Congress Padayatra ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೈ ನಾಯಕರಿಗೆ ಬಿಗ್ ಶಾಕ್!

By Suvarna NewsFirst Published Jan 15, 2022, 5:21 PM IST
Highlights

* ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ
* ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೈ ನಾಯಕರಿಗೆ ಬಿಗ್ ಶಾಕ್!
* ಹಾಸನ ಕಾಂಗ್ರೆಸ್ ನಾಯಕರ ವಿರುದ್ಧ ಕೇಸ್‌ ಬುಕ್

ಹಾಸನ, (ಜ.15): ಕೊರೋನಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ (Congress Mekedatu Padayatra) ಅರ್ಧದಲ್ಲಿಯೇ ಸ್ಥಗಿತಗೊಳಿಸಿದ್ದು, ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ರಾಮನಗರದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಯಲಿದೆ.

ಇನ್ನು ಕೊರೋನಾ ನಿಯಮಗಳನ್ನು ಮೀರಿ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಹಾಸನ(Hassan) ಜಿಲ್ಲೆಯಿಂದ ತೆರಳಿದ್ದ ಕಾಂಗ್ರೆಸ್‌ ನಾಯಕ (Hassan Congress Leaders) ವಿರುದ್ದ ಕೇಸ್ ಬುಕ್ ಆಗಿದೆ.

Mekedatu Padayatre: ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ಯಾಕೆ ಡಿಕೆಶಿ.?

ಜನವರಿ 12ರಂದು ಜಿಲ್ಲೆಯಿಂದ 6 ಸಾವಿರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಾದಯಾತ್ರೆಗೆ ತೆರಳಿದ್ದರು. ಪೊಲೀಸರು ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕೇಸ್ ದಾಖಲಿಸಿದ್ದು, ಹಾಸನ ನಗರ, ಬಡಾವಣೆ, ಪೆನ್ಷನ್ ಮೊಹಲ್ಲಾ, ಹೊಳೆನರಸೀಪುರ, ಚನ್ನರಾಯಪಟ್ಟಣ ತಾಲೂಕಿನ ಠಾಣೆಗಳಲ್ಲಿ ಕೇಸ್ ದಾಖಲಿಸಿದ್ದಾರೆ.

ಕೋವಿಡ್ ಮಾರ್ಗಸೂಚಿಗೆ ವಿರುದ್ಧವಾಗಿ ಜನರನ್ನು ಸೇರಿಸಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲಿಸದೆ, ನಿರ್ಲಕ್ಷ್ಯ ವಹಿಸಿರುವ ಕಾರ್ಯಕರ್ತರನ್ನು ಕರೆದೊಯ್ದ ನಾಯಕರ ವಿರುದ್ಧ ಪ್ರಕರಣಗಳು ದಾಖಲಾಗಿದೆ. ಮಾಜಿ ಎಂಎಲ್‍ಸಿ ಗೋಪಾಲಸ್ವಾಮಿ, ಮಾಜಿ ಶಾಸಕ ಪುಟ್ಟೇಗೌಡ, ಬಾಗೂರು ಮಂಜೇಗೌಡ, ಕೃಷ್ಣೇಗೌಡ ನೇತೃತ್ವದಲ್ಲಿ ಸುಮಾರು 300 ವಾಹನದಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರು. ಸದ್ಯ ಎಲ್ಲರ ಮೇಲೆ ಕೇಸ್ ದಾಖಲಾಗಿದ್ದು, ಕೊರೊನಾ ನಿಯಮ ಮೀರಿ ವರ್ತಿಸಿದ್ದಾರೆಂದು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 ಕೋವಿಡ್ ನಿಯಮ ಉಲ್ಲಂಘನೆ ಆರೋಪದಲ್ಲಿ ಕೇಸ್ ದಾಖಲಿಸಿದ ಪೊಲೀಸರ ವಿರುದ್ಧ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. 

ಒಟ್ಟಾರೆ, ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿದ್ದ ಮೇಕೆದಾಟು ಪಾದಯಾತ್ರೆ, ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಅರ್ಧದಲ್ಲಿಯೇ ಮೊಟಕುಗೊಂಡಿದೆ. ರಾಜ್ಯದ ನಾನಾ ಭಾಗದಿಂದ ಲಕ್ಷಾಂತರ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ನೀರಿಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಕೋರ್ಟ್‌ ಆಕ್ರೋಶಗೊಂಡಿದ್ದರಿಂದ ಕಾಂಗ್ರೆಸ್ ರಾಮನಗರದಲ್ಲಿ ಪಾದಯಾತ್ರೆ ನಿಲ್ಲಿಸಿದ್ದು, ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ರಾಮನಗರದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಯಲಿದೆ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೈಕೋರ್ಟ್ ಛೀಮಾರಿ ಹಾಕಿತ್ತು 
ಕೊರೋನಾ ಆತಂಕದ ಮಧ್ಯೆ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಡೆಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ತೀವ್ರ ಅಸಮಾಧಾನ ಹೊರ ಹಾಕಿತ್ತು. ಸರ್ಕಾರದ ಮಾರ್ಗಸೂಚಿ ಪಾಲಿಸಲು ಕೆಪಿಸಿಸಿ ಏನು ಕ್ರಮ ಕೈಗೊಂಡಿದೆ ಎಂದೂ ಕಾಂಗ್ರೆಸ್​ ಪಕ್ಷವನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ನೇತೃತ್ವದ ಪೀಠ ಪ್ರಶ್ನಿಸಿತ್ತು. ಅಲ್ಲದೇ ಈ ಬಗ್ಗೆ ವರದಿ ನೀಡುವಂತೆ ತಿಳಿಸಿ ವಿಚಾರಣೆ ಜ.14ಕ್ಕೆ ಮುಂದೂಡಿತ್ತು.

ಕೆಪಿಸಿಸಿ ಲೀಗಲ್ ಸೆಲ್ ಅಧ್ಯಕ್ಷಗೆ ಬುಲಾವ್ ಹೋಗಿತ್ತು. ಲೀಗಲ್ ಸೆಲ್ ಅಧ್ಯಕ್ಷ ವಕೀಲ ಎ.ಎಸ್ ಪೊನ್ನಣ್ಣಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಿಂದ ಕರೆ ಹೋಗಿದ್ದು ರಾಮನಗರಕ್ಕೆ ಕರೆಸಿಕೊಂಡು ಮಾತನಾಡಿದ್ದರು. ಹೈಕೋರ್ಟ್​ನಿಂದ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ವರದಿ ಕೇಳಿತ್ತು.

ಕೋರ್ಟ್ ಆದೇಶಕ್ಕೆ ಗೌರವ ಕೊಡ್ತೇವೆ ಎಂದ ಸಿದ್ದು
ಒಂದು ವೇಳೆ ಕೋರ್ಟ್ ಪಾದಯಾತ್ರೆ ನಿಲ್ಲಿಸುವಂತೆ ಹೇಳಿದ್ರೆ, ನಾವು ಪಾಲಿಸುತ್ತೇವೆ. ಕಾನೂನಿಗೆ ಗೌರವ ಕೊಡುತ್ತೇವೆ ಎಂದು ವಿರೋಧ ಪಕಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೋರ್ಟ್ ಏನು ಹೇಳುತ್ತೆ ಎನ್ನುವುದನ್ನು ನೋಡೋಣಾ/ ಅಲ್ಲಿಯವರೆಗೆ ಪಾದಯಾತ್ರೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

click me!