ಕಾಂಗ್ರೆಸ್ ಅಧಿಕಾರಕ್ಕೂ ಬರಲ್ಲ, ಅವರು ನೀಡಿದ ಭರವಸೆ ಅನುಷ್ಠಾನವೂ ಆಗುವುದಿಲ್ಲ. ಕೇವಲ ಜನರನ್ನು ಮರಳು ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಬೆಳಗಾವಿ (ಮಾ.16): ಕಾಂಗ್ರೆಸ್ ಅಧಿಕಾರಕ್ಕೂ ಬರಲ್ಲ, ಅವರು ನೀಡಿದ ಭರವಸೆ ಅನುಷ್ಠಾನವೂ ಆಗುವುದಿಲ್ಲ. ಕೇವಲ ಜನರನ್ನು ಮರಳು ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರು ಗ್ಯಾರಂಟಿ ಕಾರ್ಡ್ ವಿತರಿಸುತ್ತಿದ್ದಾರೆ. ಅವರದ್ದೇ ಅವರಿಗೆ ಗ್ಯಾರಂಟಿ ಇಲ್ಲ. ಇನ್ನು ಕಾರ್ಡ್ ತೆಗೆದುಕೊಂಡು ಉಪ್ಪಿನಕಾಯಿ ಹಾಕಬೇಕೇ ಎಂದು ಪ್ರಶ್ನಿಸಿದ ಅವರು, ಮಾ.20ರಂದು ರಾಹುಲ್ ಗಾಂಧಿ ಭೇಟಿ ನೀಡುತ್ತಿರುವುದರಿಂದ ಯಾವುದೇ ಪರಿಣಾಮ ಆಗದು. ರಾಹುಲ್ ಗಾಂಧಿ ಬರುತ್ತಾರೆ, ಹೋಗುತ್ತಾರೆ ಅಷ್ಟೆ ಎಂದು ಹೇಳಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ರಾಜ್ಯದಲ್ಲಿ ಬಿಜೆಪಿ ಸಂಘಟನೆ ಗಟ್ಟಿಯಾಗಿದೆ. ಪಕ್ಷದ ಕಾರ್ಯಕರ್ತರಲ್ಲಿ ಬಹಳಷ್ಟುಉತ್ಸಾಹವಿದೆ. ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂದರು. ಬಿಜೆಪಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ತೀವ್ರ ಪೈಪೋಟಿ ನಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಗೆಲ್ಲುವ ಪಕ್ಷಕ್ಕೆ ಪೈಪೋಟಿ ಇದ್ದೇ ಇರುತ್ತದೆ. ಈ ಪೈಪೋಟಿಯಲ್ಲಿ ಪಕ್ಷ, ಹೈಕಮಾಂಡ್ ಸಮರ್ಥವಾಗಿ ನಿಭಾಯಿಸಲಿದೆ. ಹೈಕಮಾಂಡ್ ಟಿಕೆಟ್ ನೀಡುವ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ. ಕೇಂದ್ರದ ಹಲವು ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಅಸ್ಸಾಂ, ಮಧ್ಯಪ್ರದೇಶ ಮುಖ್ಯಮಂತ್ರಿಗಳು ಅಲ್ಲದೆ ಹಲವು ಕೇಂದ್ರ ಸಚಿವರು ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಬೆಂ-ಮೈ ದಶಪಥ ಅಡಿಗಲ್ಲು ನಮ್ಮದೆ, ಉದ್ಘಾಟಿಸುತ್ತಿರೋದು ನಾವೇ: ಸಿಎಂ ಬೊಮ್ಮಾಯಿ
ದಿಲ್ಲಿ ಭೇಟಿ ಬಗ್ಗೆ ಸೋಮಣ್ಣ ಮಾಹಿತಿ ನೀಡಿದ್ದಾರೆ: ವಿ.ಸೋಮಣ್ಣ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ. ಈ ಕುರಿತು ಅವರೇ ನನಗೆ ಮಾಹಿತಿ ಕೊಟ್ಟಿದ್ದಾರೆ. ಅರುಣ ಸೋಮಣ್ಣ ಮತ್ತು ಬಿ.ವೈ.ವಿಜಯೇಂದ್ರ ಸೇರಿ ಯಾರಾರಯರು ಏನೇನು ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರತಿಕ್ರಿಯೆಗಳಿಗೆ ಅವರೇ ಜವಾಬ್ದಾರರು. ಅದಕ್ಕೆಲ್ಲಾ ನಾನು ಉತ್ತರ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜಹಂಸಗಡ ಕೋಟೆ ಆವರಣದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪೂಜೆ ಮಾಡಲು ಮಹಾರಾಷ್ಟ್ರ ಏಕೀಕರಣ ಸಮಿತಿ ನಾಯಕರಿಗೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದರು.
ಸಹಕಾರಿ ರಂಗದಲ್ಲಿ ಎಲ್ಲರೂ ಸಮಾನರು: ಸಹಕಾರಿ ರಂಗದಲ್ಲಿ ಎಲ್ಲರೂ ಸಮಾನರು. ಜನರಿಗೆ ಸಹಕಾರಿ ಸಾಹುಕಾರರು ಬೇಡ , ಸಹಕಾರಿಗಳು ಮಾತ್ರ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಕೆಎಲ್‌ಇ ಸಂಸ್ಥೆಯ ಜೆಎನ್ ಮೆಡಿಕಲ್ ಕಾಲೇಜು ಡಾ. ಜೀರಗೆ ಸಭಾಂಗಣದಲ್ಲಿ ಬುಧವಾರ ಮಹಾಂತೇಶ ಕವಟಗಿಮಠ ಸೌಹಾರ್ದ ಸಹಕಾರಿ ನೂತನ ಕಟ್ಟಡ ಮತ್ತು ಸಂಸ್ಥೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸರ್ಕಾರ ಮತ್ತು ಸಹಕಾರ ಇವೆರೆಡು ಪ್ರಗತಿ ಚಕ್ರದಂತಿದ್ದರೆ ಮಾತ್ರ ರಾಜ್ಯವನ್ನು ಮುನ್ನಡೆಸಲು ಹಾಗೂ ರಾಜ್ಯದ ಜನತೆಗೆ ಒಳಿತು ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಸೌಹಾರ್ದ ಬ್ಯಾಂಕುಗಳು ಚಿಂತನೆ ಮಾಡಬೇಕು ಎಂದರು.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ನಿರ್ಮಿಸಿದ್ದು ಯಾರೆಂದು ಜನ ನಿರ್ಧರಿಸಲಿ: ಸಿಎಂ ಬೊಮ್ಮಾಯಿ
ಎಸ್‌ಸಿ,ಎಸ್‌ಟಿ, ಓಬಿಸಿ, ಹೆಣ್ಣುಮಕ್ಕಳಿಗೆ, ರೈತರಿಗೆ,ಸ್ವ ಸಹಾಯ ಸಂಘಗಳಿಗೆ ಅನೇಕ ಯೋಜನೆಗಳನ್ನು ಸರ್ಕಾರ ಹಮ್ಮಿಕೊಂಡಿದೆ. ಈ ಯೋಜನೆಗಳಲ್ಲಿ ಆರ್ಥಿಕ ಸಹಾಯವನ್ನು ಸರ್ಕಾರ ಮತ್ತು ಬ್ಯಾಂಕುಗಳು ನೀಡುತ್ತವೆ. ಇಂತಹ ಸರ್ಕಾರದ ಯೋಜನೆಗಳಲ್ಲಿ ಇಂತಹ ಸಹಕಾರಿ ಬ್ಯಾಂಕುಗಳು ಕೈಜೋಡಿಸಬೇಕು. ಸರ್ಕಾರ ಸಹಕಾರಿ ರಂಗಕ್ಕೆ ಎಲ್ಲ ರೀತಿಯ ಬೆಂಬಲವನ್ನು ನೀಡುತ್ತಿದೆ. 31 ಲಕ್ಷ ರೈತರಿಗೆ ಶೂನ್ಯ ಬಡ್ಡಿ ಸಾಲವನ್ನು . 3 ರಿಂದ . 5 ಲಕ್ಷದವರೆಗೆ ಹೆಚ್ಚಿಸಿದೆ. 30 ಲಕ್ಷ ರೈತರು ನೋಂದಣಿ ಮಾಡಿರುವ ಯಶಸ್ವಿ ಯೋಜನೆ, ರೈತಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಈ ಎಲ್ಲ ಯೋಜನೆಗಳಲ್ಲಿ ಸಹಕಾರ ಬ್ಯಾಂಕುಗಳು ಸರ್ಕಾರದೊಂದಿಗೆ ಕೈಜೋಡಿಸಿದರೆ, . 4 ರಿಂದ . 5 ಕೋಟಿ ವರೆಗೆ ವಹಿವಾಟು ಸಾಧ್ಯವಾಗುತ್ತದೆ. ರಾಜ್ಯ ಸರ್ಕಾರವು ಸಹಕಾರ ಕ್ಷೇತ್ರದ ಡಿಜಟಲೀಕರಣವನ್ನು ಹಂತಹಂತವಾಗಿ ಮಾಡುತ್ತಿದೆ. ಎಲ್ಲ ರಂಗದಲ್ಲಿಯೂ ಸಹಕಾರ ರಂಗದಲ್ಲಿ ಕಾರ್ಯನಿರ್ವಹಿಸಬಹುದಾಗಿದೆ ಎಂದರು.