ತಮಿಳ್ನಾಡಿಗೆ ಮತ್ತೆ ಕಾವೇರಿ ನೀರು ಆದೇಶ ಆಘಾತಕಾರಿ: ಎಚ್‌.ಡಿ.ಕುಮಾರಸ್ವಾಮಿ

Published : Oct 12, 2023, 03:40 AM IST
ತಮಿಳ್ನಾಡಿಗೆ ಮತ್ತೆ ಕಾವೇರಿ ನೀರು ಆದೇಶ ಆಘಾತಕಾರಿ: ಎಚ್‌.ಡಿ.ಕುಮಾರಸ್ವಾಮಿ

ಸಾರಾಂಶ

ಜಲಾಶಯಗಳಲ್ಲಿ ನೀರಿನ ಕೊರತೆ ಉಂಟಾಗಿ ರಾಜ್ಯ ಭೀಕರ ಬರ ಪರಿಸ್ಥಿತಿ ಎದುರಿಸುತ್ತಿರುವಾಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ನೀಡಿರುವುದು ನಾಡಿಗೆ ದೊಡ್ಡ ಆಘಾತ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಅ.12): ಜಲಾಶಯಗಳಲ್ಲಿ ನೀರಿನ ಕೊರತೆ ಉಂಟಾಗಿ ರಾಜ್ಯ ಭೀಕರ ಬರ ಪರಿಸ್ಥಿತಿ ಎದುರಿಸುತ್ತಿರುವಾಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ನೀಡಿರುವುದು ನಾಡಿಗೆ ದೊಡ್ಡ ಆಘಾತ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್‌ ಮಾಡಿರುವ ಅವರು, ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಕಿಡಿಕಾರಿದ್ದಾರೆ.

ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ಮದುವೆಯಾಗುವ ಹುಡುಗ ಅದಿತಿ ಗಂಡನ ಥರ ಇರಬೇಕು: ನಾನು ರಶ್ಮಿಕಾ ಬಿಂಬ ಎಂದ ಸೋನು ಗೌಡ!

ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ ಎಂದು ಹೋರಾಟಕ್ಕೆ ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಡಿಕೆಶಿ ತಿಹಾರ್‌ಗೆ ಓಡೋ ಕಾಲ ಬರ್ತಿದೆ: ಪಬ್ಲಿಕ್ ನಲ್ಲಿ ನನ್ನ ಕೈ ಮೇಲೆತ್ತಿ ‘ಜೋಡೆತ್ತು’ ಎಂದು ಹೇಳಿದ ನಯವಂಚಕರ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಹರಿಹಾಯ್ದರು.

ಬಿಡದಿ ಸಮೀಪದ ಕೇತಗಾನಹಳ್ಳಿಯ ತಮ್ಮ ತೋಟದಲ್ಲಿ ನಡೆದ ರಾಮನಗರ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. 2018ರಲ್ಲಿ ಜೆಡಿಎಸ್ - ಕಾಂಗ್ರೆಸ್ ದೋಸ್ತಿ ಸರ್ಕಾರ ಹೋಗಿದ್ದು ಕನಕಪುರದ ಬಂಡೆ ಮಹಾಶಯ ಡಿ.ಕೆ.ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ. ನನಗೂ, ರಮೇಶ್ ಜಾರಕಿಹೊಳಿ ಅವರಿಗೂ ವೈಷಮ್ಯ ಇತ್ತಾ? ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ. ಅವರು ಬೆಳಗಾವಿ ರಾಜಕೀಯಕ್ಕೆ ಕೈಹಾಕಿದ್ದು ಏಕೆ?. ನಾನು ಕುಮಾರಣ್ಣನ ಸರ್ಕಾರ ಉಳಿಸೋಕೆ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಮೊಸಳೆ ಕಣ್ಣೀರು ಹಾಕಿ ಪ್ರಚಾರ ತೆಗೆದುಕೊಂಡರು. ಆಮೇಲೆ ನೋಡಿದರೆ ಒಳಗೊಳಗೇ ಮಾಡುವುದೆಲ್ಲವನ್ನು ಮಾಡಿದರು ಎಂದು ಕಿಡಿಕಾರಿದರು.

ಎಚ್‌ಡಿಕೆ ತಮ್ಮ ಪ್ಲಾನ್‌ ಬಿಚ್ಚಿಟ್ಟಿದ್ದಾರೆ: ಡಿ.ಕೆ.ಶಿವಕುಮಾರ್

ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಬಿದ್ದು ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಜೀವನದಲ್ಲಿ ಡಿಕೆಶಿ ಜತೆ ಎಂದೂ ರಾಜಿ ಆಗಿಲ್ಲ. ಒಮ್ಮೆ ಅವರ ಜತೆ ಸರ್ಕಾರ ಮಾಡಿದ್ದರಿಂದ ನಾನು ಈಗಲೂ ನೋವು ಅನುಭವಿಸುತ್ತಿದ್ದೇನೆ. ಅವರು ಒಮ್ಮೆ ತಿಹಾರ್ ನೋಡಿಕೊಂಡು ಬಂದಿದ್ದಾರೆ. ಮತ್ತೆ ಅಲ್ಲಿಗೆ ಪರ್ಮನೆಂಟಾಗಿ ಹೋದರೂ ಅಚ್ಚರಿ ಇಲ್ಲ. ಅವರು ತಿಹಾರ್‌ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಮಾರ್ಮಿಕವಾಗಿ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!