಥಿಗಳು ಗೊಂದಲ ಆಗಬಾರದು ಎಂಬ ಕಾರಣಕ್ಕೆ ಈ ವರ್ಷ ಹಾಗೆಯೇ ಮುಂದುವರೆಸಿದ್ದೇವೆ ಎಂದರು.

ಇನ್ನು ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು ಎನ್‌ಇಪಿ ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಪ್ರಸ್ತುತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಎನ್‌ಇಪಿಗೆ ದೇಶಾದ್ಯಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ಉಪನ್ಯಾಸಕರು, ಶಿಕ್ಷಕರ ವಿರೋಧವಿದೆ. ಹೀಗಿದ್ದರೂ ದೇಶಾದ್ಯಂತ ಎನ್‌ಇಪಿ ಜಾರಿಗೊಳಿಸದೆ ಬಿಜೆಪಿಯು ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿದೆ. ತನ್ಮೂಲಕ ರಾಜ್ಯದ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದು ಕಿಡಿಕಾರಿದರು.

Tap to resize

Latest Videos

ಸೇವಾ ಮನೋಭಾವದ ವೈದ್ಯರು ಸಂಖ್ಯೆ ಹೆಚ್ಚಾಗಲಿ: ಸಚಿವ ಪರಮೇಶ್ವರ್‌

ಮನುವಾದಿಗಳು ನಾಗಪುರದಲ್ಲಿ ರಚಿಸಿರುವ ಪಠ್ಯವನ್ನು ಮಕ್ಕಳು ಓದುವಂತಾಗಬಾರದು. ಮನುವಾದ ಅಪಾಯಕಾರಿ. ಮನುವಾದದ ಪ್ರಕಾರ ಆಗ ಮೇಲ್ಜಾತಿಯವರು ಅತ್ಯಾಚಾರ ಮಾಡಿದರೂ ಶಿಕ್ಷೆಯಿರಲಿಲ್ಲ. ಅದೇ ತಪ್ಪು ಕೆಳ ವರ್ಗದವರು ಮಾಡಿದರೆ ಕ್ರೂರ ಶಿಕ್ಷೆ. ಸಂವಿಧಾನ ಬಂದ ಬಳಿಕ ವರ್ಗವಾರು ಕಾನೂನು ರದ್ದಾಗಿದೆ. ಹೀಗಾಗಿ ಮತ್ತೆ ಮನುವಾದದ ಕಡೆ ಹೋಗುವುದು ಬೇಡ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

click me!