ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲವೇ ಇಲ್ಲ: ಬಿ.ಎಸ್‌.ಯಡಿಯೂರಪ್ಪ

By Govindaraj S  |  First Published Aug 11, 2022, 3:00 AM IST

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಅವಧಿ ಪೂರೈಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 


ಬೆಂಗಳೂರು (ಆ.11): ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಅವಧಿ ಪೂರೈಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಬುಧವಾರ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂಬ ಕಾಂಗ್ರೆಸ್‌ ಟ್ವೀಟ್‌ನಲ್ಲಿ ಸತ್ಯಾಂಶ ಇಲ್ಲ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಅವಧಿ ಮುಗಿದ ಮೇಲೆ ಮುಂದೆ ಯಾರನ್ನು ಮಾಡಬೇಕು ಎಂಬುದರ ಬಗ್ಗೆ ಹೈಕಮಾಂಡ್‌ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ಪ್ರಸ್ತುತ ನಾಯಕತ್ವ ಬದಲಾವಣೆ ಚರ್ಚೆ ಅನಗತ್ಯ. ಯಾರು ಏನೇ ಹೇಳಿದರೂ ನಾಯಕತ್ವ ಬದಲಾವಣೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಹಕಾರದೊಂದಿಗೆ ಬೊಮ್ಮಾಯಿ ಅವರು ಅಧಿಕಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯಡಿಯೂರಪ್ಪ, ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ರಾಜ್ಯ ಭೇಟಿ ವೇಳೆ ಪ್ರಸಕ್ತ ರಾಜಕೀಯ ವಿದ್ಯಮಾನ ಕುರಿತು ಚರ್ಚೆ ನಡೆಸಲಾಗಿದೆಯೇ ಹೊರತು ನಾಯಕತ್ವ ಬದಲಾವಣೆಯ ಕುರಿತು ಮಾತುಕತೆ ನಡೆಸಿಲ್ಲ. ಬಸವರಾಜ ಬೊಮ್ಮಾಯಿ ಅವರು ಉಳಿದ ಅವಧಿಯನ್ನು ಪೂರೈಸಲಿದ್ದಾರೆ. ವದಂತಿಗಳಿಗೆ ಕಿವಿಗೊಡುವ ಅಗತ್ಯ ಇಲ್ಲ’ ಎಂದು ಹೇಳಿದರು.

Tap to resize

Latest Videos

Davanagere: ಯಡಿಯೂರಪ್ಪ ಸೈಡ್‌ಲೈನ್‌ ಪ್ರಶ್ನೆ ಇಲ್ಲ: ಸಚಿವ ಮಾಧುಸ್ವಾಮಿ

ಮಂತ್ರಾಲಯದಿಂದ ಬಂದು ರಾಜ್ಯ ಪ್ರವಾಸ: ನಾನು ಮಂತ್ರಾಲಯಕ್ಕೆ ಹೋಗಿ ಬಂದ ಬಳಿಕ ಪಕ್ಷದ ಮುಖಂಡರ ಜತೆ ಸೇರಿ ರಾಜ್ಯದಲ್ಲಿ ಪ್ರವಾಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಾರದಿರುವಂತೆ ನೋಡಿಕೊಳ್ಳುವುದು ಮತ್ತು ಬಿಜೆಪಿ ಅಧಿಕಾರಕ್ಕೆ ತರುವುದು ಈ ಪ್ರವಾಸದ ಉದ್ದೇಶ. 135ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಇದೆ. ಪ್ರತಿಪಕ್ಷದ ಕೆಲವು ನಾಯಕರು ಮುಖ್ಯಮಂತ್ರಿಯಾಗುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ. ಅದಕ್ಕೆ ಅವಕಾಶ ಇಲ್ಲ. ಬಿಜೆಪಿ ಕಡೆಯವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್ಸಿನವರಿಗೆ ಮಾಡಲು ಕೆಲಸವಿಲ್ಲ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ವರಿಷ್ಠರು ಹೇಳಿದ್ದಾರೆ. ಕಾಂಗ್ರೆಸ್ಸಿನವರಿಗೆ ಮಾಡಲು ಕೆಲಸವಿಲ್ಲ ಅನಗತ್ಯ ಗೊಂದಲ ಸೃಷ್ಟಿಮಾಡುವುದೇ ಅವರ ಕೆಲಸ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದರು. ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಮ್ಯಾಜಿಕ್‌ ನಂಬರ್‌, ಶಾಸಕಾಂಗ ಪಕ್ಷದ ಸಭೆ ಹಾಗೂ ವರಿಷ್ಠರ ತೀರ್ಮಾನದಂತೆ ಮುಖ್ಯಮಂತ್ರಿಯಾಗಿದ್ದಾರೆಯೇ ಹೊರತು ಕಾಂಗ್ರೆಸ್ಸಿಗರು ಬಂದು ಸಿಎಂ ಮಾಡಿಲ್ಲ. ಬದಲಾವಣೆ ಮಾಡಲು ಮುಖ್ಯಮಂತ್ರಿಗಳು ಯಾವುದೇ ಹಗರಣ ಮಾಡಿಲ್ಲ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ವರಿಷ್ಠರಾದ ಅಮಿತ್‌ ಶಾ ಅವರು ಸ್ಪಷ್ಟಪಡಿಸಿದ್ದಾರೆ ಎಂದರು.

ಕಾಂಗ್ರೆಸ್‌ ಗೆಲ್ಲುತ್ತೆಂದು ಯಡಿಯೂರಪ್ಪಗೆ ಗೊತ್ತು: ಸಿದ್ದರಾಮಯ್ಯ

ನಮ್ಮ ಪಕ್ಷದ ಆಂತರಿಕ ವಿಚಾರ ಕಾಂಗ್ರೆಸ್‌ಗೆ ಏಕೆ ಎಂಬುದೇ ನನಗೆ ದೊಡ್ಡ ಪ್ರಶ್ನೆಯಾಗಿದೆ. ಅದಕ್ಕೆ ಅವರು ಉತ್ತರ ಕೊಡಬೇಕು. ಈಗಾಗಲೇ ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯನವರು ಬಲ ಪ್ರದರ್ಶನಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಮೇಕೆದಾಟು ಹೋರಾಟದಲ್ಲಿ ಸಿದ್ದರಾಮಯ್ಯನವರ ಅಸಹಕಾರ ಇತ್ತು. ಸಿದ್ದಾರಾಮೋತ್ಸವಕ್ಕೆ ಅನಿವಾರ್ಯವಾಗಿ ಡಿ.ಕೆ. ಶಿವಕುಮಾರ್‌ ಬಂದಿದ್ದರು. ರಾಹುಲ್‌ ಗಾಂಧಿಯವರ ಒತ್ತಾಸೆ ಮೇರೆಗೆ ಇಬ್ಬರೂ ಆಲಿಂಗನ ಮಾಡಿಕೊಂಡಿದ್ದರು. ಶೀಘ್ರದಲ್ಲೇ ಕಾಂಗ್ರೆಸ್‌ ಹೋಳಾಗಿ ಸಿಡಿದು ಹೋಗುತ್ತೆ ಎಂದರು. ಬೆಳೆಹಾನಿ ಕುರಿತು ಪ್ರತಿಕ್ರಿಯಿಸಿದ ಪಾಟೀಲ, ಮಳೆಯಿಂದಾಗಿ ನಮ್ಮ ಜಿಲ್ಲೆಯಲ್ಲಿ ಬಹುತೇಕ ಮೆಕ್ಕೆಜೋಳ ಸೇರಿ ಇತರೆ ಬೆಳೆಗಳು ಹಾನಿಯಾಗುವ ಸಂಭವ ಹೆಚ್ಚಾಗಿದೆ. ಈ ಬಗ್ಗೆ ಮತ್ತೊಮ್ಮೆ ಜಂಟಿ ಸಮೀಕ್ಷೆ ನಡೆಸಿ ಪರಿಹಾರ ನೀಡಲಾಗುವುದು ಎಂದರು.

click me!