ಜನರ ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸಲು ಆಗುವುದಿಲ್ಲ: ಸಚಿವ ಕೃಷ್ಣ ಭೈರೇಗೌಡ

Published : Nov 13, 2025, 10:31 AM IST
Krishna Byre Gowda

ಸಾರಾಂಶ

ಜನರ ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸಲು ಆಗುವುದಿಲ್ಲ. ಆದರೆ ಯಾವುದನ್ನು ಬಗೆಹರಿಸಲು ಸಾಧ್ಯತೆ ಇದೆಯೋ ಅದನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಚನ್ನರಾಯಪಟ್ಟಣ (ನ.13): ಸರ್ಕಾರ ಜನರ ಮನೆ ಬಾಗಿಲಿಗೆ ಹೋಗಿ ಜನರ ಸಮಸ್ಯೆ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದು, ಜನರ ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸಲು ಆಗುವುದಿಲ್ಲ. ಆದರೆ ಯಾವುದನ್ನು ಬಗೆಹರಿಸಲು ಸಾಧ್ಯತೆ ಇದೆಯೋ ಅದನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಅವರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಜನಸ್ಪಂದನ ಸಭೆಯಲ್ಲಿ ಮಾತನಾಡಿ, ಜನರ ನೂರಾರು ಸಮಸ್ಯೆಗಳು ಇರುತ್ತವೆ. ಅದರಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಸರಿ ಮಾಡುವ ಕೆಲಸ ಆಗಬೇಕು.

ಅತಿ ಹೆಚ್ಚು ದುರಸ್ತಿ ಕಾರ್ಯ ಮತ್ತು ತಾತ್ಕಾಲಿಕ ಪೋಡಿ ಕಾರ್ಯವು ಹೆಚ್ಚಾಗಿ ಕಂಡುಬಂದಿದೆ. ಕಳೆದ ಐದು ವರ್ಷಗಳ ಹಿಂದೆ ಸುಮಾರು 300ರಷ್ಟು ಮಾತ್ರ ಅರ್ಜಿ ದುರಸ್ತಿ ಕಾರ್ಯಗಳು ನಡೆದಿದ್ದವು, ಆದರೆ ಇಂದು ಸುಮಾರು 20000 ಅರ್ಜಿ ದುರಸ್ತಿ ಕಾರ್ಯಗಳು ಈಗಾಗಲೇ ನಡೆದಿದೆ. ಇನ್ನೂ ಸುಮಾರು 25 ಸಾವಿರಕ್ಕೂ ಅಧಿಕ ದುರಸ್ತಿ ಕಾರ್ಯಗಳು ನಡೆಯಬೇಕಾಗಿದೆ. ಸದ್ಯದಲ್ಲೇ ಈ ದುರಸ್ತಿ ಕಾರ್ಯಗಳನ್ನು ನೆರವೇರಿಸಲಾಗುವುದು. ಅದರಲ್ಲೂ ಅತಿ ಹೆಚ್ಚು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅರ್ಜಿಗಳು ಬಂದಿದ್ದು, ಇವುಗಳನ್ನು ಸದ್ಯದಲ್ಲೇ ಕಾರ್ಯರೂಪಕ್ಕೆ ತರಲು ತೊಡಗಲಾಗುವುದು.

ಕಂದಾಯ ಇಲಾಖೆಗೆ ಸಂಬಂಧಪಟ್ಟ ಎಲ್ಲ ದಾಖಲಾತಿಗಳು ಇದ್ದಲ್ಲಿ ಅಂತಹವರ ಅರ್ಜಿಯನ್ನು ಸ್ಥಳದಲ್ಲೇ ಪರಿಹರಿಸಲಾಗುವುದು. ಇನ್ನು ಕೆಲವು ಅರ್ಜಿಗಳನ್ನು ವಜಾಗೊಳಿಸಲಾಗುವುದು. ಸಾರ್ವಜನಿಕರಿಂದ ಪಡೆದ ಎಲ್ಲಾ ಅರ್ಜಿಗಳನ್ನು ಕೂಡ ಪರಿಹಾರ ಕಂಡುಕೊಳ್ಳುವುದು ಎಂದರೆ ಅದು ತಪ್ಪು ಕಲ್ಪನೆ. ಏಕೆಂದರೆ ಕೆಲವು ಕಾನೂನುಬಾಹಿರವಾಗಿ ಅರ್ಜಿಗಳು ಕೂಡ ಬಂದಿವೆ. ಅವುಗಳಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಲು ಮುಂದಾಗುತ್ತೇವೆ ಎಂದರು.

ನ್ಯಾಯ ಸಮ್ಮತ ಪರಿಹಾರ

ದೆಹಲಿ ಬಾಂಬ್ ಸ್ಫೋಟ ಪ್ರಕರಣ ದುರದೃಷ್ಟಕರ ಘಟನೆಯಲ್ಲಿ ಮಡಿದವರಿಗೆ ಸಂತಾಪ ವ್ಯಕ್ತಪಡಿಸುವೆ. ತನಿಖೆಯಿಂದ ಕಾರಣ ಏನು ಎಂಬುದು ಗೊತ್ತಾಗಬೇಕು, ನ್ಯಾಯ ಸಮ್ಮತ ಪರಿಹಾರ ಆಗಬೇಕು, ಈ ದಿಕ್ಕಿನಲ್ಲಿ ತನಿಖೆ ನಡೆಯುತ್ತಿದ್ದು, ಆದಷ್ಟು ಬೇಗ ಸತ್ಯ ಹೊರಬರಲಿ. ಹೆಚ್ಚು ವಿಚಾರಗಳು ನನಗೆ ತಿಳಿದಿಲ್ಲ. ನಾನು ನಿನ್ನೆಯಿಂದ ಟ್ರಾವಲ್ ಮಾಡ್ತಾ ಇದ್ದೀನಿ. ನಾನು ನ್ಯೂಸ್ ಪೇಪರ್, ಟಿವಿ ನೋಡೇ ಇಲ್ಲ. ಇಂತಹ ಪ್ರಕರಣ ಆಗಬಾರದಿತ್ತು, ಕೇಂದ್ರ ಸರ್ಕಾರ ಆದಷ್ಟು ಬೇಗ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅಗತ್ಯ ಕಾನೂನು ಕ್ರಮಕೈಗೊಳ್ಳಬೇಕು ಎಂಬುದು ನನ್ನ ಅಭಿಪ್ರಾಯ ಎಂದರು.

ಸುಮಾರು 1100ಕ್ಕೂ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದು, ಬಹುಶಃ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಸಾವಿರಕ್ಕೂ ಹೆಚ್ಚು ಅರ್ಜಿ ಬಂದಿರುವುದು ಗಂಭೀರ ವಿಚಾರವಾಗಿದೆ. ತಾಲೂಕು ಕಚೇರಿಗಳಲ್ಲಿ ಜನರ ಸಮಸ್ಯೆಗಳು ಬಗೆಹರಿಸುವುದರಲ್ಲಿ ವೈಫಲ್ಯವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಶ್ರೇಯಸ್‌ ಪಟೇಲ್, ಶಾಸಕ ಸಿ.ಎನ್.ಬಾಲಕೃಷ್ಣ, ಕವಿಕಾ ನಿಗಮದ ಅಧ್ಯಕ್ಷ ಲಲಿತ್‌ ರಾಘವ್, ಜಿಲ್ಲಾಧಿಕಾರಿ ಕೆ. ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಜಿಲ್ಲಾ ಪಂಚಾಯಿತಿ ಸಿಇಒ ಬಿ. ಆರ್. ಪೂರ್ಣಿಮ, ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್, ಡಿಎಫ್‌ಒ ಸೌರಭ್‌ಕುಮಾರ್ ಮತ್ತಿತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ - ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ