
ಬೆಂಗಳೂರು, (ಮಾ.16): ರಾಸಲೀಲೆ ಸಿ.ಡಿ. ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ತಲೆ ಎತ್ತಿ ಓಡಾಡದ ಸ್ಥಿತಿ ನಿರ್ಮಾಣವಾಗಿದೆ.
ಇದರ ಮಧ್ಯೆ ಕನ್ನಡಿಗರಿಗೆ ಅವಾಚ್ಯ ಪದವನ್ನು ಬಳಸಿದ್ದಾರೆ ಎಂದು ಆರೋಪಿಸಿ ಕನ್ನಡಿಗರ ರಕ್ಷಣಾ ವೇದಿಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ್ದಾರೆ.
ಜಾರಕಿಹೊಳಿ ಸಿ.ಡಿ. ಕೇಸ್: ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ!
ಹೌದು....ಯುವತಿಯೊಂದಿಗಿನ ರಾಸಲೀಲೆ ವೇಳೆ ರಮೇಶ್ ಜಾರಕಿಹೊಳಿ ಅವರು ಕನ್ನಡಿಗರ ಬಗ್ಗೆ ಅವಹೇಳನ ಮಾತುಗಳನ್ನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ, ಕರ್ನಾಟಕದಲ್ಲಿ ಬೆಳೆದು ಅಪಮಾನ ಮಾಡುವುದು ಅವರಿಗೆ ಶೋಭೆಯಲ್ಲ ಎಂದು ಹೇಳಿರುವ ಕನ್ನಡಿಗರ ರಕ್ಷಣಾ ವೇದಿಕೆ ಸದಸ್ಯರು ಸರ್ಕಾರ ಈ ಕೂಡಲೇ ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.