ಸುಳ್ಳಿನ ಸುಳಿಯಲ್ಲಿ ಸಿದ್ದರಾಮಯ್ಯ: ಸಿಎಂ ಬೊಮ್ಮಾಯಿ ಲೇವಡಿ

By Kannadaprabha News  |  First Published Feb 27, 2023, 2:22 PM IST

ಅತಿಯಾದ ಸುಳ್ಳು ಹೇಳಿದ ಮೇಲೆ ಸಿದ್ದರಾಮಯ್ಯ ಅವರಿಗೆ ಸುಳ್ಳೆ ಸತ್ಯ ಎಂದು ನಂಬಿಕೆ ಬರಲಾರಂಭಿಸಿದೆ. ಹೀಗಾಗಿ ಸುಳ್ಳಿನ ಸುಳಿಯಲ್ಲಿ ಅವರೇ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು. 


ಹುಬ್ಬಳ್ಳಿ (ಫೆ.27): ಅತಿಯಾದ ಸುಳ್ಳು ಹೇಳಿದ ಮೇಲೆ ಸಿದ್ದರಾಮಯ್ಯ ಅವರಿಗೆ ಸುಳ್ಳೆ ಸತ್ಯ ಎಂದು ನಂಬಿಕೆ ಬರಲಾರಂಭಿಸಿದೆ. ಹೀಗಾಗಿ ಸುಳ್ಳಿನ ಸುಳಿಯಲ್ಲಿ ಅವರೇ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದ ಬಗ್ಗೆ ಭ್ರಷ್ಟಾಚಾರ ಆರೋಪ ವಿಚಾರದಲ್ಲಿ ಸಿದ್ದರಾಮಯ್ಯ ತಾವೇ ಸುಳ್ಳಿನ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯ ಹೇಳಿರುವ ಸುಳ್ಳು ಒಂದೊಂದಾಗಿ ಹೊರಗೆ ಬರುತ್ತಿವೆ. ಅವರು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಭರವಸೆ ಕುರಿತು ಈಗಾಗಲೇ ವಿಧಾನಸಭೆ ಅಧಿವೇಶನದಲ್ಲಿಯೇ ಹೇಳಿದ್ದೇನೆ. 

ಇನ್ನೊಬ್ಬರ ಬಗ್ಗೆ ಸಾವಿರ ಬಾರಿ ಸುಳ್ಳು ಹೇಳಿದರೆ ಅದು ಸತ್ಯವಾಗುತ್ತದೆ ಎನ್ನುವ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಸತ್ಯ ಸತ್ಯವೇ, ಸುಳ್ಳು ಸುಳ್ಳೆ. ಅವರು ಹೇಳಿದ ತಕ್ಷಣ ಸುಳ್ಳು ಸತ್ಯವಾಗಲ್ಲ, ಸತ್ಯ ಸುಳ್ಳಾಗಲ್ಲ ಎಂದು ಕಿಡಿಕಾರಿದರು. ಮಠಾಧೀಶರು ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಠಾಧೀಶರು ಚುನಾವಣಾ ಅಖಾಡಕ್ಕಿಳಿಯುವ ಬಗ್ಗೆ ಇದುವರೆಗೂ ಯಾವುದೇ ಮರಾಧೀಶರು ನನ್ನನ್ನು ಸಂಪರ್ಕಿಸಿಲ್ಲ, ಚರ್ಚೆಯೂ ಮಾಡಿಲ್ಲ. ಹೀಗಾಗಿ, ಮಠಾಧೀಶರು ಚುನಾವಣಾ ಕಣಕ್ಕಿಳಿಯುವ ಬಗ್ಗೆ ಏನೂ ಹೇಳಲು ಆಗುವುದಿಲ್ಲ ಎಂದರು.

Tap to resize

Latest Videos

ಮೋದಿ, ಶಾ ಬಂದಾಗಲೆಲ್ಲಾ ರಾಜ್ಯದಲ್ಲಿ ಅಭಿವೃದ್ಧಿ ಯೋಜನೆ ಉದ್ಘಾಟನೆ: ಸಿಎಂ ಬೊಮ್ಮಾಯಿ

ಅರ್ಕಾವತಿ ಹಗರಣದ ಕುರಿತು ಈಗಾಗಲೇ ವರದಿ ಬಂದಿದೆ. ಮುಂದೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ಆದರೆ, ಸಿಬಿಐ ತನಿಖೆ ಬಗ್ಗೆ ಯಾರು ಹೇಳಿದ್ದಾರೆ ಗೊತ್ತಿಲ್ಲ. ನಾವು ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಸಕ್ರಿಯ ರಾಜಕಾರಣದಿಂದ ದೂರವಾಗಿಲ್ಲ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯನ್ನು ಅವರು ಮತ್ತಷ್ಟುಬಲ ಪಡಿಸಲಿದ್ದಾರೆ ಎಂದರು.

ಸೋನಿಯಾಗಾಂಧಿ ರಾಜಕೀಯ ನಿವೃತ್ತಿ ಅವರ ವೈಯಕ್ತಿಕ ವಿಚಾರವಾಗಿದೆ. ಈ ಬಗ್ಗೆ ನಾನು ಮಾತನಾಡುವುದಿಲ್ಲ. 7ನೇ ವೇತನ ಆಯೋಗದ ವರದಿ ಜಾರಿಗಾಗಿ ರಾಜ್ಯ ಸರ್ಕಾರಿ ನೌಕರರ ಮುಷ್ಕರದ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ನಾನು ಈಗಾಗಲೇ ನೌಕರರ ಜತೆಗೆ ಚರ್ಚೆ ಮಾಡಿದ್ದೇನೆ. ಅಲ್ಲದೇ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದರು.

ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬರೋ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

ಸೋಮವಾರ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ, ವಿವಿಧ ಕಾಮಗಾರಿಗಳಿಗೆ ಚಾಲನೆ, ಬೆಳಗಾವಿಯಲ್ಲಿ ರೋಡ್‌ ಶೋ, ಕಿಸಾನ್‌ ಸಮ್ಮಾನ್‌ ಕಾರ್ಡ್‌ ಬಿಡುಗಡೆ ಮಾಡಲಿದ್ದಾರೆ ಎಂದರು. ಕೇಂದ್ರ ಸಚಿವ ಅಮಿತ್‌ ಶಾ, ಕರ್ನಾಟಕದ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಬೆಂಗಳೂರಿನಲ್ಲಿ ಮನೆ ಮಾಡುವ ಕುರಿತು ಪ್ರತಿಕ್ರಿಯಿಸಿ, ಇಬ್ಬರೂ ನಾಯಕರು ರಾಜ್ಯದಲ್ಲಿ ಇದ್ದು ಮಾರ್ಗದರ್ಶನ ಮಾಡಲಿದ್ದಾರೆ ಎಂದರು.

click me!