ಅನ್ನಭಾಗ್ಯ ಯೋಜನೆಗೆ ಕೇಂದ್ರ ಅಡ್ಡಿ: ಸಚಿವ ಸಂತೋಷ್ ಲಾಡ್ ಕಿಡಿ

By Ravi Janekal  |  First Published Jun 19, 2023, 12:40 PM IST

5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಆದರೆ ಈಗ ಇಲ್ಲ ಎಂತಿದೆ. ರಾಜ್ಯಸರ್ಕಾರದ ಅನ್ನಭಾಗ್ಯ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ನಡೆ ಖಂಡಿಸಿದರು.



ಹುಬ್ಬಳ್ಳಿ (ಜೂ.19) : 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಆದರೆ ಈಗ ಇಲ್ಲ ಎಂತಿದೆ. ರಾಜ್ಯಸರ್ಕಾರದ ಅನ್ನಭಾಗ್ಯ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ನಡೆ ಖಂಡಿಸಿದರು.

ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವ ಹಿನ್ನೆಲೆ ಬೇರೆ ರಾಜ್ಯಗಳಿಂದ ಖರೀದಿ ಮಾಡುವುದಕ್ಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ.
ಬಹುತೇಕ ನಾವು ನೀಡಿದ ಸಮಯದಲ್ಲೇ ಕೊಡುತ್ತೇವೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಕೊಡುತ್ತಾರೆ ಎಂದರು.

Tap to resize

Latest Videos

ಮೇಯರ್‌ ಉಪ ಮೇಯರ್‌ ಚುನಾವಣೆ: ಪಾಲಿಕೆ ವಶಪಡಿಸಿಕೊಳ್ಳಲು ಕೈ ಕಾರ್ಯತಂತ್ರ

ಕೇಂದ್ರ ಸರ್ಕಾರವನ್ನು ಕೇಳಿ ಗ್ಯಾರಂಟಿ ಘೋಷಣೆ ಮಾಡಿದ್ರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪತ್ರದ ಮೂಲಕ ಅವರು ತಾನೇ ಕೊಟ್ಟಿದ್ದು. ಕಳೆದ ಬಾರಿ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರಕ್ಕೆ ಕೇಳಿ ಕೊಟ್ಟಿದ್ರಾ?  ಪ್ರಣಾಳಿಕೆ ಕೊಡುವಂತದ್ದು ರಾಜ್ಯಕ್ಕೆ ಸಂಬಂಧ ಪಟ್ಟಿದ್ದು. ಕೇಂದ್ರದವರು ಮಾತು ಕೊಟ್ಟು ವಾಪಸ್ ಪಡೆದ ಉದ್ದೇಶ ಏನು...? ನಾವು ನೀಡಿದ ಕಾರ್ಯಕ್ರಮ ಯಶಸ್ವಿ ಆಗಬಾರದು ಎಂಬ ಉದ್ದೇಶ ಅವರದ್ದಿದೆ. ಈ ಬೆಳವಣಿಗೆಯನ್ನು ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡ್ತಾ ಇದೆ.

ಶಕ್ತಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳಲ್ಲಿ ಗೊಂದಲ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲಾ. ಸುಮಾರು 60 ಸಾವಿರ ಕೋಟಿ ವೆಚ್ಚದಲ್ಲಿ ಆಗುತ್ತಿರುವ ಕಾರ್ಯಕ್ರಮ. ಇದನ್ನು ಅನುಷ್ಠಾನಕ್ಕೆ ತರುವುದಕ್ಕೆ ನಾವು ಸಮಯ ನಿಗದಿ ಪಡಿಸಿದ್ದೇವೆ. ನಾನು ಅದರ ಬಗ್ಗೆ ಮಾತನಾಡಲ್ಲ ಎಂದ ಲಾಡ್. ಮುಂದುವರಿದು, ಅಕ್ಕಿಗಾಗಿ ಮುಖಂಡರು, ಕಾರ್ಯಕರ್ತರೊಂದಿಗೆ ನಾಳೆ ನಾವು ಪ್ರತಿಭಟನೆ ಮಾಡ್ತೇವೆ ಎಂದು ಎಚ್ಚರಿಕೆ ನೀಡಿದರು.

 ಕೈಗಾರಿಕೋದ್ಯಮ ವಿದ್ಯುತ್ ಬಿಲ್ ಹೆಚ್ಚಳಕ್ಕೆ ಬಂದ್ ಕರೆ ವಿಚಾರ ಮುಂದಿನ ದಿನಗಲ್ಲಿ ಸರ್ಕಾರ ಇದರ ಬಗ್ಗೆ ಚರ್ಚೆ ಮಾಡುತ್ತದೆ ಎಂದರು.

ಪಾಲಿಕೆ ಚುನಾವಣೆ: ಕಾಂಗ್ರೆಸ್ ಬಾವುಟ ಹಾರುತ್ತೆ:

ಹುಬ್ಬಳ್ಳಿ ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಬಹಳಷ್ಟು ಜನ ನಮ್ಮ ಕಡೆ ಒಲವು ತೋರಿಸುತ್ತಿದ್ದಾರೆ. ಚುನಾವಣೆ ಏನಾಗತ್ತೆ ಕಾದು ನೋಡಬೇಕು. ಪಕ್ಷೇತರ ಸದಸ್ಯರ, ಬಿಜೆಪಿಯ ಕೆಲ ಸದಸ್ಯರಲ್ಲಿ ಅಸಮಾಧಾನ ಇದೆ. ಅವರು ನಮ್ಮ ಕಡೆ ಒಲವು ತೋರಿಸುತ್ತಿದ್ದಾರೆ. ಕೆಲವರು ನಮ್ಮ ಪಕ್ಷ ಸೇರಲು ಮಾತಾಡಿದ್ದಾರೆ. ನಮ್ಮ ನಾಯಕರ ಜೊತೆ ಮಾತಾಡುತ್ತಿದ್ದಾರೆ.

ಆರೋಗ್ಯ ಇಲಾಖೆಯ ಅಧಿಕಾರಿಗಳ ಚಳಿ ಬಿಡಿಸಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಂತೋಷ್ ಲಾಡ್

ಮಾಜಿ ಸಿಎಮ್ ಜಗದೀಶ್ ಶೆಟ್ಟರ್, ಹಾಗೂ ವಿನಯ ಕುಲಕರ್ಣಿ ಮತ್ತು ಸ್ಥಳೀಯ ನಾಯಕರ ಜೊತೆ ಮಾತಾಡಿದ್ದಾರೆ. ಪಾಲಿಕೆಯಲ್ಲಿ ಈ ಬಾರಿ ಕಾಂಗ್ರೆಸ್ ಬಾವುಟ ಹಾರೋ ಸಾಧ್ಯತೆ ಇದೆ.

ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ ಈ ಕಾರಣಕ್ಕೆ ಅವರು ರೆಸಾರ್ಟ್ ಗೆ ಹೋಗಿದ್ದಾರೆ. ನಾವು ಯಾರೂ ಎಲ್ಲಿ ಹೋಗಿಲ್ಲ, ಇಲ್ಲೆ ಇದ್ದೇವೆ. ನಾಳೆ ನಡೆಯುವ ಚುನಾವಣೆಯಲ್ಲಿ ಬಹುತೇಕ ಕಾಂಗ್ರೆಸ್ ಬಾವುಟ ಹಾರುತ್ತೆ. ನಾವು ಪಾಲಿಕೆ ಸದಸ್ಯರೊಂದಿಗೆ ಮೀಟಿಂಗ್ ಮಾಡ್ತೀವಿ. ನಾಳೆ ಚುನಾವಣೆ ಬಗ್ಗೆ ಇಂದು ಪಾಲಿಕೆ ಸದಸ್ಯರೊಂದಿಗೆ ಮೀಟಿಂಗ್ ಮಾಡುತ್ತೇವೆ ಎಂದರು.

ಕಿಮ್ಸ್ ಆಸ್ಪತ್ರೆ ಸಚಿವ ಲಾಡ್ ದಿಢೀರ್ ಭೇಟಿ

ನಗರದ ಕಿಮ್ಸ್ ಆಸ್ಪತ್ರೆಗೆ  ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್  ದಿಢೀರ್ ಭೇಟಿ ನೀಡಿ,  ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ತರಾಟೆ ತಗೆದುಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಿ ಎಂದು ಖಡಕ್ ಎಚ್ಚರಿಕೆ ನೀಡಿದರು.

 ಇದೇ ವೇಳೆ ಲಾಡ್ ರೋಗಿಗಳ ಬಳಿ ತೆರಳಿ ಆರೋಗ್ಯ  ವಿಚಾರಿಸಿದ ಅವರು, ಆಸ್ಪತ್ರೆಯಲ್ಲಿ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ರೋಗಿಗಳ ಬಳಿ ಪಡೆದುಕೊಂಡರು.

ಈ ವೇಳೆ ಮಾತನಾಡಿದ ಸಚಿವ ಲಾಡ್, ಕಿಮ್ಸ್ ವೈದ್ಯರು ಹಾಗೂ ಸಿಬ್ಬಂದಿಗಳು ಉತ್ತಮ ಸೇವೆ ನೀಡುತ್ತಿದ್ದಾರೆ. ಕಿಮ್ಸ್ ಗೆ ಸುಮಾರು 6-7 ಜಿಲ್ಲೆಗಳಿಂದ ರೋಗಿಗಳು ಆಗಮಿಸುತ್ತಾರೆ. ಬರುವ ರೋಗಿಗಳಿಗೆ ವೈದ್ಯರು ಗುಣಮಟ್ಟದ ಸೇವೆ ನೀಡುತ್ತಿರುವುದನ್ನು ರೋಗಿಗಳಿಂದ ಕೇಳಿ ಸಂತಸವಾಗಿದೆ. ಇಂದೂ ದಿಢೀರ್ ಭೇಟಿ ನೀಡಲಾಗಿದೆ‌ ರೋಗಿಗಳು, ಆಸ್ಪತ್ರೆ ವೈದ್ಯರೊಂದಿಗೆ ಚರ್ಚಿಸಲಾಗಿದೆ. ಆಸ್ಪತ್ರೆಗೆ ಬೇಕಾದ ಸಮರ್ಪಕ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು. ಮುಂದಿನ ವಾರದಲ್ಲಿ ಕಿಮ್ಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಿಮ್ಸ್ ಗೆ ಬೇಕಾದ ಹೆಚ್ಚಿನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಶಾಸಕರಾದ ಪ್ರಸಾದ್ ಅಬ್ಬಯ್ಯ,  ಜಿಲ್ಲಾಧಿಕಾರಿ ಗುರುದತ್ ಹೆಗಡೆ,  ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

click me!