
ಮೈಸೂರು (ಮಾ.08): ಬಿಜೆಪಿ ಸರ್ಕಾರದ ವಿರುದ್ಧ ಮಾ.9ರಂದು ಕಾಂಗ್ರೆಸ್ ಕರೆ ನೀಡಿರುವ ಬಂದ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಎರಡು ಗಂಟೆ ಬಂದ್ ಅಂದ್ರೆ ಅರ್ಥ ಏನು? ಯಾವತ್ತಾದ್ರೂ, ಎಲ್ಲಾದ್ರೂ ಇಂಥ ಬಂದ್ ಬಗ್ಗೆ ಕೇಳಿದ್ದೀರಾ? ಇದನ್ನು ಬಂದ್ ಅನ್ನುತ್ತಾರಾ? ಎಂದು ಕಾಲೆಳೆದರು.
ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿ ಭ್ರಷ್ಟಾಚಾರ ಮಾಡಿದವರು, ಜೈಲಿಗೆ ಹೋಗಿ ಬಂದವರು ಇಂಥ ಬಂದ್‌ಗೆ ಕರೆ ಕೊಟ್ಟರೆ ಜನರ ಮುಂದೆ ನಡೆಯುತ್ತಾ? ಈ ಬಂದ್‌ಗೆ ಯಾವ ಬೆಲೆಯೂ ಇಲ್ಲ. ಅದು ಯಶಸ್ವಿಯೂ ಆಗಲ್ಲ. ಅಂದು ಪಿಯುಸಿಯದು ಸೇರಿ ಹಲವು ಪರೀಕ್ಷೆಗಳಿವೆ. ಬಂದ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಇದು ಅವರಿಗೆ ಅರ್ಥವಾಗುವುದಿಲ್ಲ. ಬಂದ್ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶವೇ ಇದೆ ಎಂದು ಹೇಳಿದರು.
ಸೊರಬದ ಸರದಾರನಾರು: ಬಂಗಾರಪ್ಪ ಕ್ಷೇತ್ರ ಸೊರಬ ಕ್ಷೇತ್ರದಲ್ಲಿ ಮತ್ತೆ ಮಕ್ಕಳ ಕದನ?
ಕಾಫಿ, ಟೀ ವೆಚ್ಚ ದಾಖಲೆ ಪರಿಶೀಲಿಸುವೆ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಫಿ, ಟೀ ವೆಚ್ಚದ ಆರೋಪ ಸಂಬಂಧ ದಾಖಲೆ ತರಿಸಿಕೊಂಡು ಪರಿಶೀಲಿಸುತ್ತೇನೆ. ಆರೋಪಗಳು ನಿಜವಾಗಿದ್ದರೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಏನು ಆರೋಪಗಳಿವೆ ಎಂಬುದು ಗೊತ್ತಿಲ್ಲ. ಮೊದಲು ದಾಖಲೆ ತರಿಸಿಕೊಂಡು ನೋಡುತ್ತೇನೆ. ಆರೋಪಗಳು ಸರಿ ಇದ್ದರೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸಿದ್ದು ಸರ್ಕಾರದಲ್ಲಿ ಸಚಿವರಿಗೆ ಟಾರ್ಗೆಟ್ ಫಿಕ್ಸಾಗಿತ್ತು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ತಮ್ಮ ಸಚಿವ ಸಂಪುಟ ಸಹೋದ್ಯಾಗಿಗಳಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯ ಸರ್ಕಾರವಿದ್ದಾಗ ಸಚಿವರಿಗೆಲ್ಲ ಟಾರ್ಗೆಟ್ ನೀಡಿತ್ತು. ಸಿದ್ದರಾಮಯ್ಯ ಎಷ್ಟೆಲ್ಲ ಟಾರ್ಗೆಟ್ ಕೊಟ್ಟಿದ್ದರು ಎಂಬುದನ್ನು ಎಂ.ಬಿ. ಪಾಟೀಲ, ಜಾಜ್‌ರ್, ಮಹಾದೇವಪ್ಪಗೆ ಕೇಳಬೇಕು. ಕಾಂಗ್ರೆಸ್‌ನವರು ಹಾಸಿಗೆ ದಿಂಬು ಬಿಟ್ಟಿಲ್ಲ. ಬಿಸ್ಕೇಟ್, ಕಾಫಿಯಲ್ಲೂ ಭ್ರಷ್ಟಾಚಾರ ನಡೆಸಿದ್ದಾರೆ. ಎಲ್ಲದರಲ್ಲೂ ಭ್ರಷ್ಟಾಚಾರ ನಡೆಸಿರುವ ಕಾಂಗ್ರೆಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.
ಆಪಾದನೆ ಮಾಡುವವರು ಮೊದಲು ತಾವು ಶುದ್ಧ ಹಸ್ತರಿರಬೇಕು. ಆಗ ಅದಕ್ಕೆ ಬೆಲೆ ಬರುತ್ತದೆ. ಕಾಂಗ್ರೆಸ್ ಭ್ರಷ್ಟಾಚಾರದ ಕೂಪ ಎಂದು ಟೀಕಿಸಿದರು. ಕಾಂಗ್ರೆಸ್‌ನಿಂದ ಮಾ. 9ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್‌ನ ಕೈ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿ ಜನ ಈ ಬಂದ್‌ಗೆ ಬೆಂಬಲ ನೀಡುವುದಿಲ್ಲ. ಆಪಾದನೆ ಮಾಡುವವರು ಮೊದಲು ಶುದ್ಧ ಹಸ್ತರಿರಬೇಕು. ಆಗ ಅದಕ್ಕೆ ಬೆಲೆ ಬರುತ್ತದೆ ಎಂದು ನುಡಿದರು. ಭ್ರಷ್ಟಾಚಾರದಲ್ಲಿ ತೊಡಗಿರುವವರು ಆಪಾದನೆ ಮಾಡಿದರೆ ನಡೆಯಲ್ಲ. ದೇಶದಲ್ಲಿ ಈಗಾಗಲೇ ಕಾಂಗ್ರೆಸ್ ಸಂಪೂರ್ಣ ಬಂದ್ ಆಗುತ್ತಿದೆ.
ಹಣ ಆಯ್ತು ವಿಧಾನಸೌಧ ಗೇಟ್ ಬಳಿ ಈಗ ಮದ್ಯದ ಬಾಟಲಿ ಪತ್ತೆ!
ಹೀಗಾಗಿ ರಾಜ್ಯ ಬಂದ್ ಮಾಡುವುದರಲ್ಲಿ ಅರ್ಥವಿಲ್ಲ. ಕಾಂಗ್ರೆಸ್ ಕರ್ಮಕಾಂಡ ಒಂದಾ ಎರಡಾ? ಬಂದ್ ಮೂಲಕ ತಮ್ಮ ರಾಜಕೀಯ ಭವಿಷ್ಯ ಬರೆದುಕೊಳ್ಳಬಹುದು ಎನ್ನುವುದು ಮೂರ್ಖತನ. ಚುನಾವಣಾ ಅಖಾಡವಿದೆ ಜನರೇ ತೀರ್ಮಾನ ಮಾಡುತ್ತಾರೆ ಎಂದರು. ಬೆಳಗಾವಿಯ ರಾಜಹಂಸಗಡದಲ್ಲಿ ಕಾಂಗ್ರೆಸ್‌ನಿಂದ ಶಿವಾಜಿ ಪ್ರತಿಮೆಯ ಮರು ಉದ್ಘಾಟನೆ ಪ್ರಕರಣಕ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಹಾಸ್ಯಾಸ್ಪದ ಸಂಗತಿ. ಸರ್ಕಾರವೇ ಬಂದು ಮೂರ್ತಿ ಉದ್ಘಾಟನೆ ಮಾಡಿದ ಮೇಲೆ ಈ ರೀತಿ ಮಾಡುವುದು ಸರಿಯಲ್ಲ. ಒಣ ಪ್ರತಿಷ್ಠೆಗಾಗಿ ಈ ರೀತಿ ಮಾಡಲಾಗುತ್ತಿದೆ. ರಾಷ್ಟ್ರನಾಯಕರ ಹೆಸರಲ್ಲಿ ಈ ರೀತಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ನುಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.