ಕಾಂಗ್ರೆಸ್‌ ಸಿಎಂ ಆಕಾಂಕ್ಷಿ ಪಟ್ಟಿ ಕ್ರಿಕೆಟ್‌ ಟೀಂ ಕಟ್ಟುವಷ್ಟಿದೆ: ಸಂಸದ ಸುಧಾಕರ್‌

Published : Dec 01, 2024, 12:23 PM IST
ಕಾಂಗ್ರೆಸ್‌ ಸಿಎಂ ಆಕಾಂಕ್ಷಿ ಪಟ್ಟಿ ಕ್ರಿಕೆಟ್‌ ಟೀಂ ಕಟ್ಟುವಷ್ಟಿದೆ: ಸಂಸದ ಸುಧಾಕರ್‌

ಸಾರಾಂಶ

ಎಲ್ಲ ಪಕ್ಷಗಳಲ್ಲೂ ಬಣಗಳರುತ್ತವೆ. ವಿರೋಧ ಪಕ್ಷವಾಗಿ ಬಿಜೆಪಿ ಈಗ ಒಗ್ಗಟ್ಟು ಪ್ರದರ್ಶನ ಮಾಡಬೇಕಿತ್ತು. ಆದರೆ ಬಹಿರಂಗವಾಗಿ ಬಣಗಳಾಗಿರುವುದು ದುರಾದೃಷ್ಟಕರ, ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುತ್ತದೆ: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌. 

ಚಿಕ್ಕಬಳ್ಳಾಪುರ(ಡಿ.01):  ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ನೋಡಿದರೆ ಕ್ರಿಕೆಟ್ ಟೀಂ ಕಟ್ಟಬಹುದು ಎಂದು ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌ ಹೇಳಿದರು. 

ನಗರದ ನಗರಸಭೆ ಆವರಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಅಧಿಕಾರದಲ್ಲಿದ್ದಾಗ ಒಂದು ತರ ಬಣ, ಅಧಿಕಾರದಲ್ಲಿಲ್ಲ ಎಂದಾಗಮತ್ತೊಂದು ರೀತಿಯ ಬಣ, ಕಾಂಗ್ರೆಸ್‌ನಲ್ಲಿ ಎಷ್ಟು ಬಣಗಳಿವೆ ಎಂದು ಪ್ರಶ್ನಿಸಿದರು. 

ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ: ಅಶೋಕ್ ಆಕ್ರೋಶ

ಬಿಜೆಪಿಯಲ್ಲೂ ಬಣ ವಿಷಾದಕರ: 

ಸಚಿವ ಕೆ.ಎಚ್. ಮುನಿಯಪ್ಪನವರು ತಾವು ಸೀನಿಯರ್‌ ಮೋಸ್ಟ್ ಇದ್ದೇನೆ ತಮಗೇ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಕೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಅದಕ್ಕೆ ಈಗ ಕೆ.ಎಚ್. ಮುನಿಯಪ್ಪನವರ ಗುಂಪಾಗಿದೆ ಎಂದು ಹೇಳಲಿಕ್ಕೆ ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ಸಂಸದ ಡಾ. ಕೆ.ಸುಧಾಕರ್‌ ಮಾಧ್ಯಮಗಳ ಜತೆ ಮಾತನಾಡಿದರು. 

ಎಲ್ಲ ಪಕ್ಷಗಳಲ್ಲೂ ಬಣಗಳರುತ್ತವೆ. ವಿರೋಧ ಪಕ್ಷವಾಗಿ ಬಿಜೆಪಿ ಈಗ ಒಗ್ಗಟ್ಟು ಪ್ರದರ್ಶನ ಮಾಡಬೇಕಿತ್ತು. ಆದರೆ ಬಹಿರಂಗವಾಗಿ ಬಣಗಳಾಗಿರುವುದು ದುರಾದೃಷ್ಟಕರ, ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುತ್ತದೆ ಎಂದರು. 

ಕಾಂಗ್ರೆಸ್ ನಲ್ಲಿ ಎಷ್ಟೇ ಬಣ ಮತ್ತು ಬಿನ್ನಾಭಿಪ್ರಾಯಗಳಿದ್ದರೂ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತೋರ್ಪಡಿಸಿಕೊಳ್ಳದೆ ಒಂದೆ ವೇದಿಕೆಯಲ್ಲಿ ಒಟ್ಟಿಗೆ ಇದ್ದು ಒಂದು ಒಗ್ಗಟ್ಟಿನ ರಾಜಕೀಯ ಸಂದೇಶವನ್ನು ಈ ರಾಜ್ಯದಲ್ಲಿ ಅವರು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಅದರಲ್ಲಿ ಎರಡು ಮಾತಿಲ್ಲಾ, ಅದೇ ಕಾರಣದಿಂದಲೇ 2023ರಲ್ಲಿ ಇಷ್ಟು ದೊಡ್ಡಸಂಖ್ಯೆಯಲ್ಲಿ ಶಾಸಕರನ್ನು ಗೆಲ್ಲಿಸಿಕೊಂಡಿದ್ದಾರೆ. ಹಿಂದೆ ನಮ್ಮ ಸರ್ಕಾರವಿದ್ದಾಗ ನಡೆದ ಉಪ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೆವು ಎಂದರು. 

ಜಿಪಂ, ತಾಪಂ ಚುನಾವಣೆ ನಡೆಸಲಿ: 

ಈಗ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರಗಳನ್ನು ಗೆದ್ದಿದೆ.ಹಾಗಾದರೆ ಅವರೆ ಅಧಿಕಾರದಲ್ಲಿದ್ದಾಗ ನಡೆದ ಲೋಕಸಭೆ ಚುನಾವಣೆಯಲ್ಲಿ ಅವರು ಏಕೆ ಸೋತರು. ಈಗ ರಾಜ್ಯ ಸರ್ಕಾರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲಿ ಯಾರು ಗೆಲ್ಲುತ್ತಾರೋ ಗೊತ್ತಾಗುತ್ತೆ, ಅದಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆ ನಡೆಸಲು ಮೀನಮೇಷ ಎಣಿಸುತ್ತಿದೆ. ಪ್ರತಿ ಪಕ್ಷವಾಗಿ ಬಿಜೆಪಿ ಜೆಡಿಎಸ್ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಜನರು ಬಯಸಿದಂತೆ ಇಂತಹ ಕೆಟ್ಟ ಸರ್ಕಾರವನ್ನು ಮನೆಗೆ ಕಳುಹಿಸಬಹುದು ಎಂದರು.

ಚಂದ್ರಶೇಖರ್‌ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲು ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ವಾಕ್ ಸ್ವಾತಂತ್ರ್ಯ, ಡೆಮಾಕ್ರಸಿ ಅಂತ ಉದ್ದುದ್ದ ಭಾಷಣ ಮಾಡ್ತಾರೆ. ಒಬ್ಬೊಬ್ಬರ ಅಭಿಪ್ರಾಯ ಅದು ಅವರು ವ್ಯಕ್ತಪಡಿಸುತ್ತಾರೆ. ಆದರೆ ಅದು ತಪ್ಪು. ಸರಿ ಅಂತ ನಾನು ವಿಶ್ಲೇಷಣೆ ಮಾಡಲ್ಲ ಎಂದರು.

ವಕ್ಫ್ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದೆ: ಸಚಿವ ಎಂಸಿ ಸುಧಾಕರ್ ಕಿಡಿ

ಲೋಕಸಭೆ ಮತ್ತು ರಾಜ್ಯ ಸಭೆ ಕಲಾಪಗಳನ್ನು ಕೇವಲ ಒಬ್ಬ ವ್ಯಕ್ತಿಯ ವಿಷಯ ಇಟ್ಟುಕೊಂಡು ಹಾಳು ಮಾಡುತ್ತಿದ್ದಾರೆ. ಅದು ತಪ್ಪು. ಅವರ ಮೇಲೆ ಅಮೇರಿಕಾ ದೇಶದಲ್ಲಿ ಎಫ್‌ ಐಆರ್‌ ಆಗಿರೋದು. ಆ ದೇಶ ಅದನ್ನು ನೋಡಿಕೊಳ್ಳುತ್ತದೆ. ನೀವು ಯಾಕೆ ಸಂಸತ್ತಿನ ಉಭಯ ಸದನಗಳ ಕಲಾಪ ಹಾಳು ಮಾಡುತ್ತಿದ್ದೀರಿ ಎಂದು ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದು ಕೊಂಡರು.

ಈ ವೇಳೆ ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಉಪಾಧ್ಯಕ್ಷ ಜೆ.ನಾಗರಾಜ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಸಂತೋಷ್, ಅರುಣ್, ನಗರಸಭೆ ಸದಸ್ಯರು ಮತ್ತಿತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌