ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣದ ವಿಚಾರಣೆಯನ್ನು (ತನಿಖೆ ಅಲ್ಲ) ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿದೆ.
ಬೆಂಗಳೂರು (ಮಾ.28): ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣದ ವಿಚಾರಣೆಯನ್ನು (ತನಿಖೆ ಅಲ್ಲ) ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿದೆ. ಈಗಾಗಲೇ ಸಿಐಡಿ ವಿಚಾರಣೆ ಆರಂಭಿಸಿದ್ದು, ಈ ಪ್ರಕರಣದಲ್ಲಿ ವಿವರಣೆ ಪಡೆಯುವ ಸಂಬಂಧ ಸಚಿವರಿಗೆ ನೋಟಿಸ್ ನೀಡಲು ಮುಂದಾಗಿದೆ ಎಂದು ತಿಳಿದು ಬಂದಿದೆ. ದಿನಗಳ ಹಿಂದೆ ಸಚಿವ ರಾಜಣ್ಣ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆಸಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಈ ಪತ್ರವನ್ನು ಸಿಐಡಿಗೆ ಕಳುಹಿಸಿದ ಸರ್ಕಾರವು, ಹನಿಟ್ರ್ಯಾಪ್ ಕುರಿತು ವಿಚಾರಣೆ ನಡೆಸಿ ತ್ವರಿತವಾಗಿ ವರದಿ ನೀಡುವಂತೆ ಸೂಚಿಸಿದೆ.
ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡಿರುವ ಸಿಐಡಿ ಡಿಐಜಿ ವಂಶಿಕೃಷ್ಣ ನೇತೃತ್ವದ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿ ಕೇಶವಮೂರ್ತಿ ಅವರನ್ನು ಒಳಗೊಂಡ ತಂಡವು, ಜಯಮಹಲ್ ರಸ್ತೆಯಲ್ಲಿರುವ ಸಚಿವರ ಅಧಿಕೃತ ಸರ್ಕಾರಿ ನಿವಾಸಕ್ಕೆ ತೆರಳಿ ಪ್ರಾಥಮಿಕ ಹಂತದ ಮಾಹಿತಿ ಕಲೆ ಹಾಕಿತು. ಆ ಮನೆಯ ಭದ್ರತಾ ಸಿಬ್ಬಂದಿ ಹಾಗೂ ಮನೆ ಕೆಲಸಗಾರರನ್ನು ವಿಚಾರಣೆ ನಡೆಸಿ ಘಟನೆ ಕುರಿತು ವಿವರ ಸಂಗ್ರಹಿಸಿ ಅಧಿಕಾರಿಗಳು ಮರಳಿದ್ದಾರೆ.
ಒಬ್ಬರೇ ಇದ್ದರೆ ಹನಿಟ್ರ್ಯಾಪ್ ಆಗುತ್ತಾ ಸಚಿವ ಕೆ.ಎನ್ ರಾಜಣ್ಣ ತಪ್ಪು ಮಾಡಿದ್ದಾರೆ: ಡಿ.ಕೆ.ಶಿವಕುಮಾರ್
ಸಚಿವ ರಾಜಣ್ಣಗೆ ಸಿಐಡಿ ಬುಲಾವ್?: ಹನಿಟ್ರ್ಯಾಪ್ ಯತ್ನ ಆರೋಪ ಕುರಿತು ವಿವರಣೆ ನೀಡುವಂತೆ ಸೂಚಿಸಿ ಸಹಕಾರ ಸಚಿವ ರಾಜಣ್ಣರವರಿಗೆ ಸಿಐಡಿ ನೋಟಿಸ್ ನೀಡಲು ಮುಂದಾಗಿದ್ದು, ಶುಕ್ರವಾರ ಅಥವಾ ಶನಿವಾರ ವಿಚಾರಣೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಎಸ್‌ಐಟಿ ರಚನೆ ಅಧಿಕಾರ ಗೃಹ ಸಚಿವ ಹೆಗಲಿಗೆ?: ಹನಿಟ್ರ್ಯಾಪ್ ಆರೋಪ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಅಧಿಕಾರವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೆಗಲಿಗೆ ಮುಖ್ಯಮಂತ್ರಿಯವರು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ತಮಗೆ ಇಷ್ಟ ಬಂದ ಎಡಿಜಿಪಿ ಅಥವಾ ಐಜಿಪಿ ಮಟ್ಟದ ಅಧಿಕಾರಿ ಸಾರಥ್ಯದಲ್ಲಿ ಎಸ್‌ಐಟಿ ರಚಿಸುವಂತೆ ಗೃಹ ಸಚಿವರಿಗೆ ಸಿದ್ದರಾಮಯ್ಯ ಸ್ವಾತಂತ್ರ್ಯ ನೀಡಿದ್ದಾರೆ ಎನ್ನಲಾಗಿದೆ.
ಹೀಗಾಗಿ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿದ್ದ ಗೃಹ ಸಚಿವರು ರಾಜಧಾನಿಗೆ ಮರಳಿದ ಬಳಿಕ ಹಿರಿಯ ಅಧಿಕಾರಿಗಳ ಜತೆ ಶುಕ್ರವಾರ ಮತ್ತೊಂದು ಸುತ್ತ ಸಭೆ ನಡೆಸಲಿದ್ದಾರೆ. ಆನಂತರ ಎಸ್‌ಐಟಿ ರಚನೆ ಬಗ್ಗೆ ಸಚಿವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಎಸ್‌ಐಟಿ ಮುಖ್ಯಸ್ಥರಾಗಿ ಎಡಿಜಿಪಿಗಳಾದ ಹರಿಶೇಖರನ್ ಹಾಗೂ ಎಸ್.ಮುರುಗನ್ ಹೆಸರು ಪ್ರಸ್ತಾಪವಾಗಿದೆ. ಆದರೆ ರಾಜಕೀಯವಾಗಿ ಬಹುಮುಖ್ಯ ಪ್ರಕರಣವಾಗಿರುವ ಕಾರಣ ಎಸ್ಐಟಿ ಮುಖ್ಯಸ್ಥರಾಗಲು ಕೆಲ ಹಿರಿಯ ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದು, ಕೆಲವರು ನೇರವಾಗಿ ಸಚಿವರಿಗೆ ಸಹ ನೇರವಾಗಿ ಅಭಿಪ್ರಾಯ ಹೇಳಿದ್ದಾರೆ ಎನ್ನಲಾಗಿದೆ.
ಸರ್ಕಾರ ಖಜಾನೆಯಿಂದ ಒಂದು ಪೈಸೆ ಕೊಡಬೇಕಿಲ್ಲ, ಸರ್ಟಿಫಿಕೇಟ್ ಕೊಟ್ಟರೆ ಸಾಕು: ಸಂಸದ ಯದುವೀರ್
ಕೇಸ್ ಎಸ್‌ಐಟಿಗೆ, ಸದ್ಯದಲ್ಲೇ ಸಚಿವ ಪರಂ ಘೋಷಣೆ?: ಹನಿಟ್ರ್ಯಾಪ್ ಆರೋಪ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಅಧಿಕಾರವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೆಗಲಿಗೆ ಮುಖ್ಯಮಂತ್ರಿಯವರು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿದ್ದ ಗೃಹ ಸಚಿವರು ರಾಜಧಾನಿಗೆ ಮರಳಿದ ಬಳಿಕ ಹಿರಿಯ ಅಧಿಕಾರಿಗಳ ಜತೆ ಶುಕ್ರವಾರ ಮತ್ತೊಂದು ಸುತ್ತ ಸಭೆ ನಡೆಸಲಿದ್ದಾರೆ. ಆನಂತರ ಎಸ್‌ಐಟಿ ರಚನೆ ಬಗ್ಗೆ ಸಚಿವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.