
ಬೆಂಗಳೂರು(ಫೆ.15): ಸರ್ಕಾರ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ ಕುರಿತಂತೆ ಕೈಗೊಂಡಿರುವ ಕಾರ್ಯಕ್ರಮಗಳ ಸ್ಪಷ್ಟಚಿತ್ರಣವನ್ನು ರಾಜ್ಯಪಾಲರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ.
ಸೋಮವಾರ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡಿದ ರಾಜ್ಯಪಾಲರ(Governor) ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವರ್ಷದ ಆರಂಭದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಕಳೆದ ಒಂದು ವರ್ಷದಲ್ಲಿ ಆಗಿರುವ ಕೋವಿಡ್(Covid-19) ಮತ್ತು ಪ್ರವಾಹ ನಿರ್ವಹಣೆ ಕುರಿತಂತೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯಾಗಿರುವ ಬಗ್ಗೆ ಸ್ಪಷ್ಟಚಿತ್ರಣ ನೀಡಿದ್ದಾರೆ. ಹಲವಾರು ಇಲಾಖೆಗಳ ಸಾಧನೆಯನ್ನೂ ಬಿಂಬಿಸುವುದಿದೆ ಎಂದು ಪ್ರತಿಪಾದಿಸಿದರು.
Karnataka Assembly Session: ಜಂಟಿ ಅಧಿವೇಶನ ಉದ್ದೇಶಿಸಿ ಥಾವರ್‌ಚಂದ್ ಗೆಹಲೋತ್ ಭಾಷಣ!
ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರು(Siddaramaiah) ರಾಜ್ಯಪಾಲರಿಂದ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸದನದಲ್ಲಿ ಉತ್ತರ ನೀಡುವಾಗ ಇನ್ನಷ್ಟು ಮಾಹಿತಿಯನ್ನು ನೀಡಲಾಗುವುದು. ವಿರೋಧ ಪಕ್ಷದವರಿಗೆ ಅಧಿವೇಶನದಲ್ಲಿಯೇ ಉತ್ತರ ನೀಡಲಾಗುವುದು. ಯಾವುದು ಸತ್ಯ ಯಾವುದು ಸುಳ್ಳು ಎನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.
ಗೌರ್ನರ್ ಭಾಷಣ ಬರೀ ಸುಳ್ಳು: ಸಿದ್ದು
‘ರಾಜ್ಯ ಸರ್ಕಾರ(Government of Karnataka) ರಾಜ್ಯಪಾಲರಿಂದ ಹಲವಾರು ಸುಳ್ಳು ಹೇಳಿಸಿ, ನಾಡಿನ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ. ಡಬ್ಬಲ್ ಎಂಜಿನ್ ಸರ್ಕಾರ ನಾಡಿಗೆ ಡಬಲ್ ದ್ರೋಹ ಎಸಗಿದೆ. ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ಹಿಂದಿನ ವರ್ಷದ ಸಾಧನೆಯಾಗಲಿ, ಮುಂದಿನ ವರ್ಷದ ಮುನ್ನೋಟವಾಗಲಿ ಯಾವುದೂ ಇಲ್ಲ. ಇದರಿಂದ ಇದು ಗೊತ್ತುಗುರಿ ಇಲ್ಲದ ಸರ್ಕಾರ ಎಂಬುದು ಸಾಬೀತಾಗಿದೆ.’ ಇದು, ಸೋಮವಾರ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ(Session) ರಾಜ್ಯಪಾಲರು ಮಾಡಿದ ಭಾಷಣವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ ಪರಿಯಿದು.
ಮೊದಲ ದಿನದ ಅಧಿವೇಶದ ಬಳಿಕ ವಿಧಾನಸೌಧದಲ್ಲಿ(Vidhanasoudha) ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕನ್ನಡಿಗರನ್ನು ಸಾಲದ ಪ್ರಪಾತಕ್ಕೆ ತಳ್ಳಿದ್ದರ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವೇ ಇಲ್ಲ. ರಾಜ್ಯದಲ್ಲಿ ನಿರುದ್ಯೋಗ ತಾಂಡವ ಆಡುತ್ತಿದೆ. ಆದರೆ, ನಿರುದ್ಯೋಗವನ್ನು ಪರಿಹರಿಸಲು ಏನನ್ನೂ ಹೇಳಿಲ್ಲ. ಕಲ್ಯಾಣ ಕರ್ನಾಟಕ ಮಂಡಳಿಗೆ ಸಂಬಂಧ ಪಟ್ಟಹಾಗೆ ಹೆಸರು ಬದಲಾಯಿಸಿ ಕಛೇರಿ ಸ್ಥಳಾಂತರಿಸಿದ್ದನ್ನೇ ಸಾಧನೆ ಎಂದು ಹೇಳಿ ಕೊಂಡಿದೆ. ಪತ್ರಕರ್ತರಿಗೆ ಮಾನ್ಯತೆ ಪತ್ರ ಹಾಗೂ ಬಸ್ ಪಾಸ್ ಸೌಲಭ್ಯವನ್ನು ಈ ಹಿಂದಿನಿಂದಲೂ ಒದಗಿಸಲಾಗುತ್ತಿದೆ. ಆದರೂ, ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಇದು ತನ್ನ ಸಾಧನೆ ಎಂದು ಹೇಳಿಕೊಂಡಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ.
ಇಂದಿನಿಂದ 10 ದಿನ ಸದನ ಕದನ: ಹಿಜಾಬ್-ಕೇಸರಿ ಶಾಲು ವಿವಾದ ಬಗ್ಗೆ ಜಟಾಪಟಿ ನಿರೀಕ್ಷೆ!
ಇಷ್ಟು ಕೆಟ್ಟ ಭಾಷಣ ಎಂದೂ ಕೇಳಿರಲಿಲ್ಲ
ನಾನು ನನ್ನ ರಾಜಕೀಯ(Politics) ಅನುಭವದ ಮೇಲೆ ಹೇಳುವುದಾದರೆ ರಾಜ್ಯಪಾಲರ ಇಷ್ಟೊಂದು ಕೆಟ್ಟದಾದ ಭಾಷಣವನ್ನು ಎಂದೂ ಕೇಳಿರಲಿಲ್ಲ. ಏನನ್ನೂ ಮಾಡದ ಸರ್ಕಾರವನ್ನು ಆರಿಸಿ ಕಳುಹಿಸಿದ್ದು ಈ ನಾಡಿನ ದೌರ್ಭಾಗ್ಯ ಎಂಬುದು ರಾಜ್ಯದ ಜನರಿಗೆ ಈಗ ಅರ್ಥವಾಗಿದೆ ಅಂತ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದು ಕಟ್ ಅಂಡ್ ಪೇಸ್ಟ್ ಭಾಷಣ
ರಾಜ್ಯಪಾಲರ ಭಾಷಣ ಕಟ್ ಅಂಡ್ ಪೇಸ್ಟ್. ಸರ್ಕಾರದ ಅಧಿಕಾರಿಗಳು ಕೊಟ್ಟಿದ್ದನ್ನು ರಾಜ್ಯಪಾಲರು ಓದಿದ್ದಾರೆ. ನೀರಾವರಿ ಯೋಜನೆಗಳು ಸೇರಿದಂತೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಭಾಷಣದಲ್ಲಿ ಏನೂ ಇಲ್ಲ. ಇದರಿಂದ ರಾಜ್ಯದ ಜನತೆಗೆ ನಿರಾಶೆಯಾಗಿದೆ ಅಂತ ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.