ಬಿಜೆಪಿ ಸೋತರೆ ಕೇಂದ್ರ ಅನುದಾನ ಸ್ಥಗಿತ, ನಡ್ಡಾ ಮಾತಿಗೆ ಕಾಂಗ್ರೆಸ್ ಕಿಡಿ

By Suvarna News  |  First Published May 8, 2023, 4:23 PM IST

ಬಿಜೆಪಿ ಪಕ್ಷ ಕರ್ನಾಟಕದಲ್ಲಿ ಸೋತರೇ, ಕೇಂದ್ರ ಸರಕಾರದ ಅನುದಾನವನ್ನು ನೀಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರು ಮತದಾರರಿಗೆ ಬೆದರಿಕೆ ಹಾಕಿದ್ದಾರೆ. ಇದು ಅಕ್ಷಮ್ಯ ಅಪರಾಧ ಎಂದು ಕಾಂಗ್ರೆಸ್ ಆರೋಪಿಸಿದೆ.


ಉಡುಪಿ (ಮೇ.8): ಬಿಜೆಪಿ ಪಕ್ಷ ಕರ್ನಾಟಕದಲ್ಲಿ ಸೋತರೇ, ಕೇಂದ್ರ ಸರಕಾರದ ಅನುದಾನವನ್ನು ನೀಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರು ಮತದಾರರಿಗೆ ಬೆದರಿಕೆ ಹಾಕಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದ್ದು, ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹಿಸಿದರು. ಅವರು ಸೋಮವಾರ, ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. 

ಈ ರೀತಿಯ ಹೇಳಿಕೆ ನೀಡಿ ಮತದಾರರನ್ನು ಬೆದರಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. 94% ಉತ್ಪಾದನೆಯೂ ಕರ್ನಾಟಕ ರಾಜ್ಯದಲ್ಲಿದೆ. ಆದರೆ ರಾಜ್ಯದ 6.07 ಲಕ್ಷ ಕೋಟಿ ತೆರಿಗೆ ಕೇಂದ್ರವು ಪಡೆಯುತ್ತದೆ. ಆದರೆ ಕೇಂದ್ರದಿಂದ 48,000 ಕೋಟಿ.ರೂ ವಿವಿಧ ಅನುದಾನದ ರೂಪದಲ್ಲಿ ರಾಜ್ಯಕ್ಕೆ ಬರುತ್ತದೆ ಎಂದರು. 

Tap to resize

Latest Videos

undefined

ಕೇಂದ್ರ ಮತ್ತು ರಾಜ್ಯದ ಬಿಜೆಪಿ ನಾಯಕರು ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಒಂದೇ ಒಂದು ರ್ಯಾಲಿ, ಸಮಾವೇಶದಲ್ಲಿ ಬೆಲೆ ಏರಿಕೆ, ಭ್ರಷ್ಟಾಚಾರದ ವಿರುದ್ದ ಮಾತನಾಡಿಲ್ಲ. ಕೇವಲ 40 ಲಕ್ಷ ಜನಸಂಖ್ಯೆ ಇರುವ ಮಣಿಪುರದಲ್ಲಿ ಶಾಂತಿಯನ್ನು ಕಾಪಾಡಲು ಸಾಧ್ಯವಾಗದ ಬಿಜೆಪಿಗೆ ದೇಶವನ್ನು ಸುಭದ್ರವಾಗಿಡಲು ಸಾಧ್ಯವೆ ಎಂದು ಪ್ರಶ್ನಿಸಿದರು. 

2018 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಕಾಂಗ್ರೆಸ್ ಗಿಂತ ಹೆಚ್ಚಿನ ಸೀಟುಗಳನ್ನು ಗೆದ್ದಿತು. ಆದರೆ ಶೇಕಡಾವಾರು ಕಾಂಗ್ರೆಸ್ ಗೆ ಹೆಚ್ಚು ಮತಗಳು ಲಭಿಸಿದ್ದವು. 38.6% ಮತವನ್ನು ಕಾಂಗ್ರೆಸ್ ಗೆ ಮತದಾರರು ನೀಡಿದರು. ಬಿಜೆಪಿಗೆ 36% ಮತಗಳು ಲಭಿಸಿದ್ದವು. ಈ ಬಾರಿ ಆಡಳಿತ ವಿರೋಧಿ ಅಲೆ ಇರುವುದರಿಂದ ಕಳೆದ ಬಾರಿಗಿಂತ 4% ರಿಂದ 6% ಹೆಚ್ಚು ಮತಗಳು ಕಾಂಗ್ರೆಸ್ ಗೆ ಜನರು ನೀಡಲಿದ್ದು 150 ಸೀಟುಗಳನ್ನು ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಬಜರಂಗದಳ ನಿಷೇಧ ವಿಚಾರ:
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಇಂಗ್ಲೀಷ್ ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ತಪ್ಪಾಗಿದೆ. ಪ್ರಣಾಳಿಕೆಯಲ್ಲಿ ಸಂವಿಧಾನ ವಿರೋಧಿ, ಕಾನೂನು ವಿರೋಧಿ ಚಟುವಟಿಕೆ ನಡೆಸುವ ಸಂಘಟನೆಯನ್ನು ನಿಷೇಧ ಮಾಡುತ್ತೇವೆ ಎಂದು ಹೇಳಲಾಗಿದೆ. ಜೊತೆಗೆ ಯಾವುದೇ ಸಂಘಟನೆಯನ್ನು ನಿಷೇಧಿಸುವ ಹಕ್ಕು ರಾಜ್ಯ ಸರಕಾರಕ್ಕಿಲ್ಲ. ಕೇಂದ್ರ ಸರಕಾರಕ್ಕೆ ಪೂರಕವಾದ ದಾಖಲೆಗಳನ್ನು ನೀಡಿದ ಬಳಿಕ ಕೇಂದ್ರವು ನಿಷೇಧಿಸುವ ಕುರಿತು ಚಿಂತನೆ ನಡೆಸುತ್ತದೆ ಎಂದವರು ಹೇಳಿದರು.

ಬಿಎಂಟಿಸಿ ಬಸ್‌ನಲ್ಲಿ ರಾಹುಲ್‌ ಗಾಂಧಿ ರೌಂಡ್ಸ್‌: ಪ್ರಯಾಣಿಕರ ಜೊತೆ ಸಂವಾದ

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು,‌ ಕೆಪಿಸಿಸಿ ಸಂಯೋಜಕ ದಿನೇಶ್ ಪುತ್ರನ್, ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗಡೆ ಕೊಳ್ಕೆಬೈಲ್, ವಕ್ತಾರ ಭಾಸ್ಕರ್ ರಾವ್ ಕಿದಿಯೂರ್, ಪ್ರಚಾರ ಸಮಿತಿಯ ಅಧ್ಯಕ್ಷ ಹರೀಶ್ ಕಿಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಶಲ್ ಶೆಟ್ಟಿ, ಲೀಗಲ್ ಸೆಲ್ ಅಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ, ಪಕ್ಷದ ಮುಖಂಡ ರವಿ ಶೆಟ್ಟಿ ಉಪಸ್ಥಿತರಿದ್ದರು.

ಒಂದು ಲಿಂಕ್‌ ಕ್ಲಿಕ್‌ ಮಾಡಿ: ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕಿ, ಮತಗಟ್ಟೆಗೆ ಹೋಗಿ..!

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

click me!