ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರೂ, ಎಫ್ಐಆರ್‌ನಲ್ಲಿ ಸಚಿವರ ಹೆಸರು ಉಲ್ಲೇಖಿಸಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಮೇ.31): ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರೂ, ಎಫ್ಐಆರ್‌ನಲ್ಲಿ ಸಚಿವರ ಹೆಸರು ಉಲ್ಲೇಖಿಸಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಫ್ಐಆರ್‌ನಲ್ಲಿ ಕೊಲೆ ಮೊಕದ್ದಮೆ ಎಂದು ದಾಖಲಿಸಿಲ್ಲ. ಪ್ರಕರಣದಲ್ಲಿ ಭ್ರಷ್ಟಾಚಾರದ ಕಲಂಗಳನ್ನು ಸೇರಿಸಿಲ್ಲ. ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕಾಗಿದ್ದರೂ, ಮಾಡಿಲ್ಲ. ಅದರ ಬದಲು ರಾಜಿ ಪಂಚಾಯಿತಿ ಮಾಡಿ ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಐಟಿ ಕಂಪನಿಗೆ ಹಣ ವರ್ಗಾವಣೆ ಆದ ಮಾಹಿತಿ ಸಿಕ್ಕಿದೆ. ಅದು ಯಾರ ಕಂಪನಿ? ಸರ್ಕಾರಿ ಹಣ ಐಟಿ ಕಂಪನಿಗೆ ಹೇಗೆ ಹೋಯಿತು? ನಿಗಮವೇ ಐಟಿ ಕಂಪನಿಯಲ್ಲಿ ಹಣ ಹೂಡಿದೆಯೇ? ಹಾಗೆ ಹೂಡಿಕೆಗೆ ಅವಕಾಶ ಇದೆಯೇ? ಇವೆಲ್ಲವೂ ಕೂಡ ಹೊರಗೆ ಬರಬೇಕಿದೆ. ಅದಕ್ಕಾಗಿ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟಿನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲೇ ಇದರ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ವೀರ್ ಸಾವರ್ಕರ್ ಫಲಕಕ್ಕೆ ಮಸಿ ಬಳೆದವರು ಅಯೋಗ್ಯರು: ಸಿ.ಟಿ.ರವಿ
ಈ ಹಿಂದೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರಶ್ನೆ ಕೇಳಿದ್ದರು. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೂ ಸೆಕ್ಷನ್ 302 ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರು. ಈಗ ಡೆತ್‌ನೋಟ್‌ನಲ್ಲಿ ಸಚಿವರ ಹೆಸರಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ಮುಖ್ಯಮಂತ್ರಿಗಳಿಗೆ ಮಾನ- ಮರ್ಯಾದೆ ಇಲ್ಲ. ಈಗಲೂ ಸಚಿವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.