* ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಿವಾಸಕ್ಕೆ ಬಿಗಿ ಬಂದೋಬಸ್ತ್
* ಬಿಜೆಪಿ ನಾಯಕ ಸಿ.ಟಿ ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಕಾರ್ಯಕರ್ತರು
* ಐಜಿ ರಸ್ತೆಯಲ್ಲಿ ಕಾರ್ಯಕರ್ತರನ್ನು ತಡೆದ ಖಾಕಿ ಪಡೆ
ಚಿಕ್ಕಮಗಳೂರು, (ಆ.21): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ನಿವಾಸಕ್ಕೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಹೌದು...ನೆಹರೂ, ಇಂದಿರಾಗಾಂಧಿ ಟೀಕೆ ವಿರೋಧಿಸಿ ಚಿಕ್ಕಮಗಳೂರು ಕಾಂಗ್ರೆಸ್ ಸಿಟಿ ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಇದರಿಂದ ನಗರದ ಬಸವನಹಳ್ಳಿಯಲ್ಲಿರುವ ಸಿ.ಟಿ.ರವಿ ಮನೆಗೆ ಬಿಜೆಪಿ ಕಾರ್ಯಕರ್ತರು, ಪೊಲೀಸರ ಸರ್ಪಗಾವಲು ಹಾಕಲಾಗಿದೆ.
undefined
ಇಂದು (ಆ.21) ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ತೊಗರಿಹಂಕಲ್ ವೃತ್ತದಲ್ಲಿ ಹಗ್ಗ, ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು.
ಕಾಂಗ್ರೆಸ್ಸಿಗರ ವಿರುದ್ಧ ಮಾನಹಾನಿ ದಾವೆ : ಸಿ.ಟಿ. ರವಿ
ಈ ವೇಳೆ ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಬಳಿಕ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.
ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಸಿ.ಟಿ.ರವಿ ಹೇಳಿಕೆ ಖಂಡನೀಯ. ನೆಹರೂ, ಇಂದಿರಾಗಾಂಧಿ ಮೊದಲಾದ ನಾಯಕರು ದೇಶಕ್ಕೆ ಕೊಡುಗೆ ನೀಡಿದ್ದಾರೆ. ನಾಯಕರನ್ನು ಟೀಕಿಸಬಾರದು ಎಚ್ಚರಿಸಿದರು.