ಮೋದಿ ಪರ ಘೋಷಣೆ ಕೂಗುವುದು ನಮ್ಮ ಜನ್ಮಸಿದ್ಧ ಹಕ್ಕು: ಮಿಥುನ್ ರೈ ವಿರುದ್ದ ಕೋಟ್ಯಾನ್ ಕೆಂಡ!

By Ravi Janekal  |  First Published May 11, 2023, 8:48 PM IST

ಪ್ರಧಾನಿ ಮೋದಿ ಪರ ಘೋಷಣೆ ಕೂಗುವುದು ನಮ್ಮ ಜನ್ಮಸಿದ್ಧ ಹಕ್ಕು. ಅವರ ಪರ ಬಿಜೆಪಿ ಕಾರ್ಯಕರ್ತರಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಹಾಕುವರೆ? ಎಂದು ಮೂಡಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ದ ಕಿಡಿ ಕಾರಿದ್ದಾರೆ.


ಮಂಗಳೂರು (ಮೇ.11): ಪ್ರಧಾನಿ ಮೋದಿ ಪರ ಘೋಷಣೆ ಕೂಗುವುದು ನಮ್ಮ ಜನ್ಮಸಿದ್ಧ ಹಕ್ಕು. ಅವರ ಪರ ಬಿಜೆಪಿ ಕಾರ್ಯಕರ್ತರಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಹಾಕುವರೆ? ಎಂದು ಮೂಡಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ದ ಕಿಡಿ ಕಾರಿದ್ದಾರೆ.

ನಿನ್ನೆ ರಾತ್ರಿ ಮೂಡುಶೆಡ್ಡೆಯಲ್ಲಿ ನಡೆದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ(BJP-Congress worker clashed) ಸಂಬಂಧಿಸಿ ಇಂದು ಮಾಧ್ಯಮ ಗೋಷ್ಟಿಯಲ್ಲಿ ಅವರು ಸ್ಪಷ್ಟನೆ ನೀಡಿದರು. ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್ ರೈ (Mithun rai congress candidate)ನೇರವಾಗಿ ಬಿಜೆಪಿ ಕಾರ್ಯಕರ್ತರ ಗುಂಪಿನ ಎದುರೇ ಕಾರು ನಿಲ್ಲಿಸಿ ಪ್ರಚೋದನ ಕಾರಿಯಾಗಿ ನಡೆದುಕೊಂಡಿರುವುದು ತಪ್ಪು. ಒಂದು ವೇಳೆ ಅವರು ಸಂಯಮವಹಿಸಿ ಸ್ವಲ್ಪ ದೂರ ಹೋಗಿ ಕಾಂಗ್ರೆಸ್ ಬೂತ್ ಎದುರೇ ಕಾರು ನಿಲ್ಲಿಸಿದ್ದರೆ ಅಹಿತಕರ ಘಟನೆಗಳಿಗೆ ಆಸ್ಪದವೇ ಇರಲಿಲ್ಲ ಎಂದು ಕೋಟ್ಯಾನ್(Umanath kotyan BJP candidate)ಹೇಳಿದ್ದಾರೆ. 

Tap to resize

Latest Videos

 

ಮಂಗಳೂರು: ಕೈ - ಕಮಲ ಕಾರ್ಯಕರ್ತರ ನಡುವೆ ಘರ್ಷಣೆ: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸ

ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ(Mudubidire assembly constituency) ವ್ಯಾಫ್ತಿಯ ಮೂಡುಶೆಡ್ಡೆಯಲ್ಲಿ ನಿನ್ನೆ (ಬುಧವಾರ) ನಡೆದ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪ್ರಚೋದನಕಾರಿ ನಡವಳಿಕೆಯೇ ಕಾರಣ ಎಂದು ಉಮಾನಾಥ ಕೋಟ್ಯಾನ್ ಆರೋಪಿಸಿದರು. ಕಾಂಗ್ರೆಸ್ ಕಾರ್ಯಕರ್ತರ ಪ್ರಚೋದನಕಾರಿ ನಡವಳಿಕೆಗೆ ಬಿಜೆಪಿ ಹಾಗೂ ಪರಿವಾರ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿರೋಧ ತೋರಿದರು. ಆಗ ಹೊಯ್‌ ಕೈಯ್ ಮತ್ತು ಘರ್ಷಣೆ ಉಂಟಾಗಿ ಬಿಜೆಪಿಯ ಕೆಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಅವರಿಗೆ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಕಿತ್ಸೆ ನೀಡಿ ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಉಮಾನಾಥ ಕೋಟ್ಯಾನ್ ತಿಳಿಸಿದರು. 

ಕಾಂಗ್ರೆಸ್ ಕಾರ್ಯಕರ್ತರ ಕಲ್ಲು ತೂರಾಟದಿಂದ ಪೊಲೀಸ್ ವಾಹನಗಳಿಗೂ ಹಾನಿಯಾಗಿದೆ. ಕಾಂಗ್ರೆಸಿಗರು ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ನಿನ್ನೆಯ ಘಟನಾವಳಿಗೆ ಸಂಬಂಧಿಸಿದಂತೆ ಬಿಜೆಪಿ ಕೂಡ ಪೊಲೀಸರಿಗೆ ದೂರು ನೀಡಿದ್ದು, ಕಾನೂನಿನಂತೆ ಕ್ರಮ ಜರಗುಲಿದೆ ಎಂದು ಅವರು ಹೇಳಿದರು. ಸೋಲಿನ ಭೀತಿಯಿಂದ ಹತಾಶರಾದ ಕಾಂಗ್ರೆಸ್ ಅಭ್ಯರ್ಥಿ ಈ ರೀತಿ ಗಲಾಟೆ ಮಾಡಿಸಿ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ಕೊಡಿಸಿದ್ದಾರೆ. ಅವರ ನಡವಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೋಟ್ಯಾನ್ ತಿಳಿಸಿದರು.

ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮತದಾನ ಮುಗಿದು ಅಧಿಕಾರಿಗಳು  ಮತಯಂತ್ರಗಳನ್ನು ಡಿಮಸ್ಟರಿಂಗ್ ಕೇಂದ್ರಕ್ಕೆ ಬಸ್‌ಗಳಲ್ಲಿ ಒಯ್ಯುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದರು. ಅದೇ ವೇಳೆಗೆ ದಿಢೀರನೆ ಅಲ್ಲಿಗೆ ಬಂದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಬಿಜೆಪಿ ಕಾರ್ಯಕರ್ತರು ಸೇರಿದ್ದ ಪಕ್ಷದ ಬೂತ್ ಎದುರೇ ಕಾರು ನಿಲ್ಲಿಸಿ, ಮೋದಿ ಪರ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪ್ರಶ್ನಿಸಿದ್ದಲ್ಲದೆ ತಳ್ಳಾಡಿದರು. 

ಆಗ ಅವರ ಜತೆಗೆ ಬಂದಿದ್ದ ಬೆಂಬಲಿಗರು ಕೂಡ ಬಿಜೆಪಿ ಕಾರ್ಯಕರ್ತರು, ಮಹಿಳೆಯರು ಮತ್ತು ಮಕ್ಕಳ ಮೇಲೂ ಹಲ್ಲೆ ಮತ್ತು ಕಲ್ಲು ತೂರಾಟ ನಡೆಸಿದರು ಎಂದು ಘಟನೆಗೆ ಪ್ರತ್ಯಕ್ಷದರ್ಶಿಯಾಗಿದ್ದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಹಾಗೂ ಬಿಜೆಪಿ ಕಾರ್ಯಕರ್ತೆ ಕವಿತಾ ದಿನೇಶ್ ಆರೋಪಿಸಿದರು.

 

ಕೃಷ್ಣಮಠಕ್ಕೆ ಭೂಮಿ ಕೊಟ್ಟವರು ಮುಸ್ಲಿಂ ಅರಸರು, ಮಿಥುನ್ ರೈ ಹೇಳಿಕೆಗೆ ಸಿಡಿದೆದ್ದ ಕರಾವಳಿ

ಮಿಥುನ್ ರೈ ಕಾರು ಬಾಗಿಲು ತೆಗೆದಾಗ ಕೆಲವು ಮಂದಿ ಕೆಳಗೆ ಬಿದ್ದು ಕಾಲ್ತುಳಿತಕ್ಕೆ ಒಳಗಾಗುವ ಸನ್ನಿವೇಶ ಉಂಟಾಗಿತ್ತು. ಸ್ವತಃ ನನ್ನ ಮೇಲೂ ಕಾಂಗ್ರೆಸ್‌ ಕಾರ್ಯಕರ್ತರು ತೂರಿದ ಕಲ್ಲು ಬಿದ್ದು ಏಟಾಗಿದೆ. ಅದೃಷ್ಟವಶಾತ್ ತಲೆಗೆ ಬೀಳದ ಕಾರಣ ಬಚಾವ್ ಆದೆ ಎಂದು ಕವಿತಾ ದಿನೇಶ್ ಹೇಳಿದರು. ಬಿಜೆಪಿ ಬಗ್ಗೆ ಸುಳ್ಳು ಆರೋಪ ಮಾಡುವ ಬದಲು ನಿಮ್ಮ ಕಡೆಯಿಂದ ಆಗಿರುವ ತಪ್ಪುಗಳ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಕವಿತಾ ದಿನೇಶ್ ಆಗ್ರಹಿಸಿದರು.

click me!