ಬೇರೆ ಪಕ್ಷಗಳಲ್ಲಿಯೂ ಸ್ನೇಹಿತರಿದ್ದಾರೆ, ರಾಜ್ಯಸಭೆ ಚುನಾವಣೆ ಗೆಲ್ತೇವೆ: ಸಿಎಂ ಬೊಮ್ಮಾಯಿ

Published : Jun 01, 2022, 05:59 AM IST
ಬೇರೆ ಪಕ್ಷಗಳಲ್ಲಿಯೂ ಸ್ನೇಹಿತರಿದ್ದಾರೆ, ರಾಜ್ಯಸಭೆ ಚುನಾವಣೆ ಗೆಲ್ತೇವೆ: ಸಿಎಂ ಬೊಮ್ಮಾಯಿ

ಸಾರಾಂಶ

*  ಬಿಜೆಪಿ ಮತ್ತು ಜೆಡಿಎಸ್‌ ಬಳಿ ಸಮಾನ ಮತಗಳಿವೆ, ಕಾಂಗ್ರೆಸ್‌ ಬಳಿ ಮಾತ್ರ ಕಡಿಮೆ ಇವೆ *  ಬಿಜೆಪಿ ಬಳಿ ದ್ವಿತೀಯ ಪ್ರಾಶಸ್ತ್ಯ ಮತಗಳೂ ಇವೆ *  ಶಾಲಾ ಮಕ್ಕಳಿಗೆ ತಕ್ಷಣ ಪಠ್ಯಪುಸ್ತಕ ಪೂರೈಕೆ ಮಾಡುವಂತೆ ಆದೇಶ ಮಾಡಿದ್ದೇನೆ 

ಮಣಿಪಾಲ(ಜೂ.01): ಬೇರೆ ಪಕ್ಷಗಳಲ್ಲಿಯೂ ನಮಗೆ ಬಹಳ ಮಂದಿ ಗೆಳೆಯರಿದ್ದಾರೆ, ಆದ್ದರಿಂದ ರಾಜ್ಯದಲ್ಲಿ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಸರಳವಾಗಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್‌ ಬಳಿ ಸಮಾನ ಮತಗಳಿವೆ, ಕಾಂಗ್ರೆಸ್‌ ಬಳಿ ಮಾತ್ರ ಕಡಿಮೆ ಇವೆ. ಜೊತೆಗೆ ಬಿಜೆಪಿ ಬಳಿ ದ್ವಿತೀಯ ಪ್ರಾಶಸ್ತ್ಯ ಮತಗಳೂ ಇವೆ. ಅವುಗಳನ್ನು ಲೆಕ್ಕ ಹಾಕಿದರೇ ಬಿಜೆಪಿ ಮೇಲ್ನೋಟಕ್ಕೆ ಸರಳ ಬಹುಮತ ಪಡೆಯಲಿದೆ ಎಂದರು.

ನಾಡಗೀತೆ ತಿರುಚಿದ ಬಗ್ಗೆ ಪತ್ರ ಗಂಭೀರವಾಗಿ ಪರಿಗಣನೆ: ಸಿಎಂ

ಅಲ್ಲದೇ ಕಾಂಗ್ರೆಸ್‌ ಪಕ್ಷದಲ್ಲಿಯೂ ಜೆಡಿಎಸ್‌ನಲ್ಲಿಯೂ ನಮಗೆ ಬಹಳ ಮಂದಿ ಗೆಳೆಯರಿದ್ದಾರೆ, ಚುನಾವಣೆ ನಡೆಯಲಿದೆ, ಅಷ್ಟರಲ್ಲಿ ಏನೇನು ಬೆಳವಣಿಗೆಳಾಗುತ್ತೋ ನೋಡೋಣ. ಬೇರೆ ಪಕ್ಷದ ಗೆಳೆಯರೊಂದಿಗೆ ಇದುವರೆಗೆ ಯಾವುದೇ ಮಾತುಕತೆ ನಡೆಸಿಲ್ಲ, ನಾಮಪತ್ರ ಸಲ್ಲಿಸಿ ನೇರವಾಗಿ ಇಲ್ಲಿಗೆ ಬಂದಿದ್ದೇನೆ ಎಂದರು.

ಶಾಲಾ ಮಕ್ಕಳಿಗೆ ತಕ್ಷಣ ಪಠ್ಯಪುಸ್ತಕಗಳನ್ನು ಪೂರೈಕೆ ಮಾಡುವಂತೆ ಇವತ್ತೇ ಆದೇಶ ಮಾಡಿದ್ದೇನೆ ಎಂದ ಸಿಎಂ, ಹೆಚ್ಚುತ್ತಿರುವ ಲವ್‌ ಜಿಹಾದ್‌ ಪ್ರಕರಣಗಳ ಬಗ್ಗೆ ಪೊಲೀಸ್‌ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ