ಸಿಡಿ ರಾಜಕಾರಣ ಕರ್ನಾಟಕ ರಾಜ್ಯಕ್ಕೆ ದೊಡ್ಡ ಕಳಂಕ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ರಮೇಶ್ ಜಾರಕಿಹೊಳಿ ಅವರು ತಮ್ಮ ವಿಚಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದ್ದು, ಇದಕ್ಕೆ ತಮ್ಮ ಸಹಮತ ಇದೆ ಎಂದು ಹೇಳಿದರು.
ಶಿವಮೊಗ್ಗ (ಫೆ.4) : ಸಿಡಿ ರಾಜಕಾರಣ ಕರ್ನಾಟಕ ರಾಜ್ಯಕ್ಕೆ ದೊಡ್ಡ ಕಳಂಕ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ರಮೇಶ್ ಜಾರಕಿಹೊಳಿ ಅವರು ತಮ್ಮ ವಿಚಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದ್ದು, ಇದಕ್ಕೆ ತಮ್ಮ ಸಹಮತ ಇದೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಹಿಂದಿನಿಂದಲೂ ಇದೊಂದು ಕೆಟ್ಟಪದ್ಧತಿಯಾಗಿದೆ. ಜಾರಕಿಹೊಳಿ ಅವರ ಪ್ರಕರಣದ ಬಗ್ಗೆ ತನಿಖೆ ನಡೆಸಿ ದುಷ್ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
undefined
ಅಮಿತ್ ಶಾಗೆ ಸಿಡಿ ಷಡ್ಯಂತ್ರ ದಾಖಲೆ ನೀಡಿದೆ: ರಮೇಶ್ ಜಾರಕಿಹೊಳಿ
ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ನಿರಂತರವಾಗಿ ಪ್ರಯತ್ನಿಸಿದ್ದಾರೆ. ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಕಾರ್ಖಾನೆ ಕಾರ್ಮಿಕ ಮುಖಂಡರು ಅನೇಕ ಬಾರಿ ದೆಹಲಿಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದಾರೆ. ಕಾರ್ಖಾನೆ ಉಳಿಸಲು ಶಕ್ತಿಮೀರಿ ಪ್ರಯತ್ನಿಸಿದ್ದಾರೆ ಎಂದರು.
ಆದರೆ, ದೇಶದ 80 ರೋಗಗ್ರಸ್ಥ ಕಾರ್ಖಾನೆಗಳನ್ನು ಮುಚ್ಚುವ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಅದರಲ್ಲಿ ವಿಐಎಸ್‌ಎಲ್ ಕೂಡ ಇದೆ. ಇದು ಭದ್ರಾವತಿಗೆ ಮಾತ್ರ ಸೀಮಿತವಲ್ಲ ಎಂದರಲ್ಲದೇ, ಈಗಲೂ ಈ ಕಾರ್ಖಾನೆಯನ್ನು ಉಳಿಸಲು ಆದಷ್ಟುಪ್ರಯತ್ನ ಮುಂದುವರಿಸಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್‌ನ ನಾಲ್ವರಿಗೆ ಟಿಕೆಟ್ ಕೈತಪ್ಪುವ ಭೀತಿ, ಜೋರಾಯ್ತು ಜಾರಕಿಹೊಳಿ ಸಿಡಿ ಜಟಾಪಟಿ!
ಭದ್ರಾವತಿಯಲ್ಲಿ ‘ವಿಐಎಸ್‌ಎಲ್ ಉಳಿಸಿ’ ಹೆಸರಿನಲ್ಲಿ ನಡೆದಿರುವ ಹೋರಾಟದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಈ ರೀತಿ ಭಾಗವಹಿಸುವುದು ತಪ್ಪಲ್ಲ. ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ ಎಂದು ಪ್ರತಿಕ್ರಿಯಿಸಿದರು.