ವಿಜಯೇಂದ್ರ ಅಡ್ಡದಾರಿ ಮೂಲಕ ರಾಜ್ಯಾಧ್ಯಕ್ಷರಾಗಲು ಆಂತರಿಕ ಪ್ರಜಾಪ್ರಭುತ್ವ ಬಲಿಕೊಟ್ಟು ಜಿಲ್ಲಾಧ್ಯಕ್ಷರ ನೇಮಕ ಕೈಗೊಳ್ಳುತ್ತಿದ್ದಾರೆ. ಹಿರಿಯ ನಾಯಕರನ್ನು ಸಮಾಧಿ ಕಟ್ಟಲು ಹೊರಟಿದ್ದಾರೆ ಎಂದು ನೇರ ವಾಗ್ದಾಳಿ ನಡೆಸಿದ ಸುಧಾಕರ್,
ಬೆಂಗಳೂರು(ಜ.30): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಪಕ್ಷದೊಳಗೆ ನಾಯಕರ ಅಸಮಾಧಾನ ಹೆಚ್ಚುತ್ತಿದ್ದು, ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಮಾಜಿ ಸಚಿವರೂ ಆಗಿರುವ ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಅವರು ತಿರುಗಿ ಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷರ ನೇಮಕ ಹಿನ್ನೆಲೆಯಲ್ಲಿ ಸಿಡಿದೆದ್ದಿರುವ ಸುಧಾಕರ್, 'ವಿಜಯೇಂದ್ರ ಅಡ್ಡದಾರಿ ಮೂಲಕ ರಾಜ್ಯಾಧ್ಯಕ್ಷರಾಗಲು ಆಂತರಿಕ ಪ್ರಜಾಪ್ರಭುತ್ವ ಬಲಿಕೊಟ್ಟು ಜಿಲ್ಲಾಧ್ಯಕ್ಷರ ನೇಮಕ ಕೈಗೊಳ್ಳುತ್ತಿದ್ದಾರೆ. ಹಿರಿಯ ನಾಯಕರನ್ನು ಸಮಾಧಿ ಕಟ್ಟಲು ಹೊರಟಿದ್ದಾರೆ' ಎಂದು ನೇರ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತ ನಾಡಿ, 'ವಿಜಯೇಂದ್ರ ಅವರ ಅಹಂಕಾರ, ದರ್ಪ ಮಿತಿ ಮೀರಿದೆ ಏಕಚಕ್ರಾಧಿಪತಿ ಎಂಬಂತೆ ವರ್ತಿಸುತ್ತಿದ್ದಾರೆ. ಪಕ್ಷವೇನು ಅವರ ಸ್ವಂತ ಆಸ್ತಿಯೇ? ಅವರ ಧೋರಣೆ ಹಾಗೂ ಅಹಂಕಾರಕ್ಕೆ ನನ್ನ ಧಿಕ್ಕಾರ' ಎಂದು ಹರಿಹಾಯ್ದರು.
ಅಭಿವೃದ್ಧಿ ಮರೆತ ಸರ್ಕಾರದಿಂದ ಬರೀ ಮುಖ್ಯಮಂತ್ರಿ ಬದಲಾವಣೆ ಚರ್ಚೆ: ಸುಧಾಕರ್ ವಾಗ್ದಾಳಿ
'ಇಷ್ಟು ದಿನ ಸಮಾಧಾನದಿಂದ ಇದ್ದದ್ದು ಮುಗಿಯಿತು. ಇನ್ನು ಯುದ್ಧವೊಂದೇ ಉಳಿದದ್ದು. ಶೀಘ್ರದಲ್ಲೇ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ವಿಜಯೇಂದ್ರ ಅವರ ವ್ಯವಹಾರ, ರಾಜಕಾರಣ ಎಲ್ಲವನ್ನೂ ಬಿಚ್ಚಿಡುತ್ತೇನೆ. ವರಿಷ್ಠರು ಅವರ ಧೋರಣೆಯನ್ನಾದರೂ ಬದಲಾ ಯಿಸಲಿ, ಅವರನ್ನಾದರೂ ಬದಲಾಯಿಸಲಿ' ಎಂದು ತೀಕ್ಷವಾಗಿ ಹೇಳಿದರು.
ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ ಎಂಬ ಕಾರಣಕ್ಕೆನಾನು 2019ರಲ್ಲಿ ಕಾಂಗ್ರೆಸ್ ತೊರೆದು ಬಂದೆ. ಎಷ್ಟೇ ಅಪಮಾನವಾದರೂ, ರಾಜಕೀಯವಾಗಿ ತುಳಿಯಲು ಯತ್ನಿಸಿದರೂ ಪಕ್ಷ ಬಿಡಲಿಲ್ಲ. ನಂತರ ನಾನು ಸೋತರೂ ಮಾಜಿ ಸಿಎಂಗಳಾದ ಬಿ.ಎಸ್ .ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಸಹಕಾರದಿಂದ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಬಿಜೆಪಿ ಪಾಲಿಗೆ ಮರಳುಭೂಮಿಯಾಗಿರುವ ಈ ಪ್ರದೇಶದಲ್ಲಿ ಪಕ್ಷ ಬೆಳೆಸಲು ಶ್ರಮಿಸಿದ್ದೇನೆ. ಆದರೆ, ವಿಜಯೇಂದ್ರ ಅವರು ಯಾವುದೇ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪಕ್ಷವನ್ನು ಅವನತಿಗೆ ಕೊಂಡೊಯ್ಯುವ ಜೊತೆಗೆ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಪಕ್ಷದ ಪದಾಧಿಕಾರಿಗಳ ಆಯ್ಕೆ ನಡೆಯುವಾಗ ಎಲ್ಲರ ಅಭಿಪ್ರಾಯ ಕೇಳಬೇಕು. ಆದರೆ ಏಕಚ ಕ್ರಾಧಿಪತ್ಯ ಎನ್ನುವಂತೆ ವಿಜಯೇಂದ್ರ ಅವರು ತಮ್ಮ ಮಾತೇ ನಡೆಯಬೇಕೆಂಬಂತೆ ವರ್ತಿಸಿದ್ದಾರೆ. ಜೀ ಹುಜೂರ್, ಯೆಸ್ ಎನ್ನುವವರನ್ನು ಪದಾಧಿಕಾರಿಗಳನ್ನಾಗಿ ನೇಮಕಮಾಡಲಾಗಿದೆ. ಆದರೆ, ಅಂಥವರಿಂದ ಪಕ್ಷಕ್ಕೆ ಅನುಕೂಲವಾಗುವುದಿಲ್ಲ. ಈ ಬಗ್ಗೆ ಆರ್‌ಎಸ್‌ಎಸ್‌ನ ಹಿರಿಯರಿಗೆ ತಿಳಿಸಿದ್ದೇನೆ. ಎಷ್ಟೇ ನೋವಾದರೂ ಪಕ್ಷದ ವಿರುದ್ದವಾಗಿ ಮಾಧ್ಯಮಗಳ ಮುಂದೆ ಬಂದು ಮಾತನಾಡಿಲಿಲ್ಲ. ಇನ್ನು ಸಾಧ್ಯವಿಲ್ಲ ಎಂಬಕಾರಣಕ್ಕಾಗಿ ಬಹಿರಂಗವಾಗಿ ಮಾತನಾಡುತ್ತಿದ್ದೇನೆ ಎಂದು ಸುಧಾಕರ್ ಸಮಜಾಯಿಷಿ ನೀಡಿದರು.
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಉತ್ತಮವಾಗಿ ನಡೆದಿದೆ. ನಮ್ಮ ಕಾರ್ಯಕರ್ತರು 58 ಸಾವಿರ ಸದಸ್ಯರನ್ನು ನೋಂದಣಿ ಮಾಡಿಸಿದ್ದಾರೆ. ಪಕ್ಷಕ್ಕಾಗಿ ಅಹರ್ನಿಶಿಯಾಗಿ ದುಡಿದವರನ್ನು ಕೈ ಬಿಟ್ಟು, ವಿರೋಧವಾಗಿ ಕೆಲಸ ಮಾಡಿದವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಚಿಕ್ಕಬಳ್ಳಾ ಪುರದ ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆಯೇ ನಡೆದಿಲ್ಲ. ನಾನು ಹೇಳಿದವರನ್ನು ಆಯ್ಕೆ ಮಾಡಿಲ್ಲ ಎಂದಾದರೆ ನಾನು ಕಾರ್ಯಕರ್ತರಿಗೆ ಏನೆಂದು ಉತ್ತರ ನೀಡಲಿ ಎಂದರು.
ಬಿಎಸ್‌ವೈ ರೀತಿ ನಾಯಕತ್ವ ಇಲ್ಲ: ವಿಜಯೇಂದ್ರ
ಅವರ ಧೋರಣೆ ಅನೇಕ ಮುಖಂಡರಿಗೆ ನೋವು ತಂದಿದೆ. ಕೇಂದ್ರದ ನಾಯಕರು ಅವರಿಗೆ ಎಲ್ಲ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಆದರೆ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಗುಣ ಅವರಲ್ಲಿಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾರೆಯೋ ಅಥವಾ ಅದಕ್ಕೂ ಮೇಲಿನ ಹುದ್ದೆಯಲ್ಲಿದ್ದಾರೆಯೋ ಗೊತ್ತಿಲ್ಲ. ಯಡಿಯೂರಪ್ಪ ಹೀಗೆ ಅಲ್ಲ. ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದರು. ವಿಜ ಯೇಂದ್ರ ಯಡಿಯೂರಪ್ಪರ ಮಗ ಆಗಿರಬಹುದಷ್ಟೇ ಹೊರತು ಅವರಂತೆ ನಾಯಕತ್ವಗುಣ ಬೆಳೆಸಿಕೊಳ್ಳಲಿಲ್ಲ ಎಂದು ಬೇಸರದಿಂದ ಹೇಳಿದರು.
ನಾನು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಸಂಸತ್ ಸದಸ್ಯನಾಗಿದ್ದೇನೆ. ಕಾಂಗ್ರೆಸ್ ಆಡಳಿತ ಇದ್ದಾಗಲೂ ನಾನು ಇಲ್ಲಿ ಗೆದ್ದಿದ್ದೇನೆ. ಇವರ ಹಿಂಬಾಲಕರು ನನ್ನನ್ನು ಸೋಲಿಸಲು ಯತ್ನಿಸಿದ್ದರು. ಆದರೆ ಜನರ ಆಶೀರ್ವಾ ದದಿಂದ ಗೆದ್ದು ಬಂದಿದ್ದೇನೆ. ಪದಾಧಿಕಾರಿಗಳ ಆಯ್ಕೆಗೆ ಸಂಬಂಧಿಸಿ ಮಾತನಾಡಲು ವಿಜಯೇಂದ್ರ ಅವರಿಗೆ ಕರೆ ಮಾಡಿದರೆ ಸ್ವೀಕರಿಸಲಿಲ್ಲ. ನಡ್ಡಾ ಅವರು ಕೇವಲ ಮೆಸೇಜ್ ಮಾಡಿದರೂ ಭೇಟಿಗೆ ಅವಕಾಶ ನೀಡುತ್ತಾರೆ. ಆದರೆ ಇಲ್ಲಿ ರಾಜ್ಯಾಧ್ಯಕ್ಷರು ಭೇಟಿಯೂ ನೀಡುವುದಿಲ್ಲ, ಎಂದರು.
ನನ್ನ ಸಮಾಧಿಗೆ ಯತ್ನ:
ನಾನು ಪಕ್ಷಕ್ಕಾಗಿ ಶ್ರಮಿಸಿದ್ದರೂ ನನ್ನನ್ನು ಸಮಾಧಿ ಮಾಡಲು ಪ್ರಯತ್ನ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿನ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಕೆಲಸ ಮಾಡಿ ದವರನ್ನು ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಮಾಡುತ್ತಾರೆ. ಗೋವಿಂದ ಕಾರಜೋಳ ಅವರಿಗೆ ಹೊಡೆಯಲು ಬಂದವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡುತ್ತಾರೆ. ಯಾವುದೇ ಮುಖಂಡರಿಗೆ ಗೌರವ ನೀಡುತ್ತಿಲ್ಲ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸುಧಾಕರ್, ನಾನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕಾಗಿ ನನ್ನ ಮೇಲೆ ದ್ವೇಷ ಕಾರುತ್ತಿದ್ದಾರೆ ಎಂದು ಹೇಳಿದರು.
ನಾನು ಬಿಜೆಪಿಗೆ ಬಂದಿದ್ದಕ್ಕೆ ನನಗೆ ಈ ರೀತಿಯ ಪರಿಸ್ಥಿತಿ ತಂದಿದ್ದಾರೆ. ವಿಜಯೇಂದ್ರ ಪಕ್ಷವನ್ನು ಅವನತಿಗೆ ಕೊಂಡೊಯ್ಯುವ ಕೆಲಸ ಮಾಡುತ್ತಿದ್ದಾರೆ. ಅನೇಕ ಸಂಸದರು ಅವರ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಇದಕ್ಕೆ ಇತಿಶ್ರೀ ಹಾಡಬೇಕೆಂಬ ಕಾರಣಕ್ಕೆ ಎಲ್ಲರೂ ಪತ್ರ ಬರೆದು ವರಿಷ್ಠರಿಗೆ ಕಳುಹಿಸುತ್ತೇವೆ ಎಂದು ಸುಧಾಕರ್ ತಿಳಿಸಿದರು.
ಡಾ.ಕೆ.ಸುಧಾಕರ್ ಸಿಟ್ಟಿಗೇನು ಕಾರಣ?
• ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಪಟ್ಟಿಯನ್ನು ರಾಜ್ಯ ಘಟಕ ಬುಧವಾರ ಪ್ರಕಟಿಸಿದೆ
• ಚಿಕ್ಕಬಳ್ಳಾಪುರ ಜಿಲ್ಲಾ ಘಟಕಕ್ಕೆ ಸುಧಾಕರ್‌ಗೆ ಬೇಡವಿದ್ದ ಮುಖಂಡನ ನೇಮಿಸಲಾಗಿದೆ
. ನೇಮಕಗೊಂಡಿರುವ ಮುಖಂ ಡ ತಮ್ಮನ್ನು ಸೋಲಿಸಲು ಯತ್ನಿಸಿದ್ದರು: ಸುಧಾಕರ್
• ಈ ಬಗ್ಗೆ ಹೇಳಲು ಕರೆ ಮಾಡಿದರೆ ವಿಜಯೇಂದ್ರ ಕರೆ ಸ್ವೀಕರಿಸಿಲ್ಲ ಎಂದು ಆಕ್ರೋಶ
ಮಾಧ್ಯಮಗಳ ಹತ್ತಿಕ್ಕುವ ಕೆಲಸ ಬೇಡ: ಸಂಸದ ಡಾ.ಸುಧಾಕರ್
ಸಿದ್ದರಾಮಯ್ಯ ಆಗಲೇ ಎಚ್ಚರಿಸಿದ್ದರು
ನಿಮ್ಮನ್ನು ಬಳಸಿಕೊಂಡು ಕೈಬಿಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಆದರೂ ನಾನು ನಂಬಿಕೆಯಿಂದ ಬಿಜೆಪಿಗೆ ಬಂದಿದ್ದಕ್ಕೆ ಈ ರೀತಿ ಮಾಡಿದ್ದಾರೆ. ಜನರು ನನ್ನ ಜೊತೆಗಿದ್ದಾರೆ. ರಾಷ್ಟ್ರೀಯ ನಾಯಕರು ಮಧ್ಯೆ ಪ್ರವೇಶ ಮಾಡಿ ಸರಿ ಮಾಡದಿದ್ದರೆ ಪರಿಸ್ಥಿತಿ ಗಂಭೀರವಾಗುತ್ತದೆ: ಚಿಕ್ಕಬಳ್ಳಾಪುರ ಲೋಕಸಭೆ ಸದಸ್ಯ ಡಾ.ಕೆ.ಸುಧಾಕರ್
ಸುಧಾಕರ್ ಅನಿಸಿಕೆ ಕೇಳಿಯೇ ನೇಮಕ
ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಎಂಬುದು ರಾತ್ರೋರಾತ್ರಿ ತೆಗೆದುಕೊಂಡ ನಿರ್ಣಯ ಅಲ್ಲ. ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾ ಅಧ್ಯಕ್ಷರ ನೇಮಕ ಸಂಬಂಧ ಸ್ಥಳೀಯ ಸಂಸದ ಡಾ.ಕೆ. ಸುಧಾಕರ್ ಅವರ ಅಭಿಪ್ರಾಯವನ್ನೂ ಪಡೆಯಲಾಗಿದೆ. ಅವರು ಬೇಕಾದರೆ ಪಕ್ಷದ ವರಿಷ್ಠರ ಗಮನಕ್ಕೆ ತರಬಹುದು: ಪಿ.ರಾಜೀವ್ ಬಿಜೆಪಿ ಪ್ರಧಾನ ಕಾರ್ಯದರ್ಶಿ