ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಆರ್‌.ಬಿ.ತಿಮ್ಮಾಪುರ

Published : Jun 29, 2024, 04:48 PM IST
ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಆರ್‌.ಬಿ.ತಿಮ್ಮಾಪುರ

ಸಾರಾಂಶ

ಮಠಾಧೀಶರು ರಾಜಕೀಯ ಬಗ್ಗೆ ಚರ್ಚಿಸುವುದು ಎಷ್ಟು ಸೂಕ್ತ ಎಂಬುದನ್ನು ಅವರೇ ಅರಿಯಬೇಕು. ಈಗಾಗಲೇ ಸಿಎಂ ಸಿದ್ದರಾಮಯ್ಯನವರು ಸಿಎಂ ಇದ್ದಾರೆ. ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು.   

ರಬಕವಿ-ಬನಹಟ್ಟಿ (ಜೂ.29): ಮಠಾಧೀಶರು ರಾಜಕೀಯ ಬಗ್ಗೆ ಚರ್ಚಿಸುವುದು ಎಷ್ಟು ಸೂಕ್ತ ಎಂಬುದನ್ನು ಅವರೇ ಅರಿಯಬೇಕು. ಈಗಾಗಲೇ ಸಿಎಂ ಸಿದ್ದರಾಮಯ್ಯನವರು ಸಿಎಂ ಇದ್ದಾರೆ. ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಡಿಸಿಎಂ ಬೇಡಿಕೆ ಕೇಳಿಬರುತ್ತಿದ್ದು, ಡಿಸಿಎಂ ಸ್ಥಾನಕ್ಕೆ ನಿಮ್ಮದೂ ಪೈಪೋಟಿ ಇದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ, ನೀವು ಸಿಎಂ ಸ್ಥಾನ ಕೊಟ್ರೆ ಬಿಡ್ತಿರಾ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಸಾರ್ವಜನಿಕರ ಅಹವಾಲುಗಳಿಗೆ ಶೀಘ್ರ ಸ್ಪಂದಿಸಿ: ತಾಲೂಕಿನಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳು ಮತ್ತು ಬೇಡಿಕೆಗಳಿದ್ದು, ಸಾರ್ವಜನಿಕರು ಆಯಾ ಇಲಾಖೆಗಳ ಮೂಲಕ ತಮ್ಮ ಅಹವಾಲು ಸಲ್ಲಿಸಿದ್ದಾರೆ, ಈ ಅಹವಾಲುಗಳನ್ನು ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿರುವ ಸಮಸ್ಯೆಗಳಿಗೆ ತುರ್ತು ಪರಿಹಾರ ನೀಡಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು. ತಹಸೀಲ್ದಾರ್‌ ಕಚೇರಿಯಲ್ಲಿ ತಾಲೂಕು ಆಡಳಿತ, ತಾಪಂ ಹಾಗೂ ತಾಲೂಕು ಮಟ್ಟದ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಮುಧೋಳ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಡಿ.ಕೆ.ಶಿವಕುಮಾರ್‌ಗೆ ಸಿಎಂ ಆಗುವ ಅವಕಾಶ ಇದೆ: ಶಾಸಕ ಇಕ್ಬಾಲ್ ಹುಸೇನ್

ಪ್ರಮುಖವಾಗಿ ಕಬ್ಬಿಗೆ ವೈಜ್ಞಾನಿಕ ದರ ನಿಗದಿಪಡಿಸುವುದು, ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಿಸುವುದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಉಪಕರಣಗಳನ್ನು ಸಮರ್ಪಕವಾಗಿ ವಿತರಿಸುವುದು, ವೈಯಕ್ತಿಕ ಸಮಸ್ಯೆಗಳ ಕುರಿತು ಜನರು ಅಹವಾಲು ಸಲ್ಲಿಸಿದ್ದಾರೆ. ಅವುಗಳ ಪರಿಹಾಯಕ್ಕೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿ.ಪಂ ಸಿಇಒ ಶಶಿಧರ ಕುರೇರ, ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಹಸೀಲ್ದಾರ್‌ ವಿನೋದ ಹತ್ತಳ್ಳಿ, ತಾ.ಪಂ ದೊಓ ಸಂಜೀವ ಹಿಪ್ಪರಗಿ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ