ಮುಡಾ ಪ್ರಾಸಿಕ್ಯೂಷನ್ ಸಂಕಷ್ಟ; ಸಿಎಂ ಸಿದ್ದರಾಮಯ್ಯ ಹೊರಗಿಟ್ಟು ಸಚಿವ ಸಂಪುಟ ಸಭೆ ಆಯೋಜನೆ

Published : Aug 01, 2024, 12:22 PM ISTUpdated : Aug 01, 2024, 12:32 PM IST
ಮುಡಾ ಪ್ರಾಸಿಕ್ಯೂಷನ್ ಸಂಕಷ್ಟ; ಸಿಎಂ ಸಿದ್ದರಾಮಯ್ಯ ಹೊರಗಿಟ್ಟು ಸಚಿವ ಸಂಪುಟ ಸಭೆ ಆಯೋಜನೆ

ಸಾರಾಂಶ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ನೊಟೀಸ್ ಜಾರಿ ಬೆನ್ನಲ್ಲಿಯೇ ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ.

ಬೆಂಗಳೂರು (ಆ.01): ರಾಜ್ಯದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಹಿನ್ನೆಲೆಯಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳ್ಳಂಬೆಳಕ್ಕೆ ಎಲ್ಲ ಸಚಿವರನ್ನು ಬ್ರೇಕ್‌ ಫಾಸ್ಟ್ ಮೀಟಿಂಗ್‌ಗೆ ಆಹ್ವಾನಿಸಿದ್ದರು. ಈ ವೇಳೆ ಸಚಿವರೊಂದಿಗೆ ಚರ್ಚೆ ಮಾಡಿ ತಮಗೆ ರಾಜ್ಯಪಾಲರಿಂದ ಕೊಟ್ಟ ನೋಟೀಸ್‌ಗೆ ಉತ್ತರ ನೀಡುವ ಬಗ್ಗೆ ಚರ್ಚೆ ಮಾಡಿದ್ದಾರೆ. ಎಲ್ಲ ಸಚಿವರಿಗೂ ಈ ನೋಟೀಸ್‌ನಲ್ಲಿ ಯಾವುದೇ ಸತ್ಯಾಂಶವಿಲ್ಲ, ತಮ್ಮ ಬೆಂಬಲಕ್ಕೆ ಇಲ್ಲುವಂತೆ ಎಲ್ಲ ಸಚಿವರಿಗೂ ಸಿಎಂ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೈಕಮಾಂಡ್ ತಮ್ಮ ನೈತಿಕ ಬೆಂಬಲಕ್ಕೆ ನಿಂತಿದೆ ಎಂಬುದನ್ನು ತಿಳಿಸಿದ್ದಾರೆ. ಇನ್ನು ರಾಜ್ಯಪಾಲರ ನೋಟೀಸ್‌ಗೆ ಕಾನೂನು ಹೋರಾಟ ಮಾಡುವುದೇ ಸೂಕ್ತ ಎಂದು ಸಚಿವರೊಂದಿಗೆ ಚರ್ಚೆ ಮಾಡಿದ್ದಾರೆ. ಈ ವಿಷಯವನ್ನು ಜನರ ಬಳಿಗೂ ಕೊಂಡೊಯ್ಯಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಹೋರಾಟದತ್ತ ರಾಜ್ಯ ಸರ್ಕಾರ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಬಿಜೆಪಿಯವರು ಸಿದ್ದರಾಮಯ್ಯ ಸರ್ಕಾರ ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ; ಶಾಸಕ ಶಿವಲಿಂಗೇಗೌಡ ಎಚ್ಚರಿಕೆ

ಸಿಎಂ ಸಿದ್ದರಾಮಯ್ಯ ಹೊರಗಿಟ್ಟು ಸಚಿವ ಸಂಪುಟ ಸಭೆ:
ಇದರ ಬೆನ್ನಲ್ಲಿಯೇ ಎಲ್ಲ ಸಚಿವರು ಸಚಿವ ಸಂಪುಟ ಸಭೆಗೆ ಹಾಜರಾಗಲು ತೆರಳಿದರು. ಆದರೆ, ಈ ಸಚಿವ ಸಂಪುಟ ಸಭೆಯಲ್ಲಿ ಮುಡಾ ಪ್ರಾಸಿಕ್ಯೂಷನ್ ನೋಟೀಸ್ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ಸಭೆ ನಡೆಸಲಾಗುತ್ತದೆ. ಅಂದರೆ, ಇಂದಿನ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸುವುದಿಲ್ಲ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟರೆ ಅದು ಕಾನೂನಾತ್ಮಕ ವಾಗಿ ಸರಿ ಅಲ್ಲ. ಹಾಗಾಗಿ ಇದರ ವಿರುದ್ದ ಕಾನೂನು ಹೋರಾಟ ಮಾಡಲು ತೀರ್ಮಾನ ಮಾಡುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುವ ಸಾಧ್ಯತೆಯಿದೆ. ಇದು ಸಿಎಂ ಸಿದ್ದರಾಮಯ್ಯಗೆ ಸಂಬಂಧಿಸಿದ ವಿಚಾರ ಆಗಿರುವುದರಿಂದ ಈ ಸಭೆಯಲ್ಲಿ ಸಿಎಂ ಭಾಗಿ ಆಗಲ್ಲ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಿಂದ ನೀಡಲಾಗಿರುವ ನೊಟೀಸ್‌ಗೆ ಉತ್ತರ ಕೊಡುವ ನಿರ್ಣಯ ಕೈಗೊಳ್ಳಲಾಗುವುದು. ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿರುವ ದೂರಿನಲ್ಲಿ‌ ನೈಜ ವಿವರ ಇಲ್ಲ. ಕಾರಣ ಕೇಳಿ‌ ನೋಟೀಸ್ ತಕ್ಷಣ ಕೊಟ್ಟ ಬಗ್ಗೆ ಆಕ್ಷೇಪಿಸಬೇಕು. ನೊಟೀಸ್ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನ ಕೈಗೊಳ್ಳಬೇಕು. ಎಲ್ಲ ಸಚಿವರೂ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲಬೇಕು. ರಾಜ್ಯಪಾಲರ ನೊಟೀಸ್‌ಗೆ ಯಾವುದೇ ಮಾನ್ಯತೆ ಇಲ್ಲದಂತೆ ಮಾಡಬೇಕು. ಇನ್ನು ಸಿಎಂ ವಿರುದ್ಧ ನೀಡಲಾದ ದೂರಿನಲ್ಲಿ ಮಾನ್ಯ ಮಾಡಬಹುದಾದ ವಿವರಗಳಿಲ್ಲ. ಇನ್ನು ದೂರು ಕೊಟ್ಟ ತಕ್ಷಣವೇ ರಾಜ್ಯಪಾಲರು ನೊಟೀಸ್ ಕೊಟ್ಟಿದ್ದೇ ಅನುಮಾನ ಮೂಡಿಸಿದೆ. ಸಿಎಂ ಸಿದ್ದರಾಮಯ್ಯನವರೇ ಆರೋಪಿ ಅನ್ನುವ ಹಾಗೆ ನೋಟೀಸ್ ಕೊಡಲಾಗಿದೆ. ಅದಕ್ಕೆ ನೊಟೀಸ್ ಹಿಂಪಡೆಯಿರಿ ಅಂತ ಸಚಿವ ಸಂಪುಟದ ಸಭೆಯಲ್ಲಿ ನಿರ್ಣಯ ಮಾಡಲಾಗುವುದು ಎಂದು ತಿಳಿದುಬಂದಿದೆ.

ಸರ್ಕಾರ ಕೆಡವಲು ಬಿಜೆಪಿ-ಜೆಡಿಎಸ್ ಯತ್ನ: ಸಚಿವ ಕೃಷ್ಣ ಬೈರೇಗೌಡ

ಪ್ರಾಸಿಕ್ಯೂಷನ್ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸಭೆಗೆ ಹಾಜರಾಗುವಂತಿಲ್ಲ: ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಕೇಸ್‌ಗೆ ಸಂಬಂಧಿಸಿದಂತೆ ಶೋಕಾಸ್ ನೋಟೀಸ್ ಕೊಟ್ಟಿದ್ದಾರೆ. ಈಗ ನಾವೆಲ್ಲ ಕೂತು ಚರ್ಚೆ ಮಾಡಿದ್ದೇವೆ. ಇವತ್ತಿನ ಕ್ಯಾಬಿನೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲ್ಲ. ಶೋಕಾಸ್ ನೋಟೀಸ್ ಬಗ್ಗೆ ಒಂದು ತೀರ್ಮಾನಕ್ಕೆ ಬರುತ್ತೇವೆ. ಅಲ್ಲಿ ಚರ್ಚೆ ಮಾಡಿದ ಬಳಿಕ ಎಲ್ಲ ಗೊತ್ತಾಗುತ್ತದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಇರೋದರಿಂದ ಅವರು ಭಾಗಿ ಆಗಲ್ಲ. ಯಾಕೆಂದ್ರೆ ಈ ಕ್ಯಾಬಿನೆಟ್ ನಲ್ಲಿ ಅವರು ಭಾಗ ಆಗಿರಬಾರದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

US-Iran peace talks in Pakistan: ಕದನ ನಿಲ್ಲಿಸುವ ದಲ್ಲಾಳಿತನಕ್ಕೆ ಪಾಕ್‌ ಇಳಿದಿದ್ದೇಕೆ!?
ಮತದಾನ ಮುಗಿದಿದೆ, ರಿಲ್ಯಾಕ್ಸ್ ಮೂಡ್‌ನಲ್ಲಿ ಕದನ ಕಲಿಗಳು, ಏನು ಮಾಡುತ್ತಿದ್ದಾರೀಗ?