ರಾಜ್ಯದಲ್ಲಿ ಇಂದು ಅಮಿತ್‌ ಶಾ ಹವಾ: ಸಂಪುಟ, ನಿಗಮ-ಮಂಡಳಿ ಬಗ್ಗೆ ಚರ್ಚೆ?

Published : Apr 01, 2022, 04:30 AM IST
ರಾಜ್ಯದಲ್ಲಿ ಇಂದು ಅಮಿತ್‌ ಶಾ ಹವಾ:  ಸಂಪುಟ, ನಿಗಮ-ಮಂಡಳಿ ಬಗ್ಗೆ ಚರ್ಚೆ?

ಸಾರಾಂಶ

*  ಒಂದೇ ದಿನ 4 ಕಾರ್ಯಕ್ರಮಗಳಲ್ಲಿ ಭಾಗಿ *  ಬೆಂಗಳೂರಲ್ಲಿ ಬಿಜೆಪಿ ಕೋರ್‌ ಕಮಿಟಿ ಸಭೆ *  ಅವಧಿಗೆ ಮುನ್ನ ಚುನಾವಣೆ ಇಲ್ಲ: ಅರುಣ್‌ ಸಿಂಗ್‌  

ಬೆಂಗಳೂರು(ಏ.01): ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ(Amit Shah) ಅವರು ಶುಕ್ರವಾರ ರಾಜ್ಯದಲ್ಲಿ ಮಿಂಚಿನ ಸಂಚಾರ ಮಾಡಲಿದ್ದು, ಒಂದೇ ದಿನದಲ್ಲಿ ಮೂರು ಬೃಹತ್‌ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಜತೆಗೆ ಸಾಕಷ್ಟು ಕುತೂಹಲ ಮೂಡಿಸಿರುವ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ.

ಗುರುವಾರ ತಡರಾತ್ರಿ ದೆಹಲಿಯಿಂದ ಬೆಂಗಳೂರಿಗೆ(Bengaluru) ಆಗಮಿಸಿದ ಅಮಿತ್‌ ಶಾ ಅವರು ಅವರು ಶುಕ್ರವಾರ ಬೆಳಗ್ಗೆ 10.30ಕ್ಕೆ ತುಮಕೂರಿನಲ್ಲಿ(Tumakuru) ನಡೆಯುವ ಸಿದ್ದಗಂಗಾ ಮಠದ(Siddaganga Matha) ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ(Shivakumar Swamiji) ಅವರ 115ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿನ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ನಂತರ ಬೆಂಗಳೂರಿನ ಅರಮನೆ ಆವರಣದಲ್ಲಿ ಆಯೋಜಿಸಿರುವ ಸಹಕಾರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಮಿತ್ ಶಾ ಬಂದ ನಂತ್ರ ಸರಕಾರ ಬದಲಾವಣೆ ಬಗ್ಗೆ ಗೊತ್ತಾಗಲಿದೆ BS Yediyurappa

ಮಹತ್ವದ ಕೋರ್‌ ಕಮಿಟಿ ಸಭೆ:

ಸಂಜೆ 6 ಗಂಟೆಗೆ ಪಕ್ಷದ ಕಚೇರಿಯಲ್ಲಿ ಶಾ ಅವರ ನೇತೃತ್ವದಲ್ಲಿ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ ಸಭೆ ನಡೆಯಲಿದೆ. ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಸಚಿವರಾದ ಕೆ.ಎಸ್‌.ಈಶ್ವರಪ್ಪ, ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿರಲಿದ್ದಾರೆ.

1 ವರ್ಷ ಮೊದಲೇ ಚುನಾವಣೆಗೆ ಬಿಜೆಪಿ ತಯಾರಿ: ಏಪ್ರಿಲ್‌ನಲ್ಲಿ ರಾಜ್ಯಕ್ಕೆ ಮೋದಿ, ಶಾ, ನಡ್ಡಾ!

ಮುಂಬರುವ ವಿಧಾನಸಭಾ ಚುನಾವಣೆಯನ್ನು(Karnataka Assembly Election) ಗುರಿಯಾಗಿಸಿಕೊಂಡು ಸರ್ಕಾರ ಮತ್ತು ಪಕ್ಷದ ಸಂಘಟನಾ ಸ್ವರೂಪದಲ್ಲಿ ಕೆಲವು ಬದಲಾವಣೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಸಚಿವ ಸಂಪುಟ ಕಸರತ್ತಿನ ಬಗ್ಗೆಯೂ ಚರ್ಚೆ ನಡೆಯಲಿದ್ದು, ಸಂಪುಟ ವಿಸ್ತರಣೆ ನಡೆಯಲಿದೆಯೋ ಅಥವಾ ಪುನಾರಚನೆ ಆಗಲಿದೆಯೋ ಎಂಬುದರ ಬಗ್ಗೆ ಸ್ಪಷ್ಟಚಿತ್ರಣ ಹೊರಬೀಳುವ ಸಂಭವವಿದೆ.
ಅಲ್ಲದೆ, ನಿಗಮ ಮಂಡಳಿಗಳ ನೇಮಕದ ಬಗ್ಗೆಯೂ ಸಮಾಲೋಚನೆ ನಡೆಯಲಿದೆ. ಈಗಿರುವ ನಿಗಮ ಮಂಡಳಿಗಳ ಅಧ್ಯಕ್ಷರ ಪೈಕಿ ಕೆಲವರನ್ನು ಕೆಳಗಿಳಿಸಿ ಹೊಸಬರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ. ಕೋರ್‌ ಕಮಿಟಿ ಸಭೆ ಮುಗಿಸಿದ ಬಳಿಕ ಅಮಿತ್‌ ಶಾ ಅವರು ರಾತ್ರಿ ದೆಹಲಿಗೆ ವಾಪಸಾಗಲಿದ್ದಾರೆ.

ಏನೇನು ಕಾರ್ಯಕ್ರಮ?

1. ಬೆಳಗ್ಗೆ 10.30ಕ್ಕೆ ತುಮಕೂರಿನಲ್ಲಿ ಶಿವಕುಮಾರ ಸ್ವಾಮೀಜಿ 115ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿ
2. ಮಧ್ಯಾಹ್ನ 2ಕ್ಕೆ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಸಾರ್ವಜನಿಕ ಸಮಾರಂಭದಲ್ಲಿ ಭಾಗಿ
3. ಬಳಿಕ ಬೆಂಗಳೂರಿನ ಅರಮನೆ ಆವರಣದಲ್ಲಿ ಸಹಕಾರ ಸಮ್ಮೇಳನ ಕಾರ್ಯಕ್ರಮ. ಕ್ಷೀರ ಸಮೃದ್ಧಿ ಬ್ಯಾಂಕ್‌ ಲಾಂಛನ ಬಿಡುಗಡೆ
4. ಸಂಜೆ 6ಕ್ಕೆ ಬಿಜೆಪಿ ಕಚೇರಿಯಲ್ಲಿ ಕೋರ್‌ ಕಮಿಟಿ ಸಭೆ. ಪಕ್ಷ ಸಂಘಟನೆ ಮತ್ತು ಸಂಪುಟ, ನಿಗಮ-ಮಂಡಳಿ ಬಗ್ಗೆ ಚರ್ಚೆ ಸಾಧ್ಯತೆ

ಅವಧಿಗೆ ಮುನ್ನ ಚುನಾವಣೆ ಇಲ್ಲ: ಅರುಣ್‌ ಸಿಂಗ್‌

ರಾಜ್ಯದಲ್ಲಿ(Karnataka) ಅವಧಿಪೂರ್ವ ಚುನಾವಣೆ ನಡೆಯುವ ಸಾಧ್ಯತೆಯನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌(Arun Singh) ಬಲವಾಗಿ ತಳ್ಳಿ ಹಾಕಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ನಾನೀಗ ಮನೆಯನ್ನು ಕಂಟ್ರೋಲ್‌ ಮಾಡಲಾಗ್ತಿಲ್ಲ, ವಿಲನ್‌ ಬಂದ್ರು ಎಂದು ನಡುಗಿದ Bigg Boss