Chikkamagaluru: ವಿವಾದದ ನಡುವೆಯೂ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಚಡ್ಡಿ ಸುಡುವ ಪ್ರತಿಭಟನೆ

By Govindaraj S  |  First Published Jun 7, 2022, 1:05 AM IST

ಪಠ್ಯ ಪುಸ್ತಕರ ಪರಿಷ್ಕರಣೆ ಸಮಿತಿ ರಚಿಸುವಂತೆ  ಒತ್ತಾಯಿಸಿ ನಡೆದ ಚಳವಳಿ ಸಂದರ್ಭದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದರು. 


ಚಿಕ್ಕಮಗಳೂರು (ಜೂ.07): ಪಠ್ಯ ಪುಸ್ತಕರ ಪರಿಷ್ಕರಣೆ ಸಮಿತಿ ರಚಿಸುವಂತೆ  ಒತ್ತಾಯಿಸಿ ನಡೆದ ಚಳವಳಿ ಸಂದರ್ಭದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದರು. 

ವಿವಾದದ ನಡುವೆಯೂ ಚಡ್ಡಿ ಸುಡುವ ಪ್ರತಿಭಟನೆ: ರಾಜ್ಯದಲ್ಲಿ ಯುವ ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆ ವೇಳೆಯಲ್ಲಿ ಚಡ್ಡಿ ಸುಡುವ ಮೂಲಕ ವಿವಾದ ಕಿಡಿಯನ್ನು ಹೊತ್ತಿಸಿದ್ದರು. ಇದರ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲೂ ಎನ್ಎಸ್‌ಯುಐ ಮುಖಂಡರ ಬಂಧನ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್  ಕಾರ್ಯಕರ್ತರು ಚಡ್ಡಿ ಸುಡುವ ಮೂಲಕ ಪ್ರತಿಭಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್‌ನ ಮುಖಂಡರು ಹಾಗೂ ಪದಾಧಿಕಾರಿಗಳು ಬಿಜೆಪಿಗೆ ದಿಕ್ಕಾರ, ಆರ್‌ಎಸ್‌ಎಸ್‌ಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.

Tap to resize

Latest Videos

ಪ್ರೀತಿ-ಪ್ರೇಮ..ಪ್ರಣಯ...ಮದ್ವೆಯಾದ ಒಂದೇ ವರ್ಷದಲ್ಲಿ ‌ನವವಿವಾಹಿತೆ ಸಾವು

ಪ್ರತಿಭಟನಾನಿತರ ಮೇಲೆ ಸುಳ್ಳು ಕೇಸ್ ಮುಖಂಡರ ಆಕ್ರೋಶ: ಪ್ರತಿಭಟನೆಯಲ್ಲಿ ಮಾತಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಲೋಪ ದೋಷಗಳನ್ನು ಪ್ರಶ್ನಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ ಎನ್ಎಸ್‌ಯುಐನ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಹಾಗೂ ಕಾರ್ಯಕರ್ತರ ವಿರುದ್ದ ಕಾನೂನು ಬಾಹಿರವಾಗಿ ಸುಳ್ಳು ಕೇಸ್ ದಾಖಲು ಮಾಡಿ ಬಂಧಿಸಲಾಗಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಲಿದೆ ಎಂದರು. ಹೋರಾಟ ಸಂವಿಧಾನಾತ್ಮಕವಾಗಿ ನೀಡಿದ ಹಕ್ಕು,  ಸರ್ಕಾರದ ಲೋಪದೋಷಗಳನ್ನು ಗಟ್ಟಿ ಧ್ವನಿಯಲ್ಲಿ ಪ್ರಶ್ನಿಸುವವರ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಅವರ ಹಕ್ಕನ್ನು ದಮನಗೊಳಿಸಲು ಬಿಜೆಪಿ ಮುಂದಾಗಿದೆ. 

Chikkamagaluru; ತಾಲೂಕು ಘೋಷಣೆಯಾಗಿ 3ವರ್ಷದ ಬಳಿಕ ತಹಶೀಲ್ದಾರ್ ಅಧಿಕಾರ ಸ್ವೀಕಾರ

ಈ ಹೋರಾಟವನ್ನು ಮುಂದಿನ ದಿನಗಳಲ್ಲಿ ರಾಜ್ಯದ ಮನೆ ಮನೆಗೆ ತಲುಪಿಸಲಾಗುವುದು ಎಂದು ಎಚ್ಚರಿಸಿದರು. ಕೇಸರಿಕರಣದ ಮೂಲಕ ವಿದ್ಯಾರ್ಥಿಗಳು ಹಾಗೂ ಮತ್ತು ಅವರ ಶಿಕ್ಷಣದ ಮೇಲೆ ಪರಿಣಾಮ ಬೀರಲು ಅವಕಾಶ ನೀಡಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಹಾಗೂ ಗೃಹಸಚಿವರು ಇದನ್ನು ಅರ್ಥೈಹಿಸಿಕೊಳ್ಳಬೇಕು. ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಸ್ವಪಕ್ಷದ ಶಾಸಕರ ವಿರುದ್ದ ಯಾಕೆ ಕೇಸ್ ದಾಖಲಿಸಿಲ್ಲ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ  ರೇಖಾ ಹುಲಿಯಪ್ಪಗೌಡ್ರು, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೈತ್ರಾ,  ವಕ್ತಾರರಾದ ಪುಟ್ಟಸ್ವಾಮಿ, ಭಾಗವಹಿಸಿದ್ದರು.

click me!