ಚನ್ನಪಟ್ಟಣ ಜೆಡಿಎಸ್‌ ಅಭ್ಯರ್ಥಿ ಇಂದು ಫೈನಲ್‌?

By Kannadaprabha News  |  First Published Oct 24, 2024, 6:32 AM IST

ಈಗ ಯೋಗೇಶ್ವರ್ ಅವರೇ ನೇರ ಎದುರಾಳಿಯಾಗಿರುವುದರಿಂದ ದೇವೇಗೌಡರ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಿದರೆ ಮಾತ್ರ ಪ್ರಬಲ ಪೈಪೋಟಿ ನೀಡಬಹುದು ಎಂಬ ಅಭಿಪ್ರಾಯ ಪಕ್ಷದಲ್ಲಿ ಬಲವಾಗಿ ವ್ಯಕ್ತವಾಗುತ್ತಿದೆ.  ಈ ಪೈಕಿ ನಿಖಿಲ್ ಕುಮಾರಸ್ವಾಮಿ ಹೆಸರು ಮುಂಚೂಣಿಯಲ್ಲಿದೆ. 


ಬೆಂಗಳೂರು(ಅ.24):  ಮಾಜಿ ಸಚಿವ ಸಿ.ಪಿ.ಯೋಗೇಶ್ವ‌ರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಜೆಡಿಎಸ್ ನಾಯಕರು ತಮ್ಮ ಪಕ್ಷದಿಂದ ಕಣಕ್ಕಿಳಿಸಬೇಕಾದ ಅಭ್ಯರ್ಥಿಗಾಗಿ ಕೊನೆಯ ಕ್ಷಣದ ಕಸರತ್ತು ನಡೆಸಿದ್ದು, ಇಂದು(ಗುರುವಾರ) ಅಂತಿಮಗೊಳ್ಳುವ ಸಾಧ್ಯತೆಯಿದೆ. 

ಈಗ ಯೋಗೇಶ್ವರ್ ಅವರೇ ನೇರ ಎದುರಾಳಿಯಾಗಿರುವುದರಿಂದ ದೇವೇಗೌಡರ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಿದರೆ ಮಾತ್ರ ಪ್ರಬಲ ಪೈಪೋಟಿ ನೀಡಬಹುದು ಎಂಬ ಅಭಿಪ್ರಾಯ ಪಕ್ಷದಲ್ಲಿ ಬಲವಾಗಿ ವ್ಯಕ್ತವಾಗುತ್ತಿದೆ.  ಈ ಪೈಕಿ ನಿಖಿಲ್ ಕುಮಾರಸ್ವಾಮಿ ಹೆಸರು ಮುಂಚೂಣಿಯಲ್ಲಿದೆ. ಆದರೆ, ಮಹಿಳೆಯೊಬ್ಬರನ್ನು ಅಭ್ಯರ್ಥಿ ಯಾಗಿಸಿದರೆ ಹೇಗೆ ಎಂಬ ಚಿಂತನೆಯೂ ಹಾಗೂ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಪತ್ನಿ ಅನಸೂಯ ಅವರ ಹೆಸರುಗಳೂ ಕೇಳಿಬರುತ್ತಿವೆ. ಈ ನಡುವೆ ಕುಟುಂಬದವರು ಬೇಡ ಎನ್ನುವುದಾದರೆ ಪಕ್ಷದ ಕಾರ್ಯಕರ್ತರ ಪೈಕಿ ಚನ್ನಪಟ್ಟಣ ತಾಲೂಕು ಅಧ್ಯಕ್ಷ ಜಯಮುತ್ತು ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ನಡೆದಿದೆ. 

Latest Videos

undefined

ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

ಬುಧವಾರ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರು ನಿಖಿಲ್ ಕುಮಾರಸ್ವಾಮಿ ಮಾತುಕತೆ ನಡೆಸಿದರು. ನಿಖಿಲ್ ಅವರನ್ನೇ ಕಣಕ್ಕಿಳಿಯುವಂತೆ ಗೌಡರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಈ ನಡುವೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ ನಾಯಕರೊಂದಿಗೆ ಸಂಜೆ ಸಭೆ ನಿಗದಿಯಾಗಿ ಕೊನೆ ಕ್ಷಣದಲ್ಲಿ ರದ್ದಾಯಿತು. ಗುರುವಾರ ಸಭೆ ನಡೆಯುತ್ತದೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರವಾಸದಲ್ಲಿರುತ್ತಾರೆ. ಆರ್.ಅಶೋಕ್ ಹಾಗೂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರೊಂದಿಗೆ ಮಾತುಕತೆ ನಡೆಸುವ ನಿರೀಕ್ಷೆಯಿದೆ. ಬುಧವಾರ ದೇವೇಗೌಡರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಕಳೆದ ಎರಡು ತಿಂಗಳಿಂದ ನಿರಂತರವಾಗಿ ನನ್ನ ಹೆಸರು ಚಾಲ್ತಿಯಲ್ಲಿದೆ. ಆದರೆ, ನಾನು ಸ್ಪರ್ಧೆ ಮಾಡುವ ಬಗ್ಗೆ ಹೇಳಿಕೆಯನ್ನೇ ನೀಡಿಲ್ಲ. ಎನ್‌ಡಿಎಯಿಂದ ಅಭ್ಯರ್ಥಿ ಘೋಷಣೆ ಆಗಬೇಕು. ಲಕ್ಷಾಂತರ ಕಾರ್ಯಕರ್ತರ ದುಡಿಮೆಯಿಂದ ಕಟ್ಟಿರುವ ಪಕ್ಷನಮ್ಮದು. ಉಭಯ ಪಕ್ಷಗಳ ಮುಖಂಡರು ಕುಳಿತು ಚರ್ಚೆ ಮಾಡಿ ಅಭ್ಯರ್ಥಿಯನ್ನ ತೀರ್ಮಾನ ಮಾಡುತ್ತಾರೆ. ನನ್ನ ವೈಯಕ್ತಿಕ ಅಭಿ ಪ್ರಾಯದ ಪ್ರಕಾರ, ಒಬ್ಬ ಸಾಮಾನ್ಯ ಕಾರ್ಯ ಕರ್ತನಿಗೆ ಅಧಿಕಾರ ಸಿಕ್ಕಿದರೆ ಅದು ನಿಖಿಲ್‌ಗೆ ಸಿಕ್ಕ ಅಧಿಕಾರವಾಗುತ್ತದೆ ಎಂದರು. 

ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್, ಜೆಡಿಎಸ್, ಬಿಜೆಪಿಗೆ ಪಕ್ಷೇತರರ ಸೆಡ್ಡು

ಅಧಿಕಾರ ಸಿಗುವಲ್ಲಿಗೆ ಯೋಗಿ ಜಂಪ್ ಆಗ್ತಾರೆ: ನಿಖಿಲ್ ಕಿಡಿ

ಬೆಂಗಳೂರು: ಅಧಿಕಾರ ಎಲ್ಲಿ ಸಿಗುತ್ತದೆಯೋ ಯೋಗೇಶ್ವರ್ ಅಲ್ಲಿಗೆ ಜಂಪ್ ಆಗುತ್ತಾರೆ. ಯಾವಾಗ ತರಾತುರಿಯಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರೋ ಆಗಲೇ ಅವರು ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿತ್ತು ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವ‌ರ್ ಅವರಿಗೆ 25 ವರ್ಷ ರಾಜಕೀಯ ಅನುಭವವಿದೆ. ಅವರು ಒಂದು ಬದ್ಧತೆ ಇಟ್ಟುಕೊಂಡು ರಾಜಕೀಯ ಮಾಡಿಲ್ಲ ಎಂದು ವ್ಯಂಗ್ಯವಾಗಿ ಹೇಳಿದರು. ನಮ್ಮಿಂದ ಯಾವುದೇ ತಪ್ಪು ಆಗಿಲ್ಲ. ಜೆಡಿಎಸ್ ಪಕ್ಷದಿಂದಲೇ ಅವರು ಸ್ಪರ್ಧೆಮಾಡಬಹುದಿತ್ತು. ದೇವೇಗೌಡರುಮತ್ತು ಕುಮಾರಸ್ವಾಮಿ ಜತೆ ಚರ್ಚೆಮಾಡಬಹುದಿತ್ತು. ನಾನುಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ ಎಂದು ತೀಕ್ಷ್ಣವಾಗಿ ತಿಳಿಸಿದರು. 

click me!