ಬಿಜೆಪಿ ನಾಯಕನ ಸೋಲಿಗೆ ಕಾರಣರಾದರಾ ಇನ್ನೋರ್ವ ಬಿಜೆಪಿ ನಾಯಕ?

Published : Nov 23, 2018, 09:40 AM IST
ಬಿಜೆಪಿ ನಾಯಕನ ಸೋಲಿಗೆ ಕಾರಣರಾದರಾ ಇನ್ನೋರ್ವ ಬಿಜೆಪಿ ನಾಯಕ?

ಸಾರಾಂಶ

ಬಿಜೆಪಿ ವಲಯದಲ್ಲಿ ಈ ವಿಚಾರವೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಓರ್ವ ಬಿಜೆಪಿ ನಾಯಕನ ಸೋಲಿಗೆ ಇನ್ನೋರ್ವ ಬಿಜೆಪಿ ನಾಯಕ ಕಾರಣವಾಗಿದ್ದಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. 

ಹುಬ್ಬಳ್ಳಿ :  ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆ ಸೋಲಿಗೆ ಸಂಸದ ಪ್ರಹ್ಲಾದ ಜೋಶಿ ಹಾಗೂ ಅವರ ಬೆಂಬಲಿಗರೇ ಕಾರಣ ಎಂದು ಮಾಜಿ ಶಾಸಕ ಎಸ್‌.ಐ. ಚಿಕ್ಕನಗೌಡರ ಪುತ್ರಿ ನಂದಾ ಫೇಸ್‌ಬುಕ್‌ನಲ್ಲಿ ಸಂದೇಶ ಬಿತ್ತರಿಸಿದ್ದು, ಬಿಜೆಪಿ ವಲಯದಲ್ಲಿ ಪರ- ವಿರೋಧ ಚರ್ಚೆಗೆ ಕಾರಣವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆಗೆ ಎಂ.ಆರ್‌.ಪಾಟೀಲ ಮತ್ತು ಎಸ್‌.ಐ.ಚಿಕ್ಕನಗೌಡರ ನಡುವೆ ಪೈಪೋಟಿ ಇತ್ತು. ಕೊನೆಗೆ ಚಿಕ್ಕನಗೌಡರ ಟಿಕೆಟ್‌ ಪಡೆದು ಸ್ಪರ್ಧಿಸಿದ್ದರು. ಇದನ್ನು ಸಹಿಸದ ಸಂಸದ ಜೋಶಿ ಮತ್ತು ಬೆಂಬಲಿಗರು ಬಹಿರಂಗವಾಗಿ ಕಾಂಗ್ರೆಸ್‌ ಅಭ್ಯರ್ಥಿ ಶಿವಳ್ಳಿಗೆ ಮತ ಹಾಕುವಂತೆ ಹೇಳುತ್ತಿದ್ದರು ಎಂದು ನಂದಾ ಆರೋಪಿಸಿದ್ದಾರೆ.

ಸಿ.ಎಸ್‌.ಶಿವಳ್ಳಿ ಅವರ ವಿಜಯೋತ್ಸವದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶಗೌಡ ಭಾಗಿಯಾಗಿದ್ದರು ಎನ್ನಲಾದ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, ‘ಮಾನ್ಯ ಸಂಸದರೇ ಏನಿದು’ ಎಂದು ನಂದಾ ಪ್ರಶ್ನಿಸಿದ್ದಾರೆ.

ಕೆಲವರು ನಂದಾ ಅವರನ್ನು ಫೇಸ್‌ಬುಕ್‌ ರಾಜಕಾರಣಿ ಎಂದು ಕಮೆಂಟ್‌ ಮಾಡಿದ್ದರೆ, ಕೆಲವರು ಈ ಸಲ ಸಂಸದ ಪ್ರಹ್ಲಾದ ಜೋಶಿ ಅವರಿಗೆ ಟಿಕೆಟ್‌ ನೀಡಬಾರದು. ಸಂಸದ ಹಠಾವೋ ಬಿಜೆಪಿ ಬಚಾವೋ ಎಂದು ಒತ್ತಾಯಿಸಿ ಕಮೆಂಟ್‌ ಮಾಡಿದ್ದಾರೆ.

ನಮ್ಮ ತಂದೆ ಸೋಲಿಗೆ ಪಕ್ಷದ ಜಿಲ್ಲಾ ಕಾರ‍್ಯಕಾರಿಣಿ ಸದಸ್ಯ ಮಹೇಶಗೌಡ ಸೇರಿದಂತೆ ಕೆಲ ಮುಖಂಡರೇ ಕಾರಣ. ಪಕ್ಷ ವಿರೋಧಿ ಚಟುವಟಿಕೆ ಮಾಡಿದರು. ಅವರು ಶಿವಳ್ಳಿ ಅವರಿಗೆ ಮತ ಹಾಕಿ ಎಂದು ಹೇಳಿರುವುದಕ್ಕೆ ನಮ್ಮಲ್ಲಿ ಆಡಿಯೋ, ವಿಡಿಯೋ ಇದೆ.

-ನಂದಾ, ಮಾಜಿ ಶಾಸಕ ಚಿಕ್ಕನಗೌಡರ ಪುತ್ರಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹ ಸಚಿವ ಅಮಿತ್‌ ಶಾ - ರಾಹುಲ್ ಗಾಂಧಿ ಮತಚೋರಿ ಸಮರ
ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ