ಸ್ವಾಮೀಜಿ ಹೇಳಿದ ತಕ್ಷಣ ಸಿಎಂ ಬದಲಾವಣೆ ಅಸಾಧ್ಯ: ಶಾಸಕ ಶಾಮನೂರು ಶಿವಶಂಕರಪ್ಪ

By Govindaraj S  |  First Published Jun 28, 2024, 9:13 PM IST

ಸ್ವಾಮೀಜಿಗಳು ಹೇಳಿದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ. ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್‌ ಹಿರಿಯ ಶಾಸಕ, ಆಭಾವೀಮ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
 


ದಾವಣಗೆರೆ (ಜೂ.28): ಸ್ವಾಮೀಜಿಗಳು ಹೇಳಿದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ. ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್‌ ಹಿರಿಯ ಶಾಸಕ, ಆಭಾವೀಮ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ನಗರದ ತಮ್ಮ ನಿವಾಸ ಶಿವಪಾರ್ವತಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗಳು ಹೇಳಿದರೆ ಮುಖ್ಯಮಂತ್ರಿ ಬದಲಾವಣೆ ಮಾಡುವುದಕ್ಕೆ ಆಗದು. ನಮ್ಮ ಪಕ್ಷದ ಹೈಕಮಾಂಡ್ ಹೇಳಿದಂತೆ ಆಗುತ್ತದಷ್ಟೇ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಚನ್ನಾಗಿಯೇ ಆಡಳಿತ ನೀಡುತ್ತಿದ್ದಾರೆ. ನಾನಾಗಲೀ, ಯಾವುದೇ ಸ್ವಾಮೀಜಿಗಳಾಗಲೀ ಹೇಳಿದಾಕ್ಷಣ ಮುಖ್ಯಮಂತ್ರಿ ಬದಲಿಸುತ್ತಾರಾ? ಸ್ವಾಮೀಜಿಗಳು ಹೇಳಿದರೆಂದು ಮುಖ್ಯಮಂತ್ರಿ ಬದಲಾವಣೆ ಅಸಾಧ್ಯ. ಹೈಕಮಾಂಡ್ ಹೇಳಿದರಷ್ಟೇ ಬದಲಾವಣೆ ಸಾಧ್ಯ. ಸಿಎಂ ಸಿದ್ದರಾಮಯ್ಯ ಏನೇ ಸಮಸ್ಯೆಯಾದರೂ ಸರಿಯಾಗಿ ಉತ್ತರ ನೀಡುತ್ತಾರೆ. ಮುಖ್ಯಮಂತ್ರಿಗಳು ಸಹ ಹೈಕಮಾಂಡ್ ಪ್ರಕಾರ ನಡೆದುಕೊಳ್ಳುತ್ತಾರೆ ಎಂದು ಅವರು ಸಿಎಂ ಪರ ಬ್ಯಾಟ್ ಬೀಸಿದರು.

Latest Videos

undefined

ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಉತ್ಮ ಕೆಲಸ ಆಗಿವೆ. ಗ್ಯಾರಂಟಿ ಯೋಜನೆ ಮೂಲಕ ಜನಪ್ರಿಯ ಮುಖ್ಯಮಂತ್ರಿಯಾಗಿ ಹೆಸರು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡಿಲ್ಲ ಅಂತಾ ಹೇಳಿದ್ದು ಯಾರು? ಯಾರೇನೇ ಹೇಳಿದರೂ ಹೈಕಮಾಂಡ್ ಮುಂದೆ ಏನೂ ನಡೆಯಲ್ಲ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಬೆಂಗಳೂರಿನಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿಯಲ್ಲಿ ಒಕ್ಕಲಿಗ ಸಮಾಜದ ಶ್ರೀ ಚಂದ್ರಶೇಖರ ಸ್ವಾಮೀಜಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಮಾಡಬೇಕು. ಸಿದ್ದರಾಮಯ್ಯ ಸ್ಥಾನ ಬಿಟ್ಟು ಕೊಡಬೇಕೆಂಬ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಚಂದ್ರಶೇಖರ್‌ ಸ್ವಾಮೀಜಿ ಸಲಹೆ ಪರಿಶೀಲನೆ ಮಾಡ್ತೀನಿ, ಪ್ರಧಾನಿ ಆಗ್ತೀನಿ ಅಂತ ದೇವೇಗೌಡರಿಗೆ ಗೊತ್ತಿರಲಿಲ್ಲ: ಸಚಿವ ರಾಜಣ್ಣ

ಜಾತಿವಾರು ಉಪ ಮುಖ್ಯಮಂತ್ರಿ ವಿಚಾರ ಅದೆಲ್ಲಾ ಆಗುವುದಲ್ಲ, ಮಾಡುವುದಲ್ಲ. ಅದನ್ನೆಲ್ಲಾ ಮಾಡಿದರೆ ಹೈಕಮಾಂಡ್ ಮಾಡಬೇಕಷ್ಟೆ. ಅವನಿಗೇನು(ಚನ್ನಗಿರ ಶಾಸಕ ಬಸವರಾಜ ವಿ.ಶಿವಗಂಗಾ) ಗೊತ್ತು? ಹೊಸ ಶಾಸಕ. ಅವನಿಗೆ ಯಾರು ಬೇಕೋ ಅಂತಹವರ ಪರ ಮಾತನಾಡುತ್ತಾನೆ. ಅವನಿಗೆ ಯಾರೋ ಚಾರ್ಜ್ ಮಾಡಿ, ಹಿಂಗೇ ಹೇಳು ಅಂತಾ ಹೇಳಿರಬೇಕಷ್ಟೇ ಎಂದು ಶಾಮನೂರು ಶಿವಶಂಕರಪ್ಪ ನಗುನಗುತ್ತಾ ತಮಾಷೆಯಾಗಿ ತಮ್ಮ ಹುಡುಗನ ಬಗ್ಗೆ ಪ್ರತಿಕ್ರಿಯೆ ನೀಡಿದರು.

click me!