
ಬೆಂಗಳೂರು(ಸೆ.30): ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿದೆ. ಇದರ ಬೆನ್ನಲ್ಲೇ ವಿವಾದ, ಆರೋಪ ಪ್ರತ್ಯಾರೋಪ ಜೋರಾಗಿದೆ. ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಬಿಜೆಪಿ ಕಾರ್ಯಕರ್ತರು ಹರಿದು ಹಾಕಿದ್ದಾರೆ ಅನ್ನೋ ಆರೋಪಕ್ಕೆ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ. ಯಾತ್ರೆ ಕರ್ನಾಟಕ ಪ್ರವೇಶ ಮಾಡುವ ಮೊದಲೇ ಫ್ಲೆಕ್ಸ್ ಕಿತ್ತು ಹಾಕಿದ್ದಾರೆ ಅನ್ನೋ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರೇ ಇದನ್ನು ಮಾಡಿ ಭಾರತ್ ಜೋಡೋ ಯಾತ್ರೆಯ ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಕಾರ್ಯಕರ್ತರು ಈ ರೀತಿ ಮಾಡಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿದೆ. ಅಟಲ್ ಬಿಹಾರಿ ವಾಜಪೇಯಿ ಹಾಗೂ ನರೇಂದ್ರ ಮೋದಿ ಉತ್ತಮ ರಸ್ತೆಗಳನ್ನು ಮಾಡಿದ್ದಾರೆ. ಈ ರಸ್ತೆ ಮೂಲಕ ಜೋಡೋ ಯಾತ್ರೆ ಮುಂದುವರಿಯಲಿ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. ಭಾರತವನ್ನೇ ಇಬ್ಬಾಗ ಮಾಡಿದ ಕಾಂಗ್ರೆಸ್ ಇದೀಗ ಭಾರತವನ್ನು ಒಗ್ಗೂಡಿಸಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಚರ್ಚ್, ಮಸೀದಿಗೆ ಭೇಟಿ ನೀಡಿದ್ದೀರಿ. ಆದರೆ ರಾಹುಲ್ ಗಾಂಧಿ ದೇವಸ್ಥಾನಕ್ಕೆ ಹೋಗಿಲ್ಲ. ಹಲವು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದೀರಿ. ಆದರೆ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.
Bharat Jodo Yatra: ರಾಹುಲ್ ಯಾತ್ರೆ ಬ್ಯಾನರ್ ಹರಿದ ಕಿಡಿಗೇಡಿಗಳು: ಪೊಲೀಸರಿಗೆ ದೂರು
ಪಾಕಿಸ್ತಾನ ಜಿಂದಾಬಾದ್, ಭಾರತವನ್ನೇ ಬೈದ ಕ್ರಿಶ್ಚಿಯನ್ ಮಿಶಿನರಿಯನ್ನು ವಿರೋಧಿಸುವ ಬದಲು ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ. ಇದೀಗ ಕರ್ನಾಟಕ ಪ್ರವೇಶಿಸಿರುವ ಜೋಡೋ ಯಾತ್ರೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೋಡಿಸು ಕೆಲಸ ಮಾಡುತ್ತೀರಾ ಎಂದು ಛಲವಾದಿ ಪ್ರಶ್ನಿಸಿದ್ದಾರೆ. ಜಮ್ಮು ಕಾಶ್ಮೀರಕ್ಕೆ ನೀಡಿದ್ದ ಆರ್ಟಿಕಲ್ 370 ಕುರಿತು ಅಂಬೇಡ್ಕರ್ ಸ್ಪಷ್ಟವಾಗಿ ಹೇಳಿದ್ದರು. ಆದರೆ ಹೆಸರಿಗೆ ಮಾತ್ರ ಅಂಬೇಡ್ಕರ್ ಎಂದು ಹೇಳುವ ಕಾಂಗ್ರೆಸ್ ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸುವ ಕೆಲಸ ಮಾಡಿತು. ಆದರೆ ನರೇಂದ್ರ ಮೋದಿ ಆರ್ಟಿಕಲ್ 370 ರದ್ದು ಮಾಡಿ ದೇಶವನ್ನು ಒಂದೂಗಿಡಿಸಿದ್ದಾರೆ. ಇದೀಗ ಅಧಿಕಾರಕ್ಕೆ ಬಂದರೆ ಅರ್ಟಿಕಲ್ 370 ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಈ ಮೂಲಕ ಮತ್ತೆ ಭಾರತವನ್ನು ವಿಭಜಿಸುವ ಕೆಲಸಕ್ಕೆ ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.
India Gate: ಕೈ ಬಿಟ್ಟು ಹೋಗದಂತೆ ಗಾಂಧಿಗಳ ಕಸರತ್ತು
ಪಾಕಿಸ್ತಾನ, ಬಾಂಗ್ಲಾದೇಶ ಮಾಡಿದವರು ಯಾರು? ನಿಮ್ಮ ಕುಟುಂಬವೇ ಭಾರತವನ್ನು ಇಬ್ಬಾಗ ಮಾಡಿ ಇದೀಗ ಇರುವ ಭಾರತವನ್ನು ಜೋಡಿಸಲು ಹೊರಟ್ಟಿದ್ದೀರಿ. ಇದು ಯಾವ ರಾಜಕೀಯ? ಈ ಹಿಂದೆ ಕಾಂಗ್ರೆಸ್ ಸರ್ಕಾರ ಏನು ಪ್ಲಾನ್ ಮಾಡುತ್ತಿದೆ? ಅನ್ನೋದು ಭಯೋತ್ಪಾದಕರಿಗೆ ತಿಳಿಯುತ್ತಿತ್ತು. ಭಯೋತ್ಪಾದಕರನ್ನು ಕರೆಸಿ ಕಾಂಗ್ರೆಸ್ ಪ್ರಧಾನ ಮಂತ್ರಿಗಳೇ ಕೈಕುಲುಕಿದ್ದರು. ಆದರೆ ಈಗ ಎನ್‌ಡಿಎ ಸರ್ಕಾರ ಭಯೋತ್ಪಾದಕರಿಗೆ ಸಿಂಹಸ್ವಪ್ನವಾಗಿ ಕಾಡುತ್ತಿದೆ. ಭಾರತ ವಿರೋಧಿ ಚಟುವಟಿಕೆ ಮಾಡುವವರಿಗೂ ತಕ್ಕ ಶಾಸ್ತಿ ಮಾಡುತ್ತಿದೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.