ದಿಲ್ಲಿಯಿಂದ ಬರುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳಿಗೆ ಸ್ಪಷ್ಟ ಸಂದೇಶ ಕೊಟ್ಟ ಸಿಎಂ

By Suvarna NewsFirst Published Jul 31, 2021, 6:07 PM IST
Highlights

* ಕರ್ನಾಟಕ ಸಂಪುಟ ವಿಸ್ತರಣೆಯ ಸವಾಲು
* ದೆಹಲಿ ಪ್ರವಾಸ ಮುಗಿಸಿ ವಾಪಸ್ ಆದ ಸಿಎಂ ಬಸವರಾಜ ಬೊಮ್ಮಾಯಿ
* ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ
 

ಬೆಂಗಳೂರು, (ಜು.31): ಬಸವರಾಜ ಬೊಮ್ಮಾಯಿ  ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅವರಿಗೆ ಸಂಪುಟ ವಿಸ್ತರಣೆಯ ಸವಾಲು ಎದುರಾಗಿದೆ. ಶಾಸಕರು ಸಚಿವ ಸ್ಥಾನಕ್ಕೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

"

ಆದ್ರೆ, ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಇನ್ನೂ ಯಾವುದೇ ಸೂಚನೆ ಕೊಟ್ಟಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಹೋಗಿ ಬಂದರೂ ಸಹ ಸಂಪುಟದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ.

ಬೊಮ್ಮಾಯಿ ಸಂಪುಟದ ಬಿಗ್ ಎಕ್ಸ್ಲೂಸಿವ್ : ಹಳಬರಿಗೆಲ್ಲಾ ಮಂತ್ರಿಗಿರಿಯಿಂದ ಕೊಕ್

ಇನ್ನು ಇಂದು (ಶನಿವಾರ) ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಿಎಂ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿ, ಸಂಪುಟ ರಚನೆಗೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಮತ್ತೊಮ್ಮೆ ಭೇಟಿಯಾಗಿ ಚರ್ಚಿಸುತ್ತೇನೆ  ಎಂದು ಸ್ಪಷ್ಟಪಡಿಸಿದರು.

. ಹೈಕಮಾಂಡ್​ನಿಂದ ಸಂದೇಶ ಬಂದ ಬಳಿಕ ಮತ್ತೆ ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಚರ್ಚಿಸಿ ರಾಜ್ಯದ ಸಚಿವ ಸಂಪುಟವನ್ನು ರಚಿಸುತ್ತೇನೆ ಎಂದು ಹೇಳುವ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ  ಸ್ಪಷ್ಟ ಸಂದೇಶ ರವಾನಿಸಿದರು

ಹೈಕಮಾಂಡ್ ಲೆಕ್ಕಾಚಾರ
ಬಹುತೇಕ ಹಿರಿಯ ನಾಯಕರಿಗೆ ಕೋಕ್ ನೀಡಲು ಚಿಂತನೆ ನಡೆಸಿರುವ ಬಿಜೆಪಿ ಹೈಕಮಾಂಡ್, ಹೊಸ ಸರ್ಕಾರದಲ್ಲಿ ಯುವಕರ ಪಡೆಯನ್ನು ನೆಲೆಗೊಳಿಸಲು ಸಜ್ಜಾಗಿದೆ. ಹೊಸ ಸರ್ಕಾರದಲ್ಲಿ ಯುವಕರ ಪಡೆಯ ಮೂಲಕ ಹಿಂದುತ್ವದ ಅಜೆಂಡಾ ಮುಂದಿಟ್ಟುಕೊಂಡು ಮುಂದಿನ ಚುನಾವಣೆಗೆ ಹೋದರೆ ಗೆಲುವು ಖಚಿತ ಎಂಬುದು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರವಾಗಿದೆ.

ಪಕ್ಷ ಹಾಗೂ ಸರ್ಕಾರದಲ್ಲಿ ಅಧಿಕಾರ ಅನುಭವಿಸಿರುವ ಹಿರಿಯ ನಾಯಕರಿಗೆ ಗೇಟ್ ಪಾಸ್ ಕೊಟ್ಟು ಯುವಕರಿಗೆ ಸಂಪುಟದಲ್ಲಿ ಅವಕಾಶ ನೀಡುವ ಲೆಕ್ಕಾಚಾರವನ್ನು ಹೈಕಮಾಂಡ್ ಹಾಕಿದ್ದು, ಅಂತಿಮವಾಗಿ ಯಾರಿಗೆ ಸಚಿವ ಸ್ಥಾನ ಸಿಗುತ್ತೋ ಎನ್ನುವುದನ್ನು ಕಾದುನೋಡಬೇಕಿದೆ.
 

click me!