ಕಾಲ್ತುಳಿತದ ನಂತರ ನಾನು ವಿಚಲಿತ: ಭಾವನಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Published : Aug 23, 2025, 08:02 AM IST
Karnataka CM Siddaramaiah (Photo/ANI)

ಸಾರಾಂಶ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದಾಗಿನಿಂದ ವಿಚಲಿತನಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವನಾತ್ಮಕವಾಗಿ ಹೇಳಿದರು.

ವಿಧಾನಸಭೆ (ಆ.23): ‘ನನ್ನ 42 ವರ್ಷಗಳ ರಾಜಕೀಯ ಜೀವನದಲ್ಲಿ ಕಾಲ್ತುಳಿತದಂತಹ ಕಹಿ ಘಟನೆ ನಡೆದಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದಾಗಿನಿಂದ ವಿಚಲಿತನಾಗಿದ್ದೇನೆ. ಘಟನೆ ನಡೆದ ದಿನವೂ ದುಃಖಪಟ್ಟಿದ್ದೆ, ಈಗಲೂ ದುಃಖ ಪಡುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವನಾತ್ಮಕವಾಗಿ ಹೇಳಿದರು. ನಿಯಮ 69ರ ಅಡಿ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ಕಾಲ್ತುಳಿತ ನಡೆದ ದಿನವೇ ನಾನು ವಿಷಾದವ್ಯಕ್ತಪಡಿಸಿದ್ದೆ. ಈಗಲೂ ವಿಷಾದಿಸುತ್ತಿದ್ದೇನೆ. ಕಾಲ್ತುಳಿತ ಸಂಭವಿಸಿದ ಸಂದರ್ಭದಲ್ಲಿ ನಾನು ಲಂಡನ್‌ನಿಂದ ಬಂದಿದ್ದ ನನ್ನ ಮೊಮ್ಮಗನೊಂದಿಗೆ ಹೋಟೆಲ್‌ನಲ್ಲಿ ತಿಂಡಿ ತಿನ್ನುತ್ತಿದ್ದೆ. 5.15ಕ್ಕೆ ಶಾಸಕ ಪೊನ್ನಣ್ಣ ಕರೆ ಮಾಡಿ ಕಾಲ್ತುಳಿತದ ಮಾಹಿತಿ ನೀಡಿದರು.

ಆಗ ನಗರ ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ಮಾಹಿತಿ ಪಡೆದು, ಕೂಡಲೇ ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಅವರೊಂದಿಗೆ ಆಸ್ಪತ್ರೆಗೆ ತೆರಳಿದೆ. ಅಲ್ಲಿ 11 ಮಂದಿಯ ಶವ ನೋಡಿ ಮನಸ್ಸು ಕದಡಿತು ಎಂದರು. ಕಾಲ್ತುಳಿತ ನಡೆದ ದಿನ ನಿದ್ದೆ ಮಾಡಲು ಸಾಧ್ಯವಾಗಿಲ್ಲ. ಕಾಲ್ತುಳಿತದಿಂದ ಸಾವಿಗೀಡಾದವರಲ್ಲಿ 13ರಿಂದ 29 ವರ್ಷ ವಯಸ್ಸಿನವರಿದ್ದಾರೆ. ಭವಿಷ್ಯದಲ್ಲಿ ಅವರು ಏನೇನೋ ಸಾಧನೆ ಮಾಡುವವರಿದ್ದರು. ಚಿಕ್ಕವಯಸ್ಸಿನಲ್ಲಿಯೇ ಪ್ರಾಣ ಕಳೆದುಕೊಳ್ಳುವಂತಾಯಿತು. ಅವರ ಸಾವು ಅವರ ತಂದೆ-ತಾಯಿಗಷ್ಟೇ ಅಲ್ಲ, ಮನುಷ್ಯತ್ವ ಇರುವ ಎಲ್ಲರಿಗೂ ದುಃಖ ತರಿಸುತ್ತದೆ ಎಂದು ಹೇಳಿದರು.

ದುರ್ಘಟನೆ ಕುರಿತು ಕ್ಷಮೆ ಕೇಳಿದ ಕೂಡಲೇ ನ್ಯಾಯ ದೊರಕುವುದಿಲ್ಲ. ಕ್ರಮಗಳಿಂದಷ್ಟೇ ನ್ಯಾಯ ಸಿಗುತ್ತದೆ. ಅದನ್ನು ನಾವು ಮಾಡಿದ್ದೇವೆ. ಕಾಲ್ತುಳಿತದಿಂದ ಸಾವಿನ ಸುದ್ದಿ ತಿಳಿದ ಕೂಡಲೇ ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶಿಸಿದೆ. ಮರುದಿನ ನ್ಯಾ. ಮೈಕಲ್‌ ಡಿ.ಕುನ್ಹಾ ನೇತೃತ್ವದ ಏಕ ಸದಸ್ಯ ಆಯೋಗ ನೇಮಕ ಮಾಡಿದೆ. ಮೂವರು ಐಪಿಎಸ್‌ ಅಧಿಕಾರಿ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಿದೆವು. ನನ್ನ ರಾಜಕೀಯ ಕಾರ್ಯದರ್ಶಿಯನ್ನೇ ತೆಗೆದು ಹಾಕಿದ್ದೇನೆ.

ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ನಾಲ್ವರನ್ನು ಬಂಧಿಸಲಾಯಿತು. ಇನ್ನು, ಸಿಐಡಿ ತನಿಖೆಯೂ ನಡೆಸಲಾಗಿದ್ದು, ಚಾರ್ಜ್‌ಶೀಟ್‌ ಸಿದ್ಧಪಡಿಸಲಾಗಿದೆ. ಹೈಕೋರ್ಟ್‌ ಸೂಚನೆ ನಂತರ ಚಾರ್ಜ್‌ಶೀಟ್‌ ಸಲ್ಲಿಸಲಾಗುವುದು ಎಂದು ವಿವರಿಸಿದರು. ಇಷ್ಟೆಲ್ಲ ಕ್ರಮ ಕೈಗೊಂಡರೂ ಬಿಜೆಪಿಯವರು ಸರ್ಕಾರ ಮತ್ತು ನನ್ನ ವಿರುದ್ಧವೇ ಆರೋಪ ಮಾಡುತ್ತಾರೆ. ದುರ್ಘಟನೆಗೆ ನಾವೇ ಕಾರಣ ಎಂದು ಹೇಳುತ್ತಾರೆ. ಈ ವಿಚಾರಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ. ಇನ್ನು, ಘಟನೆ ಕುರಿತಂತೆ ಮತ್ತೊಮ್ಮೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!