ಚಿಕ್ಕಮಗಳೂರು: ಮನೆಯೊಂದು ಮೂರು ಬಾಗಿಲಾಯಿತಾ ಕಾಂಗ್ರೆಸ್‌ ಸ್ಥಿತಿ?, ಕೈ ಕಾರ್ಯಕರ್ತರ ಮಾರಾಮಾರಿ

Published : Jul 24, 2022, 11:30 PM IST
ಚಿಕ್ಕಮಗಳೂರು: ಮನೆಯೊಂದು ಮೂರು ಬಾಗಿಲಾಯಿತಾ ಕಾಂಗ್ರೆಸ್‌ ಸ್ಥಿತಿ?, ಕೈ ಕಾರ್ಯಕರ್ತರ ಮಾರಾಮಾರಿ

ಸಾರಾಂಶ

ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಡಿದ ಕಾರ್ಯಕರ್ತರು

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು 

ಚಿಕ್ಕಮಗಳೂರು(ಜು.24):  ಮನೆಯೊಂದು ಮೂರು ಬಾಗಿಲು ಎನ್ನುವ ಸ್ಥಿತಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಪಕ್ಷದಾಗಿದೆ. ಪದಾಧಿಕಾರಿ ಹುದ್ದೆಯಿಂದ ಕಿತ್ತು ಹಾಕಿದ ಕಾರಣಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.  ಚಿಕ್ಕಮಗಳೂರು ಜಿಲ್ಲೆಯ ಯೂತ್ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಾರಾಮಾರಿ ನಡೆಸಿರುವ ಘಟನೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲೇ ನಡೆದಿದೆ. ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಹಾಗೂ ಕಾರ್ಯದರ್ಶಿ ನಿತೀಶ್ ಗುಂಪುಗಳ ಮಧ್ಯೆ ವಾರ್ ನಡೆದಿದೆ. ಪಕ್ಷದ ವರಿಷ್ಠರು ಶಿಸ್ತು ಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ನಿತೀಶ್ ಅವರನ್ನು ಹುದ್ದೆಯಿಂದ ತೆಗೆದು ಹಾಕಿದ್ದೆ ಕಾರ್ಯಕರ್ತರ ನಡುವಿನ ಘರ್ಷಣೆಗೆ ಕಾರಣ ಎನ್ನಲಾಗಿದೆ.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಬೆಂಬಲಿಗರು ಮತ್ತು ನಿತೀಶ್ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯುವ ಸಂದರ್ಭದಲ್ಲೇ ಈ ಬಗ್ಗೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೂಗಾಟ ಗದ್ದಲ ಆರಂಭವಾಗಿದೆ. ಕೆಲವರು ಕುರ್ಚಿಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯಿಂದ ಬೇಸತ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸಹ ಮುಂದಾಗಿದ್ದಾರೆ.

ಬಾಣಂತಿಯನ್ನು ಜೋಳಿಗೆ ಕಟ್ಟಿ ಹೊತ್ತೊಯ್ದ ಚಿಕ್ಕಮಗಳೂರಿನ ಆದಿವಾಸಿಗಳು!

ಪೊಲೀಸ್ ಠಾಣೆಗೆ ದೂರು

ಗಲಾಟೆಯ ನಂತರ ನಿತೀಶ್ ವಿರುದ್ಧ ಸಂತೋಷ್ ಪೊಲೀಸರಲ್ಲಿ ದೂರು ನೀಡಿದ್ದಾರೆ. ನಿತೀಶ್ ಅವರನ್ನು ಅವರ ಜವಾಬ್ದಾರಿಯಿಂದ ನಾನು ತೆಗೆದು ಹಾಕಿಲ್ಲ. ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮೊಹಮದ್ ನಲಪಾಡ್ ಅವರ ಒಪ್ಪಿಗೆ ಮೇರೆಗೆ ಅವರನ್ನು ತೆಗೆಯಲಾಗಿದೆ. ನಲಪಾಡ್ ಅವರ ಲೆಟರ್ ಹೆಡ್‌ನಲ್ಲಿಯೇ ಅಮಾನತು ಪತ್ರ ರವಾನೆಯಾಗಿದೆ. ನಿತೀಶ್ ಯಾರು ಅಂತಾನೆ ನನಗೆ ಗೊತ್ತಿಲ್ಲ, ಅವನ ಮುಖವನ್ನೇ ನಾನು ನೋಡಿಲ್ಲ ಎಂದು ಸಂತೋಷ್ ಪ್ರತಿಕ್ರಿಯಿಸಿದ್ದಾರೆ.

ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನಲ್ಲಿ ಟ್ರಾಫಿಕ್ ಜಾಮ್‌, ಬೇಸತ್ತ ವಾಹನ ಸವಾರರು

ಗಲಾಟೆ ಮಾಡಲೆಂದು ಗಾಂಜಾ ಸೇವಿಸಿ ಬಂದ ಬಂದ ಹುಡುಗರನ್ನು ಕರೆಸಿ ಗಲಾಟೆ ಮಾಡಿಸಿದ್ದಾರೆ. ನಾನು ವೀರಶೈವ ಸಮಾಜದ ಯುವ ಘಟಕದ ಜಿಲ್ಲಾಧ್ಯಕ್ಷ ಕೂಡ ಆಗಿದ್ದೇನೆ. ವೀರಶೈವ ಸಮಾಜಕ್ಕೆ ಸೇರಿದವರು ರಾಜಕೀಯವಾಗಿ ಮುಂದೆ ಬರಬಾರದು ಎನ್ನುವ ಚಿತಾವಣೆಯಿಂದ ಹೀಗೆ ಮಾಡುತ್ತಿದ್ದಾರೆ ಎನಿಸುತ್ತದೆ. ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರೆ ಸತ್ಯ ಹೊರಬರುತ್ತದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ನಲ್ಲಿ ಆಗಾಗ ಇಂತಹ ಗೊಂದಲಗಳು ಉಂಟಾಗುತ್ತಲೇ ಇವೆ. ಇತ್ತೀಚೆಗೆ ಜಿಲ್ಲೆಗಾಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷ ಸಂಘಟನೆ ವಿಚಾರಕ್ಕೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಸದಸ್ಯತ್ವ ನೊಂದಣಿ ವಿಚಾರದಲ್ಲಿ ಜಿಲ್ಲೆ ಹಿಂದುಳಿದಿರುವ ಬಗ್ಗೆ ಗರಂ ಆಗಿದ್ದರು. ಕಾರ್ಯಕರ್ತರ ನೊಂದಣಿ ಮಾಡಿಸುವಲ್ಲಿ ತುಂಬಾ ಹಿಂದುಳಿದಿದ್ದೀರಿ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಂಶುಮಂತ್ ಸೇರಿದಂತೆ ಎಲ್ಲಾ ಮುಖಂಡರ ವಿರುದ್ಧ ಬೇಸರ ಹೊರಹಾಕಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ