
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಫೆ.26): ಲೋಕಸಭೆಗೆ ಚುನಾವಣೆ ಹತ್ತಿರ ಬರುತ್ತಿರುವಂತೆಯೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ರಾಜಕೀಯಪಕ್ಷಗಳು ಈ ಬಾರಿ ನಾವೇ ಗೆಲ್ಲುತ್ತೇವೆ ನಮ್ಮದೇ ಅಧಿಕಾರ ಎಂದು ಹೇಳಿ ಕೊಂಡು ಬರುತ್ತಿವೆ. ರಾಜಕೀಯ ಪಕ್ಷದ ಮುಖಂಡರು ಈಗಾಗಲೇ ಕಸರತ್ತು ಮಾಡಿ ಕೊಂಡು ಜನರು ಬಳಿ ಹೋಗುತ್ತಿದ್ದಾರೆ. ಇದರ ನಡುವೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ಭವಿಷ್ಯ ಬಿಜೆಪಿ ಪಾಲಿಗೆ ಸಿಹಿ ನೀಡಿದೆ.
ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ:
ಈ ಬಾರಿ ಕೇಂದ್ರದಲ್ಲಿ ಯಾರು ಅಧಿಕಾರಕ್ಕೆ ಬರುತ್ತಾರೆ ಎಂದು ಮೈಲಾರಲಿಂಗ ಕಾರ್ಣಿಕ ಭವಿಷ್ಯ ನುಡಿದಿದ್ದು,ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು,ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ಭವಿಷ್ಯ ನುಡಿದಿದೆ. ಈ ಬಾರಿಯೂ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಕಾರ್ಣಿಕ ಭವಿಷ್ಯ ನುಡಿದಿದ್ದು, ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್ ಎಂದು ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರ ಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದೆ.
ಅನಂತ್- ರಾಧಿಕಾ ನಿಶ್ಚಿತಾರ್ಥಕ್ಕೆ ಉಂಗುರ ತಂದವರು ಅಂಬಾನಿ ಕುಟುಂಬಕ್ಕೆ ಅದೃಷ್ಟವಂತೆ, ಯಾರವರು ಗೆಸ್ ಮಾಡಿ!
ಈ ವರ್ಷ ಮಳೆ ಬೆಳೆ ಸಮೃದ್ಧವಾಗಿ ಆಗುತ್ತದೆ. ಮತ್ತೆ ಕಮಲ ಪಕ್ಷ ಅರಳುವುದು ಕಾರ್ಣಿಕ ನುಡಿ ಕೇಳಿ ಬಂದಿದ್ದು, ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ಭವಿಷ್ಯ ನುಡಿದಿದೆ. ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ವಾಷಿಕೋತ್ಸವದಲ್ಲಿ ಕಾರ್ಣಿಕ ನುಡಿಯುವ ಗಣಮಗ ಜಿಗಣೇಹಳ್ಳಿ ಮಂಜುನಾಥ್ ದೇವಸ್ಥಾನದ ಆವರಣದಲ್ಲಿ ಹುಟ್ಟಿದ ಕಮಲ ಆಕಾಶ ಮೆಟ್ಟಿತು. ಮಳೆ ಬೆಳೆ ಸಸಿಯಿತಲೇ ಪರಾಕ್' ಎಂದು ಕಾರ್ಣಿಕ ನುಡಿದಾಗ ಜನರು ಹರ್ಷೋದ್ರೋರ ಮಾಡಿದರು. ಮುಂದಿನ ವರ್ಷ ಮಳೆ ಬೆಳೆ ಸಮೃದ್ಧ ವಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಮಲ ಮತ್ತೆ ಅರಳುತ್ತದೆ ಎಂದು ಸ್ಥಳೀಯರು ಕಾರ್ಣಿಕ ನುಡಿಯನ್ನು ಅರ್ಥೈಸಿದರು. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಮುಂದಿನ ದಿನಗಳಲ್ಲಿ ಕಾರ್ಣಿಕ ಭವಿಷ್ಯ ಏನಾಗುತ್ತೆ ಎಂಬುದನ್ನು ಕಾದು ನೋಡಬೇಕಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.