ಸಿದ್ದರಾಮಯ್ಯ ಲೋಕಾಯುಕ್ತ ಹಲ್ಲು ಕಿತ್ತಿದ್ದರು: ಸಿಎಂ ಬೊಮ್ಮಾಯಿ

By Kannadaprabha News  |  First Published Mar 8, 2023, 10:35 AM IST

‘ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೋಕಾಯುಕ್ತ ಬಂದ್‌ ಮಾಡಲಿಲ್ಲ. ಆದರೆ, ಲೋಕಾಯುಕ್ತದ ಎಲ್ಲಾ ಹಲ್ಲುಗಳನ್ನು ಕಿತ್ತಿದ್ದರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.


ಮೈಸೂರು (ಮಾ.08): ಸಿದ್ದರಾಮಯ್ಯ ಅವರು ಲೋಕಾಯುಕ್ತ ಬಂದ್‌ ಮಾಡಲಿಲ್ಲ. ಆದರೆ, ಲೋಕಾಯುಕ್ತದ ಎಲ್ಲಾ ಹಲ್ಲುಗಳನ್ನ ಕಿತ್ತಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಲೋಕಾಯುಕ್ತ ಬಂದ್‌ ಮಾಡಿದ್ದರೆ ರಾಜೀನಾಮೆ ಕೊಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಲ್ಲು ಕಿತ್ತ ಮೇಲೆ ಇದ್ದರೆ ಎಷ್ಟುಇಲ್ಲದಿದ್ದರೆ ಎಷ್ಟು? ಅವರ ಕಾಲದಲ್ಲಿ ಲೋಕಾಯುಕ್ತ ಇದಿದ್ದರೆ ಎಸಿಬಿ ಏಕೆ ಕೇಸ್‌ಗಳು ವರ್ಗಾವಣೆ ಆಗುತ್ತಿತ್ತು ಎಂದು ಪ್ರಶ್ನಿಸಿದರು.

ಶಾಸಕ ಮಾಡಾಳು ವಿರೂಪಾಕ್ಷ ಅವರಿಗೆ ಹೈಕೋರ್ಟ್‌ ಜಾಮೀನು ವಿಚಾರವು ನನ್ನ ಗಮನಕ್ಕೆ ಬಂದಿಲ್ಲ. ಹೈಕೋರ್ಟ್‌ ತೀರ್ಮಾನವನ್ನ ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದರು. ಬಿಜೆಪಿಯದ್ದು ಶೇ.40 ಸಂಕಲ್ಪ ಯಾತ್ರೆ ಎಂಬ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರದ್ದು ಶೇ.100 ರಷ್ಟುಪ್ರಜಾಧ್ವನಿ ಯಾತ್ರೆ ಎಂದು ನಾನು ಹೇಳುತ್ತೇನೆ. ಅವರಿಗೆ ಭ್ರಷ್ಟಚಾರದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇಲ್ಲ. ಭ್ರಷ್ಟಚಾರದಲ್ಲಿ ಅವರ ಕೈಗಳೇ ಕಪ್ಪಾಗಿವೆ ಎಂದು ತಿರುಗೇಟು ನೀಡಿದರು.

Tap to resize

Latest Videos

ಉಚಿತ ವಿದ್ಯುತ್‌ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆಗೆ ಬರಲಿ: ಡಿ.ಕೆ.ಶಿವಕುಮಾರ್‌

ಕಾಂಗ್ರೆಸ್‌ ಬಂದ್‌ಗೆ ವ್ಯಂಗ್ಯ: ಮಾ.9ರಂದು ಕಾಂಗ್ರೆಸ್‌ ಕರೆ ನೀಡಿರುವ ಬಂದ್‌ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ಎರೆಡು ಗಂಟೆ ಬಂದ್‌ ಅಂದ್ರೆ ಅರ್ಥ ಏನು ಎಂದು ಹೇಳುತ್ತ ಗಹಗಹಿಸಿ ನಕ್ಕ ಮುಖ್ಯಮಂತ್ರಿ, ಯಾವತ್ತಾದ್ರು ಇಂತಹ ಬಂದ್‌ ಬಗ್ಗೆ ಕೇಳಿದ್ದೀರಾ?, ಇದನ್ನ ಬಂದ್‌ ಅನ್ನುತ್ತಾರಾ?, ಭ್ರಷ್ಟಾಚಾರ ಮಾಡಿದವರು ಜೈಲಿಗೆ ಹೋಗಿ ಬಂದವರು, ಇವರು ಇಂತ ಬಂದ್‌ಗೆ ಕರೆ ಕೊಟ್ಟರೆ ಜನರ ಮುಂದೆ ನಡೆಯುತ್ತಾ. ಈ ಬಂದ್‌ಗೆ ಯಾವ ಬೆಲೆಯೂ ಇಲ್ಲ. ಅದೇ ದಿನ ಪರೀಕ್ಷೆಗಳಿವೆ. ಜನಸಾಮನ್ಯರಿಗೆ ತೊಂದರೆಯಾಗುತ್ತದೆ. ಇದು ಅವರಿಗೆ ಅರ್ಥವಾಗುವುದಿಲ್ಲ. ಬಂದ್‌ ಮಾಡಬಾರದು ಎಂದು ಸುಪ್ರೀಂಕೋರ್ಟ್‌ ಆದೇಶ ಇದೆ ಎಂದರು.

ಸಚಿವರ ಪಕ್ಷಾಂತರ ಪ್ರಶ್ನೆಗೆ ಸಿಎಂ ಸಿಡಿಮಿಡಿ: ಸಚಿವರ ಪಕ್ಷಾಂತರ ವದಂತಿ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಸಿಡಿಮಿಡಿಗೊಂಡ ಮುಖ್ಯಮಂತ್ರಿ, ಸುದ್ದಿಗಳಿಗೆಲ್ಲ ಉತ್ತರ ಕೊಡಲ್ಲ ರೀ ಎಂದರು. ಅಲ್ಲದೇ, ಸಚಿವರಾದ ವಿ. ಸೋಮಣ್ಣ, ನಾರಾಯಣಗೌಡ ಪಕ್ಷಾಂತರ ವಿಚಾರಕ್ಕೂ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ನಿರಾಕರಿಸಿದರು. ಈ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌. ನಾಗೇಂದ್ರ, ಮೇಯರ್‌ ಶಿವಕುಮಾರ್‌, ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಎಂ. ಶಿವಕುಮಾರ್‌, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್‌, ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ ಮೊದಲಾದವರು ಇದ್ದರು.

ಯಾವತ್ತಾದ್ರೂ 2 ಗಂಟೆ ಬಂದ್‌ ಬಗ್ಗೆ ಕೇಳಿದ್ದೀರಾ?: ಸಿಎಂ ಬೊಮ್ಮಾಯಿ

ಎಚ್‌2ಎನ್‌3 ವೈರಸ್‌ ಭೀತಿ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆ ತಗೋಬೇಕು ಅಂತಾ ಹೇಳಿದೆ. ಇಡೀ ರಾಜ್ಯಕ್ಕೆ ಗೈಡ್‌ಲೈನ್‌ ಅತೀ ಶೀಘ್ರದಲ್ಲೇ ಕೊಡಲಿದ್ದಾರೆ. ಅದಕ್ಕೆ ಔಷಧಿಗಳನ್ನು ಸ್ಟಾಕ್‌ ಮಾಡಿ ಜಿಲ್ಲಾ ಸ್ಟೋರೆಜ್‌ನಲ್ಲಿ ಇಡಲಿಕ್ಕೆ ಸೂಚನೆ ಕೊಟ್ಟಿದ್ದೀನಿ. ಕರ್ನಾಟಕದಲ್ಲಿ ಅಂತಹ ಅಲಾರಮಿಂಗ್‌ ಏನಿಲ್ಲ. ಎಚ್ಚರಿಕೆ ವಹಿಸಬೇಕು. ಮಾಸ್‌್ಕ ಕಡ್ಡಾಯ ಅಂತ ಏನಿಲ್ಲ. ಉನ್ನತ ಮಟ್ಟದ ಸಭೆ ನಡೆಸಿ ನಿರ್ಧಾರ ಮಾಡ್ತೀವಿ.
- ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

click me!