* ರಾಮನಗರದಲ್ಲಿ ರಾಜಕೀಯದ ಜಿದ್ದಾಜಿದ್ದಿ ಶುರು
* ಜೆಡಿಎಸ್‌ಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ
* ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಡರು ಬಿಜೆಪಿಗೆ
ರಾಮನಗರ, (ಫೆ.18): ರಾಮನಗರ ಜಿಲ್ಲಾ ರಾಜಕಾರಣ ಈಗ ರಾಜ್ಯ ರಾಜಕಾರಣದಲ್ಲಿ ಎಲ್ಲರ ಗಮನಸೆಳೆಯುತ್ತಿದ್ದು, ರಾಜಕೀಯದ ಜಿದ್ದಾಜಿದ್ದಿ ಆರಂಭವಾಗಿದೆ.
ಒಂದೆಡೆ ಡಿ. ಕೆ. ಶಿವಕುಮಾರ್ ಮತ್ತೊಂದೆಡೆ ಎಚ್. ಡಿ. ಕುಮಾರಸ್ವಾಮಿ ಪ್ರಾಬಲ್ಯ ಸಾಧಿಸಲು ತಮ್ಮದೇ ಆದ ರಾಜಕೀಯ ಅಸ್ತ್ರಗಳನ್ನು ಹಿಡಿದುಕೊಂಡು ಅಖಾಡಕ್ಕಿಳಿದ್ದಾರೆ. ಇವರ ನಡುವೆ ಬಿಜೆಪಿ ತನ್ನ ಅಸ್ತತ್ವಕ್ಕೆ ಇನ್ನಿಲ್ಲದ ಕಸರತ್ತು ನಡೆಸಿದೆ. ಇದಕ್ಕೆ ಪೂರಕವೆಂಬಂತೆ ಸಿ. ಪಿ. ಯೋಗೀಶ್ವರ್ ಹೊಸದೊಂದು ಅಸ್ತ್ರ ಪ್ರಯೋಗಿಸಲು ಸಜ್ಜಾಗಿದ್ದಾರೆ.
undefined
DK Suresh Vs Ashwath Narayan : ಸಿಎಂ ಮುಂದೆ ಸಂಸದ-ಸಚಿವರ ಫೈಟ್, ಹಿಂದಿನ ರಾಜಕೀಯ ಲೆಕ್ಕಾಚಾರವೇನು.?
ಚನ್ನಪಟ್ಟಣದಲ್ಲಿ ತಮ್ಮ ವಿರೋಧಿ ಪಕ್ಷಗಳಿಂದ ಮುಖಂಡರನ್ನು ಬಿಜೆಪಿಗೆ ಸೆಳೆಯಲು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶತಪ್ರಯತ್ನ ನಡೆಸಿದ್ದಾರೆ.
ಚನ್ನಪಟ್ಟಣದ ಜೆಡಿಎಸ್, ಕಾಂಗ್ರೆಸ್‌ನ ಹಲವು ಪ್ರಮುಖ ಮುಖಂಡರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಸ್ವತಃ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು ತಿಳಿಸಿದ್ದಾರೆ.
ಇದೇ ಫೆ. 21ರಂದು ಸಂಜೆ 6ಕ್ಕೆ ಬೆಂಗಳೂರಿನಲ್ಲಿರುವ ಮಲ್ಲೇಶ್ವರ ಕಚೇರಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದ್ದು, ಜೆಡಿಎಸ್‌ನ ಇನ್ನಷ್ಟು ಸ್ಥಳೀಯ ಮುಖಂಡರೂ ಅವರೊಟ್ಟಿಗೆ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ..
ಚನ್ನಪಟ್ಟಣದ ಜೆಡಿಎಸ್ ಪ್ರಭಾವಿ ಮುಖಂಡರಲ್ಲಿ ಒಬ್ಬರಾದ ಲಿಂಗೇಶ್‌ಕುಮಾರ್ ಬಿಜೆಪಿ ಸೇರುವುದು ಖಚಿತವಾಗಿದೆ. ಹತ್ತಾರು ವರ್ಷದಿಂದ ಅವರು ಜೆಡಿಎಸ್ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಬಮುಲ್ ನಿರ್ದೇಶಕ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದರು. ಈಚೆಗೆ ತಾಲ್ಲೂಕು ಜೆಡಿಎಸ್ ಘಟಕದಲ್ಲಿ ಜಯಮುತ್ತು ಹಾಗೂ ಲಿಂಗೇಶ್‌ಕುಮಾರ್ ಬಣಗಳ ನಡುವೆ ಸಾಕಷ್ಟು ಜಟಾಪಟಿ ನಡೆಯುತ್ತಲೇ ಇತ್ತು.
ಕಳೆದ ಬಮೂಲ್ ಆಡಳಿತ ಮಂಡಳಿ ಚುನಾವಣೆಯಲ್ಲೂ ಇದು ಬಹಿರಂಗವಾಗಿದ್ದು, ಇಬ್ಬರು ನಾಯಕರೇ ನೇರ ಸ್ಪರ್ಧೆಗೆ ನಿಂತಿದ್ದರು. ಬಳಿಕ ಲಿಂಗೇಶ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದು, ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದರು.
ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷಕ್ಕೂ ಹೆಚ್ಚು ಸಮಯವಿದೆ. ಆದರೆ ಈಗಿನಿಂದಲೇ ಚುನಾವಣೆಗೆ ಬೇಕಾದ ತಯಾರಿಗಳು ನಡೆಯುತ್ತಿರುವುದನ್ನು ಗಮನಿಸಿದರೆ ಚುನಾವಣೆ ವೇಳೆಗೆ ಇನ್ನು ಏನೆಲ್ಲಾ ಬೆಳವಣಿಗೆಗಳು ನಡೆಯಲಿವೆಯೋ? ಎಂಬ ಕುತೂಹಲ ಮೂಡಿಸಿದೆ.
ರಾಮನಗರದಲ್ಲಿ ಪ್ರಾಬಲ್ಯ ಸಾಧಿಸಲು ಡಿಕೆ ಬ್ರದರ್ಸ್ ತಂತ್ರ
ಈಗಾಗಲೇ ಮೇಕೆದಾಟು ಪಾದಯಾತ್ರೆ ಮೂಲಕ ಒಂದು ಹಂತದ ಹೋರಾಟವನ್ನು ಡಿಕೆಶಿ ಸಹೋದರರು ಮಾಡಿ ರಾಜ್ಯದ ಗಮನಸೆಳೆದಿದ್ದಾರೆ. ಮೊದಲಿಗೆ ರಾಮನಗರದಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಮತ್ತೆ ರಾಜ್ಯದ ಇತರೆ ಜಿಲ್ಲೆಗಳತ್ತ ದಂಡಯಾತ್ರೆ ಹೊರಡಲು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಚಿಂತನೆ ನಡೆಸಿದ್ದಾರೆ.
ರಾಮನಗರ ಎಚ್‌ಡಿಕೆಯ ಕಾರ್ಯಸ್ಥಾನ
ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಮೂರು ಪಕ್ಷಗಳು ಕೂಡ ರಾಮನಗರದ ಮೇಲೆ ಕಣ್ಣಿಟ್ಟಿವೆ. ಅದರಲ್ಲೂ ಜೆಡಿಎಸ್‌ಗೆ ರಾಮನಗರದ ಅನಿವಾರ್ಯತೆ ತುಸು ಹೆಚ್ಚೇ ಇದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರಾಮನಗರವನ್ನೇ ತಮ್ಮ ಕಾರ್ಯಸ್ಥಾನವನ್ನಾಗಿ ಮಾಡಿಕೊಂಡಿದ್ದಾರೆ. ಅವರಿಗೆ ರಾಜಕೀಯವಾಗಿ ಮರು ಜೀವ ನೀಡಿರುವುದು ಕೂಡ ರಾಮನಗರವೇ. ಹೀಗಾಗಿ ಅಲ್ಲಿನ ಮತದಾರರನ್ನು ಹಿಡಿದಿಟ್ಟುಕೊಳ್ಳಲು ಏನು ಬೇಕೋ ಅದೆಲ್ಲ ತಂತ್ರವನ್ನು ಅವರು ಮಾಡುತ್ತಿದ್ದಾರೆ.
ಅನಿತಾ ಕುಮಾರಸ್ವಾಂಇ ಸರ್ಧೆ ಮಾಡಲ್ಲ
ಹೌದು...ಜೆಡಿಎಸ್‌ನ ಭದ್ರಕೋಟೆ ಆಗಿರುವ ರಾಮನಗರ ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ. ಈಗಾಗಲೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಪತಿ ಎಚ್‌ಡಿ ಕುಮಾರಸ್ವಾಮಿ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇನ್ನು ಇವರ ಸ್ಥಾನಕ್ಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನ ಅಖಾಡಕ್ಕಿಳಿಸಲು ಚಿಂತನೆಗಳು ನಡೆದಿವೆ. ಇದಕ್ಕೆ ಪುಷ್ಠಿ ನೀಡುವಂತೆ ಈಗಾಗಲೇ ನಿಖಿಲ್ ಕುಮಾರಸ್ವಾಮಿ ರಾಮನಗರದಲ್ಲಿ ಸಕ್ರಿಯವಾಗಿ ಕ್ಷೇತ್ರದಲ್ಲಿ ಸುತ್ತಾಡುತ್ತಿದ್ದಾರೆ.
ಒಟ್ಟಿನಲ್ಲಿ ಮೂರು ಪಕ್ಷಗಳು ಕೂಡ ರಾಮನಗರದ ಮೇಲೆ ಕಣ್ಣಿಟ್ಟಿದ್ದು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಜಿಲ್ಲೆ ಜಿದ್ದಾ-ಜಿದ್ದಿ ಏರ್ಪಡಲಿದೆ.