ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಬಡಜನರು, ಯುವಕರು, ಮಹಿಳೆಯರು ಮತ್ತು ರೈತರ ಪರವಾಗಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಕೇಂದ್ರ ಕೈಗಾರಿಕಾ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ ಹೇಳಿದರು.
ಕೆ.ಆರ್.ಪೇಟೆ (ಜ.12): ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಬಡಜನರು, ಯುವಕರು, ಮಹಿಳೆಯರು ಮತ್ತು ರೈತರ ಪರವಾಗಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಕೇಂದ್ರ ಕೈಗಾರಿಕಾ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ ಹೇಳಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ಬ್ಯಾಂಕ್ ಆಫ್ ಬರೋಡ್ ಮತ್ತು ಕರ್ನಾಟಕ ಬ್ಯಾಂಕ್ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತೆಯನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಸರ್ವ ಜನರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಕೇಂದ್ರ ಸಚಿವ, ನಮ್ಮ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಜನರಿಗೆ ಯೋಜನೆ ಫಲ ದೊರಕುವಂತೆ ಮಾಡಲು ವಿಕಸಿತ ಸಂಕಲ್ಪ ಯಾತ್ರೆಯ ಮೂಲಕ ಮೋದಿ ಗಾಡಿ ನಿಮ್ಮ ಹಳ್ಳಿಗಳಿಗೆ ಬಂದಿದೆ ಎಂದರು. ಕೇಂದ್ರ ಸರ್ಕಾರದ ಎಲ್ಲ ಜನಪರ ಯೋಜನೆಗಳ ಬಗ್ಗೆ ಸಭೆಯಲ್ಲಿ ವಿವರಿಸಿ ಯೋಜನೆ ಬಗೆಗಿನ ಕರಪತ್ರಗಳು ಮತ್ತು ಕ್ಯಾಲೆಂಡರ್ ಹಾಗೂ ಉಜ್ವಲ ಯೋಜನೆ ಫಲಾನುಭವಿಗಳಿಗೆ ಗ್ಯಾಸ್ ಸ್ಟೌವ್ ವಿತರಿಸಿದರು.
ರಾಜಕಾರಣಕ್ಕಾಗಿ ಬಟ್ಟೆ ಹರಿದುಕೊಳ್ಳದಿರಿ: ಶಾಸಕ ಪ್ರದೀಪ್ ಈಶ್ವರ್
ರಾಮ ಮಂದಿರ ನಿರ್ಮಾಣದಿಂದ ದೇಶದ ಜನರ ಅಸ್ಮಿತೆಯನ್ನು ನಿರ್ಮಿಸಲಾಗಿದೆ. ಜಮ್ಮು ಕಾಶ್ಮೀರದ 370 ನೇ ವಿಧಿಯನ್ನು ರದ್ದು ಪಡಿಸಿದೆ. ಜ.22 ರ ಶ್ರೀ ರಾಮಮಂದಿರ ಉದ್ಘಾಟನಾ ಸಮಾರಂಭವನ್ನು ಕಾಂಗ್ರೆಸ್ ಪಕ್ಷ ಬಹಿಷ್ಕರಿಸಿರುವುದು ಅದರ ಕೀಳು ಮನಸ್ಥಿತಿಯನ್ನು ಬಯಲುಗೊಳಿಸಿದೆ ಎಂದು ಕಿಡಿಕಾರಿದರು. ತಹಸೀಲ್ದಾರ್ ನಿಸರ್ಗಪ್ರಿಯ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್, ಕೆನರಾ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಸಂಗಮೇಶ್, ನಬಾರ್ಡ್ ಬ್ಯಾಂಕಿನ ಅರ್ಪಿತ ಸೇರಿದಂತೆ ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಸೇರಿದಂತೆ ಹಲವರು ಇದ್ದರು.
ಕಾಂಗ್ರೆಸ್ಸಿಗರು ಸನಾತನ ಧರ್ಮ ವಿರೋಧಿಗಳು: ಕಾಂಗ್ರೆಸ್ಸಿಗರು ಸನಾತನ ಧರ್ಮವಿರೋಧಿಗಳು. ಧರ್ಮವನ್ನು ವಿರೋಧ ಮಾಡುವ ಮೂಲಕ ಕಾಂಗ್ರೆಸ್ ತನ್ನಿಂತಾನೇ ಪತನವಾಗುತ್ತಿದೆ. ಅವರ ವಿನಾಶವನ್ನು ಅವರೇ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಇಂಧನ ಮತ್ತು ಬೃಹತ್ ಕೈಗಾರಿಕಾ ಸಚಿವ ಕ್ರಿಶನ್ ಪಾಲ್ ಗುರ್ಜರ್ ಟೀಕಿಸಿದರು. ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠರನ್ನು ಶ್ರೀರಾಮಮಂದಿರ ಟ್ರಸ್ಟ್‌ನವರು ಆಹ್ವಾನಿಸಿದ್ದಾರೆ. ಬಿಜೆಪಿಯವರು ಆಹ್ವಾನಿಸಿಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್ ವರಿಷ್ಠರು ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಇದು ದುರ್ದೈವ. ರಾಮಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮವಲ್ಲ. ಅದು ಸಾಧು-ಸಂತರ ಕಾರ್ಯಕ್ರಮ. ಇದು ನಮ್ಮ ಮನೆಯ ಕಾರ್ಯಕ್ರಮವಲ್ಲ. ಇಡೀ ದೇಶದ ಹಿಂದೂಗಳ ಕಾರ್ಯಕ್ರಮ. ಕಾಂಗ್ರೆಸ್ ನಾಯಕರನ್ನು ಬಿಜೆಪಿ ನಾಯಕರು ಆಹ್ವಾನಿಸುವ ಅಗತ್ಯವಿಲ್ಲ ಎಂದು ನೇರವಾಗಿ ಹೇಳಿದರು. ರಾಮರಾಜ್ಯ ನಿರ್ಮಾಣ ರಾಮನ ಕನಸು. ಅದನ್ನು ನಾವೆಲ್ಲರೂ ನನಸು ಮಾಡಬೇಕಿದೆ. ಆದರೆ, ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ.
ಕಾಂಗ್ರೆಸ್ ಪಕ್ಷ ಜಾತಿಗೊಂದು ಡಿಸಿಎಂ ಸ್ಥಾನ ನೀಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ಧರಾಮಯ್ಯ ಇಂಥವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕಲು ಯೋಜಿಸುತ್ತಿದ್ದಾರೆ. ಇದಕ್ಕೆ ಮುಂದೆ ಅವರೇ ಪಶ್ಚಾತಾಪ ಪಡುತ್ತಾರೆ ಎಂದು ಎಚ್ಚರಿಕೆ ನೀಡಿದರು. ಹಿಂದೂಗಳನ್ನು ನಿರ್ಲಕ್ಷಿಸಿ ಒಂದು ಜನಾಂಗದ ಪರ ನಿಂತಿದ್ದರಿಂದಲೇ ಇತ್ತೀಚೆಗೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸೀಟ್ ಕೂಡ ಗೆಲ್ಲಲು ಆಗಿಲ್ಲ ಎಂದು ಛೇಡಿಸಿದರು.