
ಶಿವಮೊಗ್ಗ(ಮಾ.19): ಶ್ರೀರಾಮ ಮಂದಿರ ನಿರ್ಮಾಣ ಮಾಡಿದಾಗ ಕಾಂಗ್ರೆಸ್‌ನವರು ರಾಮ ದೇವರಲ್ಲ, ಕಾಲ್ಪನಿಕ ಕಲ್ಪನೆ ಅಷ್ಟೇ ಎಂದರು. ಕೊನೆಗೆ ಆ ರೀತಿ ಹೇಳಿದ್ದ ಸಿದ್ದರಾಮಯ್ಯ ಅವರೇ ಜೈ ಸೀತಾರಾಮ ಎಂದು ಹೇಳಿದ್ದಾರೆ. ಇದೇ ಮೋದಿ ಶಕ್ತಿ ಎಂದು ಚಿಕ್ಕಮಗಳೂರು-ಉಡುಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ನಗರದ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ಪ್ರಧಾನಿ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್ ಸರ್ಕಾರ ₹324 ಕೋಟಿ ಬರ ಪರಿಹಾರ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ಇದರಲ್ಲಿ ಕೇಂದ್ರದ ಅನುದಾನವೇ ಹೆಚ್ಚಿದೆ ಎಂದರು.
ಬಿಜೆಪಿ ವಿರುದ್ಧ ಜೆಡಿಎಸ್ ಗರಂ: ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದ ಎಚ್‌ಡಿಕೆ
ಈ ಬಾರಿ ಹಿಂದೂ ವಿರೋಧಿಗಳನ್ನು ಅಧಿಕಾರದಿಂದ ದೂರವಿಟ್ಟು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕಿದೆ. ಇದಕ್ಕಾಗಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕತರು ಶ್ರಮ ಹಾಕಬೇಕು ಎಂದು ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.