ಯಾವುದೇ ರೀತಿಯ ಪೂರ್ವ ತಯಾರಿ ಇಲ್ಲದೆ ಜಾತಿ ಗಣತಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಸಲ್ಲಿಸಿದ ಜಾತಿ ಗಣತಿ ವರದಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವರದಿ ವಾಸ್ತವಿಕವಾಗಿಲ್ಲ ಎಂದು ನಮಗಿಂತ ಮೊದಲು ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ.
ಹುಬ್ಬಳ್ಳಿ (ಮಾ.04): ಯಾವುದೇ ರೀತಿಯ ಪೂರ್ವ ತಯಾರಿ ಇಲ್ಲದೆ ಜಾತಿ ಗಣತಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಸಲ್ಲಿಸಿದ ಜಾತಿ ಗಣತಿ ವರದಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವರದಿ ವಾಸ್ತವಿಕವಾಗಿಲ್ಲ ಎಂದು ನಮಗಿಂತ ಮೊದಲು ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ. ಯಾವುದೇ ರೀತಿಯ ಪೂರ್ವ ತಯಾರಿ ಇಲ್ಲದೇ ಜಾತಿ ಗಣತಿ ಮಾಡಿದ್ದಾರೆ ಎಂದು ಹೇಳಿದರು. ಈ ಜಾತಿ ಗಣತಿ ವರದಿಯಲ್ಲಿ ಸರಿಯಾದ ಮಾಹಿತಿಯೇ ಇಲ್ಲ ಎಂಬುದನ್ನು ಕಾಂಗ್ರೆಸ್‌ನವರೇ ಒಪ್ಪಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಜಯಪ್ರಕಾಶ ಹೆಗ್ಡೆ ಅವರ ವರದಿ ಬಗ್ಗೆ ತಮ್ಮ ನಿಲುವೇನು? ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಲಿ. ಆಮೇಲೆ ಬಿಜೆಪಿ ತನ್ನ ನಿಲುವನ್ನು ತಿಳಿಸಲಿದೆ ಎಂದರು.
ಟಿಕೆಟ್ ಗೊಂದಲ ಏನಿಲ್ಲ: ಧಾರವಾಡ ಲೋಕಸಭೆ ಚುನಾವಣೆಗೆ ಕ್ಷೇತ್ರದಲ್ಲಿ ಈಗಾಗಲೇ ತಯಾರಿ ನಡೆಸಿದ್ದೇನೆ. ನಮ್ಮಲ್ಲಿ ಗೊಂದಲ ಏನಿಲ್ಲ ಎಂದ ಜೋಶಿ, ಎಲ್ಲ ವರ್ಗದ ಜನರ ಬೆಂಬಲ ಇದೆ. ಲೋಕಸಭೆ ಚುನಾವಣೆಯೇ ಇರಲಿ, ಯಾವುದೇ ಚುನಾವಣೆ ಇರಲಿ, ಎಲ್ಲಿ? ಯಾರಿಗೆ? ಟಿಕೆಟ್ ಕೊಡಬೇಕು ಎಂಬುದನ್ನು ಬಿಜೆಪಿಯಲ್ಲಿ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು. ಧಾರವಾಡ ಕ್ಷೇತ್ರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ತಾವು ಚುನಾವಣಾ ಪೂರ್ವ ತಯಾರಿ ಮಾಡಿದ್ದೇವೆ. ಎಲ್ಲ ವರ್ಗದವರ ಬೆಂಬಲವೂ ಸಿಕ್ಕಿದೆ ಎಂದರು.
ಪ್ರತಿ ಹಳ್ಳಿಗೆ ಮೂಲ ಸೌಕರ್ಯ ಒದಗಿಸುವುದೆ ಸರ್ಕಾರದ ಉದ್ದೇಶ: ಸಚಿವ ಬೋಸರಾಜು
ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ: ಇಂದು ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ಆಡಳಿತದಲ್ಲಿ ಮೂಲಭೂತವಾದಿಗಳು ಮತ್ತು ಉಗ್ರ ಚಟುವಟಿಕೆಗಳಿಗೆ ಕರ್ನಾಟಕ ಪ್ರಮುಖ ಸ್ಥಾನವಾಗಿ ಮಾರ್ಪಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ನೇರ ಹೊಣೆಗಾರರು. ದೇಶದಲ್ಲಿ ಶೇ. 90ರಷ್ಟು ಉಗ್ರ ಚಟುವಟಿಕೆ ನಿಗ್ರಹವಾಗಿದೆ. ಆದರೆ, ಈಗ ತಮಗೆ ಬೆಂಬಲ ಸಿಗಬಹುದಾದಂತಹ ರಾಜ್ಯಗಳಲ್ಲಿ ಮತ್ತೆ ತಲೆ ಎತ್ತುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಉಗ್ರರ ತಾಣವಾಗಿಸಬೇಡಿ: ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ, ಉಗ್ರರಿಗೆ ದಾಳಿ ನಡೆಸಲು ಇಂದು ಕರ್ನಾಟಕ ಸುರಕ್ಷಿತ ತಾಣ ಎನಿಸಿದೆ. ಕೇವಲ ವೋಟ್ ಬ್ಯಾಂಕ್ ಗಾಗಿ ಕರ್ನಾಟಕವನ್ನು ಉಗ್ರರ ತಾಣ ಮಾಡಬೇಡಿ. ಮೊದಲು ಮುಖ್ಯಮಂತ್ರಿಗಳು ಇದನ್ನು ನಿಲ್ಲಿಸಿ. ಈ ಎರಡೂ ಘಟನೆ ರಾಜ್ಯದಲ್ಲಿ ಆಡಳಿತ ಮತ್ತು ಆಂತರಿಕ ಭದ್ರತೆ ವೈಫಲ್ಯಕ್ಕೆ ನಿದರ್ಶನ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟ ಎರಡೂ ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೇ ಎನ್‌ಐಎ ತನಿಖೆಗೆ ವಹಿಸಬೇಕು ಎಂದರು.
ನನ್ನ ಮೈಚರ್ಮದಿಂದ ಚಪ್ಪಲಿ ಮಾಡಿ ಕೊಟ್ಟರೂ ಕನಕಗಿರಿಯ ಜನರ ಋಣ ತೀರಿಸಲು ಸಾಧ್ಯವಿಲ್ಲ: ಸಚಿವ ತಂಗಡಗಿ
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಎಸ್.ಎಫ್.ಎಲ್. ವರದಿಯಲ್ಲಿ ದೃಢಪಟ್ಟಿದೆ. ಹಾಗಿದ್ದರೂ ಕ್ರಮ ಕೈಗೊಂಡಿಲ್ಲ ಏಕೆ? ಸಾಲದ್ದಕ್ಕೆ ಮತ್ತಷ್ಟು ವಿಡಿಯೋ ಕಳಿಸಿ ತೀರ್ಮಾನಿಸುತ್ತೇವೆ ಎಂದಿದ್ದೀರಿ. ಅಪರಾಧಿಗಳನ್ನು ಇನ್ನೂ ಎಷ್ಟು ರಕ್ಷಿಸಿಕೊಳ್ಳುತ್ತೀರಿ? ಎಂದು ಜೋಶಿ ತರಾಟೆಗೆ ತೆಗೆದುಕೊಂಡರು. ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಪರಿಣಾಮ ರಾಜ್ಯದ ಸಾಮಾನ್ಯ ಜನರ ಬದುಕು ಅಸುರಕ್ಷಿತವಾಗಿದೆ. ಇದಕ್ಕೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪಿಸಿದರು.