* ಹಿಜಾಬ್ ಆಯ್ತು , ಹಲಾಲ್ ಆಯ್ತು ಈಗ ಆಝಾನ್ ಬಗ್ಗೆ ಹೆಚ್ಚು
* ಸರ್ಕಾರ ಯಾವುದೇ ಹೊಸ ಅದೇಶ ಹೊರಡಿಸಿಲ್ಲ ಎಂದ ಸಿಎಂ
* ಕಾನೂನನ್ನು ಕೈಗೆ ತೆಗೆದುಕೊಳ್ಳದೆ ಶಾಂತಿ-ಸುವ್ಯವಸ್ಥೆ ಕಾಪಾಡಲು ಬೇಕಾದ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ
ವರದಿ: ಶರತ್ ಕಪ್ಪನಹಳ್ಳಿ..
ಬೆಂಗಳೂರು, (ಏ.05): ಹಿಜಾಬ್ ಆಯ್ತು , ಹಲಾಲ್ ಆಯ್ತು ಈಗ ಆಝಾನ್ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಇದ್ರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ನಮ್ಮ ಸರ್ಕಾರ ಯಾವುದೇ ಹೊಸ ಅದೇಶಗಳನ್ನ ಹೊರಡಿಸಿಲ್ಲ, ಎಲ್ಲಾ ಹಳೆ ಅದೇಶಗಳೇ. ಇವೆಲ್ಲಾ ಹಿಂದಿನಿಂದ ಬಂದಿರುವ ವಿಚಾರಗಳು. ಈಗ ಹೊಸದಾಗಿ ಬಂದಿಲ್ಲ, ಎಲ್ಲಾ ಹಳೆಯ ಆದೇಶಗಳೇ ಆಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟಿನ ತೀರ್ಪುಗಳು ಕೂಡ ಹಳೆಯವು. ನಾವು ಯಾವುದೇ ಹೊಸ ಆದೇಶಗಳನ್ನು ಮಾಡಿಲ್ಲ. ನಾವು ಎಲ್ಲವುಗಳನ್ನು ಗಮನದಲ್ಲಿರಿಸಿಕೊಂಡು ಯಾವುದೇ ಸಮಾಜ ಆಗಲಿ ಯಾವುದೇ ಸಂಘಟನೆ ಆಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದೆ ಶಾಂತಿ-ಸುವ್ಯವಸ್ಥೆ ಕಾಪಾಡಲು ಬೇಕಾದ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ. ಯಾವುದೇ ಭೇದಭಾವವಿಲ್ಲದೆ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಇದೇನಾ ನೀವು ಆಡಳಿತ ನಡೆಸುವ ರೀತಿ, ಸಿಎಂ ಬೊಮ್ಮಾಯಿ ವಿರುದ್ಧ ಎಚ್‌ಡಿಕೆ ಕೆಂಡ
ಆಝಾನ್ ಗೆ ಡೆಸಿಬಲ್ ಪ್ರಮಾಣ ನಿಗದಿ ಮಾಡಿದೆ..
ಆಝಾನ್ ಕುರಿತು ಈಗಾಗಲೇ ಹೈಕೋರ್ಟ್ ಆದೇಶವಿದೆ. ಯಾಕೆ ಕೋರ್ಟ್ ತೀರ್ಪು ಅನುಷ್ಠಾನಕ್ಕೆ ಬಂದಿಲ್ಲ ಎಂದು ಪ್ರಶ್ನಿಸಿದೆ...ಆಝಾನ್ ಗೆ ಡೆಸಿಬಲ್ ಪ್ರಮಾಣ ನಿಗದಿಗೊಳಿಸಿದೆ. ಡೆಸಿಬಲ್ ತಪಾಸಣೆ ಮಾಡುವ ಯಂತ್ರ ಖರೀದಿ ಮಾಡುವ ಹಾಗು ಹೈಕೋರ್ಟ್ ಆದೇಶಗಳನ್ನು ಹಂತಹಂತವಾಗಿ ಅನುಷ್ಠಾನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ...ಇದು ಒತ್ತಾಯದಿಂದ ಮಾಡುವ ಕೆಲಸವಲ್ಲ..ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಮಾಡಬೇಕಿರುವ ಕೆಲಸ ಇದು..ಹಲವಾರು ಸಂಘಟನೆಗಳನ್ನು ಪೊಲೀಸ್ ಠಾಣೆಯಿಂದ ಹಿಡಿದು ಜಿಲ್ಲಾ ಮಟ್ಟದವರೆಗೆ ಈಗಾಗಲೇ ಸಭೆಗಳನ್ನು ಮಾಡಿದ್ದೇವೆ ಮುಂದೆಯೂ ಸಭೆಗಳನ್ನು ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದರು...
ಕುಮಾರಸ್ವಾಮಿಯ ಆರೋಪಗಳು ಆಧಾರ ರಹಿತವಾದ್ದು..
ಬೊಮ್ಮಾಯಿ ಮತ್ತು ರಾಜ್ಯ ಸರ್ಕಾರ RSD ನ ರಿಮೋಟ್ ಕಂಟ್ರೋಲ್ ನಲ್ಲಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಬಸವರಾಜ್ ಬೊಮ್ಮಾಯಿ..ಆಧಾರ ರಹಿತ ಆರೋಪಗಳ ಬಗ್ಗೆ ನಾನು ಉತ್ತರ ಕೊಡುವುದಿಲ್ಲ ಎಂದರು...
ಅವರಿಗೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಕ್ಕಿದೆ ಆದರೆ ಸರ್ಕಾರ ಆರ್.ಎಸ್.ಎಸ್ ರಿಮೋಟ್ ಕಂಟ್ರೋಲ್ ಎನ್ನುವ ಆಧಾರ ರಹಿತ ಆರೋಪಗಳ ಬಗ್ಗೆ ನಾನು ಉತ್ತರ ಕೊಡುವುದಿಲ್ಲ ಎಂದರು..ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ... ಕರ್ನಾಟಕ ಜನತೆಯ ಆಶೀರ್ವಾದ ಇದೆ. ಇದರ ಒಂದು ವಿಚಾರವನ್ನ ಹಿಡಿದುಕೊಂಡು ನಾವು ಆಡಳಿತ ಮಾಡುತ್ತಿದ್ದೇವೆ ಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ಆಡಳಿತ ಕೊಡುವ ಸಂಪೂರ್ಣ ವಿಶ್ವಾಸವಿದೆ ಎಂದರು...
ತೆಲಂಗಾಣ ಸಚಿವ ಕೆಟಿ ರಾಮ್ ರಾವ್ ಟ್ವೀಟ್ ಹಾಸ್ಯಾಸ್ಪದ
ತೆಲಂಗಾಣ ಸಚಿವ ಕೆಟಿ ರಾಮರಾವ್ ಟ್ವೀಟ್ ಹಾಸ್ಯಾಸ್ಪದವಾಗಿದೆ.ದೇಶ ಮಾತ್ರವಲ್ಲ ಇಡೀ ಜಗತ್ತಿನ ಜನ ಬೆಂಗಳೂರಿಗೆ ಬರುತ್ತಿದ್ದಾರೆ, ಅತಿಹೆಚ್ಚು ಸ್ಟಾರ್ಟ್ ಅಪ್ ಗಳು ಬೆಂಗಳೂರಿನಲ್ಲಿವೆ. ಅತಿ ಹೆಚ್ಚು ವಿದೇಶಿ ಹೂಡಿಕೆ ಬೆಂಗಳೂರಿನಲ್ಲಿದೆ ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳ ಆರ್ಥಿಕತೆ ಹೆಚ್ಚಿನ ಮಟ್ಟದಲ್ಲಿದೆ ಹಾಗಾಗಿ ಬೆಂಗಳೂರನ್ನು ಹೈದರಾಬಾದ್ ಗೆ ಕರ್ನಾಟಕವನ್ನು ತೆಲಂಗಾಣಕ್ಕೆ ಹೋಲಿಸುವುದು ಹಾಸ್ಯಾಸ್ಪದ ಎಂದು ಹೈದರಾಬಾದ್ ಗೆ ಉದ್ಯಮಗಳನ್ನು ಆಹ್ವಾನಿಸಿ ತೆಲಂಗಾಣ ಸಚಿವ ರಾಮರಾವ್ ಟ್ವೀಟ್ ಮಾಡಿರುವುದಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ...