RSS ಟೀಕಿಸುವ ಕಾಂಗ್ರೆಸ್ಸಿಗೆ ಅಧಿಕಾರ ಸಿಗಲ್ಲ: ಸಿಎಂ ಬೊಮ್ಮಾಯಿ

By Govindaraj SFirst Published Jun 6, 2022, 3:10 AM IST
Highlights

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ರಾಜಕೀಯ ಲಾಭಕ್ಕಾಗಿ ಟೀಕೆ ಮಾಡುತ್ತಾ ಬಂದ ಕಾಂಗ್ರೆಸ್‌ ದೇಶಾದ್ಯಂತ ಅಧಿಕಾರ ಕಳೆದುಕೊಂಡಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದಲ್ಲೂ ಅದನ್ನೇ ಮುಂದುವರಿಸಿದ್ದು, ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಅದೇ ಗತಿ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿ (ಜೂ.06): ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ರಾಜಕೀಯ ಲಾಭಕ್ಕಾಗಿ ಟೀಕೆ ಮಾಡುತ್ತಾ ಬಂದ ಕಾಂಗ್ರೆಸ್‌ ದೇಶಾದ್ಯಂತ ಅಧಿಕಾರ ಕಳೆದುಕೊಂಡಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದಲ್ಲೂ ಅದನ್ನೇ ಮುಂದುವರಿಸಿದ್ದು, ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಅದೇ ಗತಿ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಕಳೆದ 75 ವರ್ಷದಿಂದ ಆರೆಸ್ಸೆಸ್‌ ದೇಶಭಕ್ತಿ ಮತ್ತು ಜನರ ಸೇವೆ ಮಾಡಿಕೊಂಡು ಬಂದಿದೆ. ಪ್ರವಾಹ, ಭೂಕಂಪನ ಸೇರಿ ಅನಾಹುತಗಳಾದಾಗ, ಜನ ಸಂಕಷ್ಟದಲ್ಲಿದ್ದಾಗ, ಸರ್ಕಾರ ಗಮನ ಹರಿಸದಿದ್ದ ಸಂದರ್ಭದಲ್ಲಿ ಆರೆಸ್ಸೆಸ್‌ ಸ್ಪಂದಿಸಿದೆ ಎಂದು ಸುದ್ದಿಗಾರರೆದುರು ಸಮರ್ಥಿಸಿಕೊಂಡರು.

ಆರೆಸ್ಸೆಸ್‌ ವಿರುದ್ಧ ಕಾಂಗ್ರೆಸ್‌ ಮುಖಂಡರ ಟೀಕೆಗಳ ಬಗ್ಗೆ ನಗರದಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಂಘವನ್ನು ಟೀಕಿಸುತ್ತಿದ್ದಾರೆ. ಆದರೆ ಇದು ನಡೆಯುವುದಿಲ್ಲ. ಜನ ಎಲ್ಲವನ್ನೂ ಗಮನಿಸುತ್ತಿರುತ್ತಾರೆ. ಅವರಿಗೆ ಸತ್ಯ ತಿಳಿದಿರುತ್ತದೆ. ಕಾಂಗ್ರೆಸ್‌ ಇದೇ ಧೋರಣೆ ಮುಂದುವರಿಸಿದರೆ ಸೂಕ್ತ ಪಾಠವನ್ನು ಮತದಾರರು ಕಲಿಸಲಿದ್ದಾರೆ. ಪಠ್ಯ ಪುಸ್ತಕದ ವಿಷಯದಲ್ಲಿ ಶಿಕ್ಷಣ ಸಚಿವರು ಸೂಕ್ತ ಉತ್ತರ ನೀಡಿದ ಬಳಿಕವೂ ಕಾಂಗ್ರೆಸಿಗರು ರಾಜಕೀಯ ಮಾಡುತ್ತಿದ್ದಾರೆ ಎಂದರು. ಇನ್ನು ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್‌ ವೋಟಿಂಗ್‌ ವಿಚಾರದ ಕುರಿತು ಗೊತ್ತಾಗಬೇಕಾದರೆ ಜೂ.10ರ ವರೆಗೆ ಕಾಯಿರಿ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Latest Videos

Karnataka MLC Election; ಹೊರಟ್ಟಿಗೆ  ದಾಖಲೆಯ ಗೆಲುವು ತನ್ನಿ, ಶಿಕ್ಷಕರಲ್ಲಿ ಬೊಮ್ಮಾಯಿ ಮನವಿ!

ನಮ್ಮದು ಬಸವ ಪಥ ಸರ್ಕಾರ: ನಮ್ಮದು ಬಸವ ಪಥದ ಸರ್ಕಾರ, ಬಸವಣ್ಣನವರ ವಚನ ಸಾಹಿತ್ಯ ಉತ್ಕೃಷ್ಟವಾದದು. ನಾಡಿನ ಮಠಾಧೀಶರು, ಸ್ವಾಮೀಜಿಗಳ ಅಭಿಪ್ರಾಯ ಪಡೆದು ಬಸವಣ್ಣನ ನಿಜ ಇತಿಹಾಸವನ್ನು ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಹಿರಿಯೂರು ಹಾಗೂ ಹೊಸದುರ್ಗ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನಿಮಿತ್ತ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿರಿಯೂರು ತಾಲೂಕಿನ ದೇವರಕೊಟ್ಟ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಕಾರ್ಯ ಪೂರ್ಣಗೊಂಡಿರುವುದರಿಂದ ಸಮಿತಿ ವಿಸರ್ಜನೆ ಮಾಡಲಾಗಿದೆ. 

ಆರೆಸ್ಸೆಸ್‌ ಹೆಡಗೇವಾರ್‌ ಭಾಷಣ ಶಾಲಾ ಮಕ್ಕಳಿಗೆ ಯಾಕ್‌ ಬೇಕ್ರಿ?: ಸಿದ್ದರಾಮಯ್ಯ

ಯಾವುದೇ ಒತ್ತಡದಿಂದ ಈ ನಿರ್ಧಾರ ಕೈಗೊಂಡಿಲ್ಲ. ಹೊಸ ಸಮಿತಿ ರಚಿಸುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾಡಿನ ಬೇರೆ ಬೇರೆ ಮಠಾಧೀಶರು ಪತ್ರ ಬರೆದಿದ್ದಾರೆ. 2015 ರಲ್ಲಿ ರಚಿಸಿದ ಪ್ರೋ.ಬರಗೂರು ರಾಮಚಂದ್ರಪ್ಪ ಪರಿಷ್ಕರಣ ಸಮಿತಿ ಹಾಗೂ ಈಗಿನ ಸಮಿತಿ ರಚಿಸಿರುವ ಬಸವಣ್ಣ ಪಠ್ಯದಲ್ಲಿ ಒಂದು ವಾಕ್ಯದ ವ್ಯತ್ಯಾಸಯಿದೆ. ಸಾಣೇಹಳ್ಳಿ ಶ್ರೀಗಳು ಹೇಳಿದ ಲಿಂಗದೀಕ್ಷೇ ವಿಚಾರ ಎರಡು ಪಠ್ಯದಲ್ಲೂ ಹೇಳಲಾಗಿದೆ. ಬಸವಣ್ಣ ಪಠ್ಯದಲ್ಲಿ ಸಮಗ್ರ ಬದಲಾವಣೆ ತರಲಾಗುವುದು. ಹೆಗಡೆವಾರ್ ಪಠ್ಯ ಇರುವುದರಲ್ಲಿ ಯಾವುದೇ ತಪ್ಪಿಲ್ಲ.ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಪರಿಷ್ಕೃತ ಪಠ್ಯದ ಸಂಪುಟ ವಿತರಿಸಲಾಗುವುದು ಎಂದರು.

click me!