ಅಮಿತ್ ಶಾ ಭೇಟಿಯಾದ ತೇಜಸ್ವಿ ಸೂರ್ಯ: ಮಹತ್ವದ ಚರ್ಚೆ..!

By Suvarna NewsFirst Published Sep 27, 2020, 3:32 PM IST
Highlights

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ಮಾಡಿದ್ದಾರೆ. 

ಬೆಂಗಳೂರು, (ಸೆ.27): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ನ್ಯಾಷನಲ್​ ಇನ್​ವೆಸ್ಟಿಗೇಶನ್ ಏಜೆನ್ಸಿ (ಎನ್​ಐಎ)ಯ ವಿಭಾಗೀಯ ಕಚೇರಿ ಸ್ಥಾಪಿಸಬೇಕು ಎಂದು ಮನವಿ ಸಲ್ಲಿಸಿದರು.

ಕಳೆದ ಕೆಲವು ವರ್ಷಗಳಿಂದ ಬೆಂಗಳೂರು ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ. ಎನ್​ಐಎ ಇತ್ತೀಚೆಗೆ ನಗರದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಅನೇಕ ಸ್ಲೀಪರ್ ಸೆಲ್​ಗಳನ್ನು ಎನ್​ಐಎ ವಿಫಲಗೊಳಿಸಿದೆ. ಹೀಗಾಗಿ ಎನ್​ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆಯಾಗಬೇಕು ಎಂದು ಗೃಹ ಸಚಿವ ಅಮಿತ್ ಷಾ ಅವರನ್ನು ಆಗ್ರಹಿಸಿದ್ದೆ. ಮನವಿಯನ್ನೂ ಮಾಡಿದ್ದೆ ಎಂದು ತೇಜಸ್ವಿ ಸೂರ್ಯ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಬಿಗ್ ಚೇಂಜ್: ರಾಜ್ಯ ನಾಯಕರಿಗೆ ಹೈಕಮಾಂಡ್ ಭರ್ಜರಿ ಗಿಫ್ಟ್

ಮನವಿ ಸ್ವೀಕರಿಸಿರುವ ಗೃಹ ಸಚಿವ ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶೀಘ್ರವೇ ಎನ್​ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿದೆ ಎಂಬ ಭರವಸೆಯನ್ನೂ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

 

In last few years, Bluru has become epicenter of terror activities, proven through many NIA arrests & busted sleeper cells in the city.

I urged Hon HM Sri Ji to set up a permanent division of NIA in Bluru

I thank him for his assurance that it will be set up soon! pic.twitter.com/ASxMuumtPr

— Tejasvi Surya (@Tejasvi_Surya)
click me!