Shivamogga: ಚುನಾವಣಾ ಪ್ರಚಾರಕ್ಕೆ ಮಕ್ಕಳು ಬರು​ವಂತಿ​ಲ್ಲ: ಜಿಲ್ಲಾಧಿಕಾರಿ ಸೆಲ್ವಮಣಿ ಎಚ್ಚ​ರಿಕೆ

By Kannadaprabha News  |  First Published Apr 3, 2023, 11:59 PM IST

ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಆದೇಶಿಸಿದ್ದಾರೆ.


ಶಿವಮೊಗ್ಗ (ಏ.03): ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಆದೇಶಿಸಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು, ತಮ್ಮ ಪಕ್ಷದ ವತಿಯಿಂದ ಸಮುದಾಯವನ್ನು ತಲುಪಲು ಹಲವು ರೀತಿಯ ಮೆರವಣಿಗೆ, ಸಾರ್ವಜನಿಕ ಭಾಷಣ, ಮನೆ ಭೇಟಿ, ಸಭೆ ಸಮಾರಂಭ, ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗು​ತ್ತಿದೆ. ಇಂಥ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೕಧಿಸಲಾಗಿದೆ.

ಚುನಾವಣಾ ಪ್ರಚಾರದ ಮೆರವಣಿಗೆಯಲ್ಲಿ ಪಕ್ಷದ ಬಾವುಟ ಹಿಡಿದು ಹೆಚ್ಚು ಜನ ಭಾಗವಹಿಸಬೇಕೆಂಬ ಆಶಯದಿಂದ ಹಿರಿಯರೊಂದಿಗೆ ಮಕ್ಕಳನ್ನು ಸೇರಿಸಿಕೊಳ್ಳುವ, ಮಕ್ಕಳಿಗೆ ಪಕ್ಷದ ಚಿಹ್ನೆ ಇರುವ ಬಟ್ಟೆನೀಡುವುದು, ಪಕ್ಷದ ವಿವರ ಇರುವ ನೋಟ್‌ಬುಕ್‌ಗಳನ್ನು ಹಂಚುವುದು ಮತ್ತು ಎನೂ ಅರಿಯದ ಶಾಲಾ ಮಕ್ಕಳನ್ನು ಶಾಲೆ ಬಿಟ್ಟು ಪಕ್ಷದ ಚುನಾವಣಾ ಪ್ರಚಾರ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಕ್ಕಳನ್ನು ಬಳಸಿಕೊಂಡಿದ್ದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ವಿಶ್ವ ಸಂಸ್ಥೆಯ ಒಡಂಬಡಿಕೆ ಪರಿಚ್ಚೇಧ 19ರ ಅನ್ವಯ ಮಕ್ಕಳನ್ನು ಯಾವುದೇ ರೀತಿಯಲ್ಲಿ ದುರುಪಯೋಗ ಪಡಿಸಿಕೊಂಡಿದ್ದು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

Tap to resize

Latest Videos

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ವಿಶ್ವೇಶ್ವರ ಹೆಗಡೆ ಕಾಗೇರಿ

ರಾಜಕೀಯ ಪಕ್ಷಗಳು ಆಯೋಜಿಸುವ ಚುನಾವಣಾ ಪ್ರಚಾರದ ಮೆರವಣಿಗೆ, ಸಭೆ, ಸಮಾರಂಭ ಮತ್ತು ಕಾರ್ಯಕ್ರಮಗಳಲ್ಲಿ ಮಕ್ಕಳೇ ಉತ್ಸಾಹದಿಂದ ಭಾಗವಹಿಸುವ ಸಂದರ್ಭಗಳು ಕಂಡುಬರುವುದರಿಂದ ಏನೂ ಅರಿಯದ ಮಕ್ಕಳ ಹಕ್ಕು ಉಲ್ಲಂಘನೆ ಆಗುತ್ತವೆ. ಆದ್ದರಿಂದ ಸಭೆ ಆಯೋಜಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಕಡ್ಡಾಯವಾಗಿ ತಮ್ಮ ಮಕ್ಕಳು ಭಾಗವಹಿಸದಿರುವಂತೆ ಅರಿವು ಮೂಡಿ​ಸಬೇಕು. ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಆಯೋ​ಜ​ಕ​ರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಸ್ವತಂತ್ರ್ಯ ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತಗಳು 2023ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಹಾಗೂ ರಾಜಕೀಯ ಪಕ್ಷದ ಕುರಿತು ಮತ ನೀಡುವಂತೆ ಕೋರುವುದನ್ನು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಯಾವುದೇ ರೀತಿಯಲ್ಲಿ ಬಳಸಿಕೊಳ್ಳದಂತೆ ನಿಷೇಧಿಸಿದೆ. ಒಂದುವೇಳೆ ಚುನಾವಣಾ ಪ್ರಚಾರಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿರುವುದು ಕಂಡುಬಂದಿದ್ದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

ಜಿಲ್ಲಾ, ತಾಲೂಕು, ಗ್ರಾಮ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು, ಗ್ರಾಮ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಆರೋಗ್ಯ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್‌ ಇಲಾಖೆ, ತಹಸೀಲ್ದಾರರು, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಕ್ಕಳ ಸಹಾಯವಾಣಿ ಮತ್ತು ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಗರ್‌ಹುಕುಂ ರೈತರ ರಕ್ಷ​ಣೆ: ಮಧು ಬಂಗಾರಪ್ಪ

ಜಿಲ್ಲೆಯ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮಕ್ಕಳ ದುರುಪಯೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಸಲುವಾಗಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಕೈಗೊಳ್ಳಲು ಆದೇಶದಲ್ಲಿ ತಿಳಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!