ಡಿಕೆಶಿ ರಕ್ಷಣೆ ಮಾಡಲು ಸಿಬಿಐ ಪ್ರಕರಣ ವಾಪಸ್: ಆರ್.ಆಶೋಕ್

Published : Nov 26, 2023, 10:23 PM IST
ಡಿಕೆಶಿ ರಕ್ಷಣೆ ಮಾಡಲು ಸಿಬಿಐ ಪ್ರಕರಣ ವಾಪಸ್: ಆರ್.ಆಶೋಕ್

ಸಾರಾಂಶ

ರಾಜ್ಯ ಸರ್ಕಾರ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡುವುದರ ಮೂಲಕ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಣೆ ಮಾಡಲು ಮುಂದಾಗಿದೆ. ಇದರ ವಿರುದ್ಧ ಬಿಜೆಪಿ ಸದನದ ಒಳಗೂ ಹೊರಗೂ ಹೋರಾಟ ಮಾಡಲಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್.ಆಶೋಕ್ ಹೇಳಿದರು. 

ಚಿತ್ರದುರ್ಗ (ನ.26): ರಾಜ್ಯ ಸರ್ಕಾರ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡುವುದರ ಮೂಲಕ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಣೆ ಮಾಡಲು ಮುಂದಾಗಿದೆ. ಇದರ ವಿರುದ್ಧ ಬಿಜೆಪಿ ಸದನದ ಒಳಗೂ ಹೊರಗೂ ಹೋರಾಟ ಮಾಡಲಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್.ಆಶೋಕ್ ಹೇಳಿದರು. ಇಲ್ಲಿನ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಗೌರವ ಸ್ವೀಕರಿಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಧಿಕಾರದಲ್ಲಿದ್ದಾಗ ಶಿವಕುಮಾರ್ ಆಕ್ರಮ ಆಸ್ತಿ ಮತ್ತು ಸಂಪಾದನೆ ವಿರುದ್ಧ ಪ್ರಕರಣ ದಾಖಲಿಸಿ ಸಿಬಿಐಗೆ ವಹಿಸಲಾಗಿತ್ತು.

ಸಿಬಿಐ ಶೇ.70 ರಷ್ಟು ತನಿಖೆ ಮುಗಿಸಿತ್ತು. ನ್ಯಾಯಾಲಯ 3 ತಿಂಗಳ ಗಡುವು ನೀಡಿ ಪ್ರಕರಣವನ್ನು ಪೂರ್ಣ ಮಾಡಲು ಸೂಚಿಸಿತ್ತು. ಇದಾದ ಮೇಲೆ ಡಿಕೆಶಿಯವರ ವಕೀಲರು ಪ್ರಕರಣವನ್ನು ಮುಂದಕ್ಕೆ ಹಾಕಿಸಿದ್ದಾರೆ. ಇದೀಗ ಅವರನ್ನು ರಕ್ಷಣೆ ಮಾಡುವ ಉದ್ದೇಶದಿಂದ ಸಚಿವ ಸಂಪುಟದಲ್ಲಿ ಈ ಪ್ರಕರಣವನ್ನು ಹಿಂತೆಗೆದುಕೊಳ್ಳುವ ತೀರ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ್ದಾರೆ. ಯಾರೂ ಒಬ್ಬರ ರಕ್ಷಣೆಗಾಗಿ ಸಚಿವ ಸಂಪುಟವನ್ನು ಕರೆದು ಅದರ ಬಗ್ಗೆ ತೀರ್ಮಾನ ಮಾಡುವುದು ಸಂಪುಟ ಮತ್ತು ಸರ್ಕಾರಕ್ಕೆ ಆದ ಅವಮಾನವಾಗಿದೆ ಎಂದರು.

ಡಿಕೆಶಿ ಸಿಬಿಐ ತನಿಖೆ ವಾಪಸ್‌, ಜಾತಿ ಗಣತಿ ವಿವಾದ ಸರ್ಕಾರ ಪತನದ ಹೆಜ್ಜೆ: ಈಶ್ವರಪ್ಪ

ಸಚಿವ ಸಂಪುಟದಲ್ಲಿ ಯಾವುದೇ ವಿಷಯ ಚರ್ಚೆಯಾಗಬೇಕಾದರೆ ಜಗತ್ತಿಗೆ ತಿಳಿಯುತ್ತದೆ. ಆದರೆ ಡಿಕೆಶಿಯವರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ರೀತಿಯ ಮಾಹಿತಿ ಬಿಟ್ಟುಕೊಡದೇ ಗೌಪ್ಯವಾಗಿ ನಡೆದುಕೊಂಡು ನ್ಯಾಯಾಲಯಕ್ಕೆ ಅವಮಾನ ಮಾಡಲಾಗಿದೆ. ಸಚಿವ ಸಂಪುಟ ಸದಸ್ಯರಾಗಿದ್ದು ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದು ಸರಿಯಲ್ಲ. ಕಾನೂನಿನ ಉಲ್ಲಂಘನೆಯಾಗುತ್ತದೆ. ನ್ಯಾಯಾಂಗಕ್ಕೆ ಮಣ್ಣೆರೆಚುವ ಕಾರ್ಯ ಇದಾಗಿದೆ. ನ್ಯಾಯಾಲಯ ಛೀಮಾರಿ ಹಾಕಿದರೆ ಸಚಿವ ಸಂಪುಟದ ಗೌರವ ಹಾಳಾಗುತ್ತದೆ. ಕ್ಯಾಬಿನೆಟ್‌ಗೆ ಕಪ್ಪು ಚುಕ್ಕೆಯಾಗುತ್ತದೆ. ಡಿಕೆಶಿಯನ್ನು ರಕ್ಷಣೆಗಾಗಿಯೇ ಈ ರೀತಿಯ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಹೈಕಮಾಂಡ್ ಒತ್ತಡಕ್ಕೆ ಮಣಿದು ಈ ಕೆಲಸ ಮಾಡಲಾಗಿದೆ ಎಂದರು.

ಅಂದಿನ ಅಡ್ವೋಕೇಟ್ ಜನರಲ್‌ ಡಿಕೆಶಿ ಪ್ರಕರಣವನ್ನು ಸಿಬಿಐಯಿಂದ ತನಿಖೆ ನಡೆಸಬೇಕೆಂದು ಸಲಹೆ ಮಾಡಿದ್ದಾರೆ. ನ್ಯಾಯಾಲಯ ಪ್ರಕರಣವನ್ನು ಮುಂದುವರೆಸುವಂತೆ ಸೂಚನೆ ನೀಡಿದೆ. ಆದರೆ ಸಿದ್ದರಾಮಯ್ಯ ಡಿಕೆಶಿಯವರ ಪ್ರಕರಣವನ್ನು ಮುಗಿಸಲು ಹೊರಟಿದ್ದು ನ್ಯಾಯಾಲಯದ ಕೆಂಗಣ್ಣಿನಿಂದ ಸರ್ಕಾರ ತಪ್ಪಿಸಿಕೊಳ್ಳುವುದ ಕಷ್ವವೆಂದು ಅಶೋಕ್ ಹೇಳಿದರು. ಪಕ್ಷದ ಮುಖಂಡರು ಅಳೆದು ತೋಗಿ ವಿಜಯೇಂದ್ರರವರು ಆಯ್ಕೆ ಮಾಡಿದ್ದಾರೆ. ನಾವು ಅವರು ಸೇರಿ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸುತ್ತೇವೆ. ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುತ್ತೇವೆ. ಪಕ್ಷದ ಕೆಲ ಮುಖಂಡರಲ್ಲಿ ಅಸಮಾಧಾನ ಇದ್ದರೂ ಸರಿಪಡಿಸುವ ಕಾರ್ಯ ಪಕ್ಷದ ಮುಖಂಡರು ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್‌ಗೆ ಅಧಿಕಾರ, ವಿಪಕ್ಷಗಳಿಗೆ ಹೊಟ್ಟೆ ಉರಿ: ಸಚಿವ ಚಲುವರಾಯಸ್ವಾಮಿ

ಪ್ರತಿ ಪಕ್ಷದ ನಾಯಕನಾದ ನಂದರ ಮಾದಾರ ಚನ್ನಯ್ಯ ಶ್ರೀಗಳ ಆರ್ಶಿವಾದವನ್ನು ಪಡೆಯಲು ಬಂದಿದ್ದೇನೆ. ಮಠಕ್ಕೆ 80 ಎಕರೆ ಭೂಮಿ ನೀಡಿದ್ದೇವೆ ಎಂದು ಅಶೋಕ್ ಹೇಳಿದರು. ಇದೇ ಸಂದರ್ಭದಲ್ಲಿ ಬಸವಮೂರ್ತಿ ಮಾದಾರ ಚನ್ನಯ್ಯ ಶೀಗಳು, ಆರ್. ಆಶೋಕ್‌ರವರನ್ನು ಸನ್ಮಾನಿಸಿದರು. ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಜಿಪಂಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಬಸವರಾಜನ್, ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ ಯಾದವ್, ಗುರುಸಿದ್ದನ ಗೌಡ, ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ