ಬಿಜೆಪಿಗರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ, ಅದಕ್ಕೇ ಗಣತಿಗೆ ವಿರೋಧ: ಸಚಿವ ಶಿವರಾಜ ತಂಗಡಗಿ

Published : Sep 29, 2025, 01:50 AM IST
Shivaraja tangadagi

ಸಾರಾಂಶ

ಕೇಂದ್ರ ಸರ್ಕಾರ ಜಾತಿ ಗಣತಿ ಮಾಡೋವಾಗ ನಾನು ಭಾಗಿಯಾಗಲ್ಲ ಅನ್ನೋಕಾಗುತ್ತಾ? ಎಂದು ಸಚಿವ ಶಿವರಾಜ ತಂಗಡಗಿ ಅವರು ಗಣತಿಗೆ ಮಾಹಿತಿ ನೀಡಲ್ಲ ಎಂದ ಕೇಂದ್ರ ಸಚಿವ ಜೋಶಿ ಅವರಿಗೆ ತಿರುಗೇಟು ನೀಡಿದ್ದಾರೆ.

ಕೊಪ್ಪಳ (ಸೆ.29): ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರೇ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಅನ್ನೋದಕ್ಕೆ ಇದು ಮೊದಲ ಉದಾಹರಣೆ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡೋವಾಗ ನಾನು ಭಾಗಿಯಾಗಲ್ಲ ಅನ್ನೋಕಾಗುತ್ತಾ? ಎಂದು ಸಚಿವ ಶಿವರಾಜ ತಂಗಡಗಿ ಅವರು ಗಣತಿಗೆ ಮಾಹಿತಿ ನೀಡಲ್ಲ ಎಂದ ಜೋಶಿ ಅವರಿಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ಸಮೀಕ್ಷೆಯಲ್ಲಿ ಎರಡು ತೊಂದರೆಯಾಗಿತ್ತು. ಸಿಎಂ ಜತೆಗೆ ಜಿಲ್ಲಾಧಿಕಾರಿಗಳ ಸಭೆಯ ನಂತರ ಸರಿಪಡಿಸಲಾಗಿದೆ.

ಈಗಾಗಲೇ 56 ಲಕ್ಷ ಜನರ ಸಮೀಕ್ಷೆ ಮಾಡಲಾಗಿದೆ. ಕೇಂದ್ರ ಸಚಿವ ಜೋಶಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಅವರು ಏನೇನೋ ಹೇಳಿಕೆ ನೀಡಿದ್ದಾರೆ. 9 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸಮೀಕ್ಷೆಯಲ್ಲಿ ಭಾಗಿಯಾಗಿವೆ. ಸಮೀಕ್ಷೆಗೆ ಪ್ರಲ್ಹಾದ್ ಜೋಶಿಯವರೇ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಅನ್ನೋದಕ್ಕೆ ಮೊದಲ ಉದಾಹರಣೆ ಜೋಶಿಯವರೇ. ಹೈಕೋರ್ಟ್‌ ಹೇಳಿದ ಮೇಲೆ ಸಮೀಕ್ಷೆ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡೋವಾಗ ನಾನು ಭಾಗಿಯಾಗಲ್ಲ ಅನ್ನೋಕಾಗತ್ತಾ? ಪ್ರಹ್ಲಾದ್ ಜೋಶಿಯವರು ಸಣ್ಣತನ ಪ್ರದರ್ಶನ ಮಾಡಿದಂತಾಗುತ್ತದೆ ಎಂದರು.

ಮತಾಂತರಗೊಂಡವರಿಗಿಲ್ಲ ಮೂಲ ಜಾತಿಯ ಸೌಲಭ್ಯ

ಕ್ರಿಶ್ಚಿಯನ್ ಸೇರಿದಂತೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ, ನಂತರ ಆತನಿಗೆ ಮೂಲ ಜಾತಿಯ ಆಧಾರದಲ್ಲಿ ದೊರೆಯುತ್ತಿದ್ದ ಸರ್ಕಾರಿ ಸೌವಲತ್ತುಗಳು ದೊರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟಡಿಸಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಅವರು ತಮ್ಮ ಧರ್ಮವನ್ನೇ ಬದಲಾಯಿಸಿಕೊಂಡಿರುವುದರಿಂದ ಅದೇ ಧರ್ಮದಲ್ಲಿ ಗುರುತಿಸಿಕೊಳ್ಳಬೇಕಾಗುತ್ತದೆ. ಆ ಧರ್ಮದಲ್ಲಿದ್ದುಕೊಂಡು ಹಿಂದಿನ ತಮ್ಮ ಜಾತಿಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದರು. ಜಾತಿಗಳ ಮುಂದೆ ಕ್ರಿಶ್ಚಿಯನ್ ಧರ್ಮ ಸೇರಿಸಿರುವುದು ಆಯೋಗ ಚರ್ಚಿಸಿ ತೆಗೆದುಕೊಂಡಿರುವ ನಿರ್ಧಾರವಾಗಿದೆ.

ಇದಕ್ಕೆ ಬೇಡಿಕೆ ಬಂದಿರುವುದರಿಂದ ಹಾಗೆ ಮಾಡಲಾಗಿದೆಯೇ ಹೊರತು ಸರ್ಕಾರದಿಂದಲ್ಲ. ಎಲ್ಲ ರೀತಿಯಿಂದಲೂ ಬರೆದುಕೊಳ್ಳುವುದಕ್ಕೆ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲದಕ್ಕೂ ಅವಕಾಶವಿದೆ. ಯಾರಿಗೆ ಯಾವುದು ಬೇಕು ಅದರಲ್ಲಿ ತಮ್ಮ ಜಾತಿ ಮತ್ತು ಧರ್ಮ ಭರ್ತಿ ಮಾಡುತ್ತಾರೆ. ಇದೆಲ್ಲವನ್ನು ನಂತರ ಆಯೋಗ ಪರಿಶೀಲಿಸುತ್ತದೆ ಎಂದು ತಿಳಿಸಿದರು. ಬಿಜೆಪಿ ನಾಯಕರಿಗೆ ಹುಚ್ಚು ಹಿಡಿದಿದ್ದರಿಂದ ಧರ್ಮ-ಧರ್ಮಗಳ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಆತುರದ ನಿರ್ಧಾರ ಕೈಗೊಳ್ಳುತ್ತಾರೆ. ಪರಾಮರ್ಶೆ ಮಾಡುವುದಿಲ್ಲ. ಜನರು ಬೆಳಗ್ಗೆ-ರಾತ್ರಿ ಏನು ತಿನ್ನಬೇಕೆಂದು ಇವರು ನಿರ್ಧರಿಸುತ್ತಾರೆಯೇ ಎಂದು ಪ್ರಶ್ನಿಸಿದ ಅವರು, ಯಾರು ಏನೇ ಹೇಳಲಿ, ತಮ್ಮ ಜಾತಿ ಮತ್ತು ಧರ್ಮವನ್ನೇ ಜನರು ಬರೆಯಿಸಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು